Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬೆಂಗಳೂರು ವಿವಿ: ಸಂವಹನ ವಿಭಾಗದ ಸಂಶೋಧನಾರ್ಥಿ ಈಶ್ವರ್ ರವರಿಗೆ ಡಾಕ್ಟರೇಟ್ ಪದವಿ ಪ್ರದಾನ

---Advertisement---

 

ಸಿರಿಗೇರಿ: ಫೆ.27: ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಸಿರಿಗೇರಿ ಗ್ರಾಮದ ನಿವಾಸಿ ದಿವಂಗತ ಸಿ. ತಿಪ್ಪಣ್ಣ ಮತ್ತು ದಿವಂಗತ ಶ್ರೀಮತಿ ಸಿ. ಹುಲಿಗೇಮ್ಮ ದಂಪತಿಯ ಹಿರಿಯ ಪುತ್ರ, ಬೆಂಗಳೂರು ವಿಶ್ವವಿದ್ಯಾಲಯ ಸಂವಹನ ವಿಭಾಗದ ಸಂಶೋಧನಾ ವಿದ್ಯಾರ್ಥಿ ಈಶ್ವರ್ ಅವರಿಗೆ ಪಿಎಚ್.ಡಿ ಪದವಿ ಲಭಿಸಿದೆ.

ಬೆಂಗಳೂರು ವಿಶ್ವವಿದ್ಯಾಲಯ ಸಂವಹನ ವಿಭಾಗದ ಹಿರಿಯ ಪ್ರಾಧ್ಯಾಪಕರು ಹಾಗೂ ಪ್ರಸ್ತುತ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ (ಕೋಲಾರ) ಕುಲಪತಿಗಳಾದ ಪ್ರೊ. ಬಿ.ಕೆ. ರವಿ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ “ಕನ್ನಡ ಚಿತ್ರರಂಗಕ್ಕೆ ಹಂಸಲೇಖ ರವರ ಕೊಡುಗೆ: ಒಂದು ಅಧ್ಯಯನ” ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.

ಹಿನ್ನೆಲೆ: ಈಶ್ವರ್ ಅವರು ಬೆಂಗಳೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಸ್ನಾತಕೋತ್ತರ ಪದವಿಯಲ್ಲಿ ವಿಶ್ವವಿದ್ಯಾಲಯಕ್ಕೆ 5ನೇ ರ್ಯಾಂಕ್ ನೊಂದಿಗೆ ಇದೇ ವಿಷಯದಲ್ಲಿ ಸಂಶೋಧನೆಯನ್ನು ಮಾಡಿದ ವಿಶೇಷ, ನಂತರದಲ್ಲಿ ರಾಜ್ಯದ ಪ್ರತಿಷ್ಠಿತ ವಿವಿಧ ದಿನಪತ್ರಿಕೆಗಳಲ್ಲಿ ಸತತ 7 ವರ್ಷಗಳ ಕಾಲ ಮಾಧ್ಯಮಗಳಲ್ಲಿ ಮತ್ತು ಕೆಲ ಡಿಜಿಟಲ್ ಮಾಧ್ಯಮಗಳಲ್ಲಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ. ಇದೇ ಸಂದರ್ಭದಲ್ಲಿ ಇವರ ಶೈಕ್ಷಣಿಕ ಸಾಧನೆಗಾಗಿ ಈಶ್ವರ್ ಅವರಿಗೆ ಕುಟುಂಬಸ್ಥರು, ಗುರು-ಹಿರಿಯರು, ಸ್ನೇಹಿತರು ಹಾಗೂ ಸಿರಿಗೇರಿ ಮತ್ತು ಸುತ್ತಮುತ್ತಲಿನ ಗ್ರಾಮಸ್ಥರು ಸೇರಿ ಶುಭ ಕೋರಿ ಅಭಿನಂದನೆ ಸಲ್ಲಿಸಿದ್ದಾರೆ.

ಈ ಸಂಶೋಧನಾ ಮಹಾಪ್ರಬಂಧವು ಕನ್ನಡ ಚಿತ್ರರಂಗದಲ್ಲಿ ಇದೊಂದು ಹೊಸ ಮೈಲುಗಲ್ಲು ಮತ್ತು ವಿಶಿಷ್ಟ ದಾಖಲೆಯಾಗಿದೆ. ಸಿನಿಮಾ ರಂಗದ ಹಲವಾರು ಪರಿಣಿತರು, ಸಿನಿಮಾ ಪತ್ರಕರ್ತರು, ಸಿನಿಮಾ ಕಲಾವಿದರು ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಸದಸ್ಯರು ಸೇರಿದಂತೆ ಕನ್ನಡ ಸಿನಿಮಾದ ವಿವಿಧ ಸಂಘಗಳು, ಹಂಸಲೇಖ ರವರು ಕನ್ನಡ ಚಿತ್ರರಂಗಕ್ಕೆ ನೀಡಿರುವ ಕೊಡುಗೆಯನ್ನು ಸಮಗ್ರವಾಗಿ ಸಂಶೋಧನೆ ನಡೆಸಿರುವ ಮಹಾಪ್ರಬಂಧದ ಕುರಿತು ಹರ್ಷ ವ್ಯಕ್ತಪಡಿಸಿ ಪ್ರಶಂಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...