ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 21 : ತಾಲ್ಲೂಕಿನ ತುರುವನೂರು ಹೋಬಳಿ ಬಂಗಾರಕ್ಕನಹಳ್ಳಿ ಗ್ರಾಮದಲ್ಲಿ ಇದೇ ಡಿ.26 ರಿಂದ 29 ರವರೆಗೆ ಶೃಂಗೇಶ್ವರ ಸ್ವಾಮಿ (ನಂದೀಶ್ವರ ಸ್ವಾಮಿ) ಯ ಕಾರ್ತಿಕ ಮಹೋತ್ಸವ ಮತ್ತು ಗ್ರಾಮದ ಎಲ್ಲಾ ದೇವರುಗಳ ಪೂಜಾ ಕಾರ್ಯಕ್ರಮ ನಡೆಯಲಿದೆ.
ಡಿ.26ರಂದು ಸಂಜೆ 7ಕ್ಕೆ ಸ್ವಾಮೀಜಿಯವರ ಗದ್ದಿಗೆ ದೀಪೋತ್ಸವ, ಡಿ.27ರಂದು ಬೆಳಿಗ್ಗೆ ಗಂಗೆ ಪೂಜೆ, ಸಂಜೆ ಅಭಿಷೇಕ, ಡಿ.28ರಂದು ಗುಡ್ಡದ ಶೃಂಗೇಶ್ವರ ಸ್ವಾಮಿಯ ವಿವಿಧ ಜಾನಪದ ಕಲಾ ಪ್ರಕಾರಗಳೊಂದಿಗೆ ಮೆರವಣಿಗೆ ಮತ್ತು ಸಂಜೆ ಕಾರ್ತಿಕ ಮಹೋತ್ಸವ ಹಾಗೂ ಗ್ರಾಮದ ಎಲ್ಲಾ ದೇವರುಗಳ ಪೂಜಾ ಕಾರ್ಯಕ್ರಮಗಳು ನಡೆಯಲಿದ್ದು, ರಾತ್ರಿ ಭಜನೆ ಕಾರ್ಯಕ್ರಮ ನಡೆಯಲಿದೆ. ಡಿ.29ರಂದು ಗುಡ್ಡದ ಶೃಂಗೇಶ್ವರ ಸ್ವಾಮಿಯ ಮಹಾ ಮಂಗಳಾರತಿ ಮತ್ತು ಅನ್ನಸಂತರ್ಪಣೆ (ದಾಸೋಹ) ನಡೆಯಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಸ್ವಾಮಿಯ ಕೃಪೆಗೆ ಪಾತ್ರರಾಗಬೇಕು ಎಂದು ಬಂಗಾರಕ್ಕನಹಳ್ಳಿ ಗ್ರಾಮಸ್ಥರು ಮನವಿ ಮಾಡಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…