Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬೆಂಗಳೂರು ವಿವಿಗೆ ಮನಮೋಹನ್ ಸಿಂಗ್ ಹೆಸರು ; ಪರ ವಿರೋಧದ ಚರ್ಚೆ ಜೋರು

---Advertisement---

ಬೆಂಗಳೂರು; ನಿನ್ನೆಯಷ್ಟೇ ಸಿಎಂ ಸಿದ್ದರಾಮಯ್ಯ ಅವರು 2025-26ನೇ ಸಾಲಿನ ಬಜೆಟ್ ಅನ್ನ ಮಂಡನೆ ಮಾಡಿದ್ದಾರೆ. ಅದರಲ್ಲಿ ಬೆಂಗಳೂರು ವಿವಿ ಹೆಸರು ಬದಲಾವಣೆಯ ವಿಚಾರವೂ ಸೇರಿಕೊಂಡಿದೆ. ಡಾ.ಮನಮೋಹನ್ ಸಿಂಗ್ ಹೆಸರನ್ನಿಡಲು ನಿರ್ಧಾರ ಮಾಡಲಾಗಿದೆ. ಇದಕ್ಕೆ ಪರ ವಿರೋಧ ಚರ್ಚೆ ಎದ್ದಿದೆ. ಅದರಲ್ಲೂ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಸಹ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

ವಿರೋಧ ವ್ಯಕ್ಯವಾದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿ, ದೇಶಕ್ಕೆ ಮನಮೋಹನ್ ಸಿಂಗ್ ಕೊಡುಗೆ ಇಲ್ವಾ..? ಮೊದಲು ಅದು ಸೆಂಟ್ರಲ್ ಯೂನಿವರ್ಸಿಟಿ ಆಗಿತ್ತು. ಬಿಜೆಪಿಯವರು ಬೌರಿಂಗ್ ಗೆ ವಾಜಪೇಯಿ ಹೆಸರಿಟ್ಟಿರಲಿಲ್ವಾ ಎಂದು ಕಿಡಿಕಾರಿದರೆ, ಡಿಕೆ ಶಿವಕುಮಾರ್, ಅವರು ದೀನ್ ದಯಾಳ್ ಹೆಸರು ಇಟ್ಟಿದ್ದಾರೆ. ನಾವೂ ಮನಮೋಹನ್ ಸಿಂಗ್ ಹೆಸರಿಡಬಾರದಾ..? ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ಲೈ ಓವರ್, ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್, ನೆಲಮಂಗಲ ಫ್ಲೈ ಓವರ್, ನರೇಗಾ ಯೋಜನೆ, ರೈಟ್ ಟು ಎಜುಕೇಷನ್, ಫುಡ್ ಸೆಕ್ಯೂರಿಟಿ, ಅಶಾ ಕಾರ್ಯಕರ್ತೆ ಮಾಡಿದ್ದು ಯಾರು..? ಇಷ್ಟೆಲ್ಲಾ ಕೊಡುಗೆ ನೀಡಿದ್ರು ಅವರ ಹೆಸರಿಡಬಾರದಾ ಎಂದು ಪ್ರಶ್ನೆ ಮಾಡಿದ್ದಾರೆ.

ಆದರೆ ಬಿಜೆಪಿ ನಾಯಕರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಇನ್ನು ಮನಮೋಹನ್ ಸಿಂಗ್ ಬಗ್ಗೆ ತಿಳಿದ ಹಲವರು ಮನಮೋಹನ್ ಸಿಂಗ್ ವಿವಿ ಎಂದು ಹೆಸರಿಟ್ಟರೆ ತಪ್ಪೇನು ಇಲ್ವಲ್ಲಾ ಎಂಬ ಅಭಿಪ್ರಾಯ ಹೊರ ಹಾಕಿದ್ದಾರೆ‌. ಇದೇ ಸೋಷಿಯಲ್‌ಮೀಡಿಯಾದಲ್ಲಿ ಸಾಮಾನ್ಯ ಜನರು ಹಲವರು ವಿರೋಧಿಸಿದ್ದು, ಕರ್ನಾಟಕದಲ್ಲಿ ಸಾಕಷ್ಟು ಸಾಧನೆ ಮಾಡಿರುವವರು ಇದ್ದಾರೆ. ಆದರೆ ಅವರನ್ನು ಬಿಟ್ಟು ಮನಮೋಹನ್ ಸಿಂಗ್ ಹೆಸರಿಡೋದು ಅವಮಾನ ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment