ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 01 : ಬಂಜಾರ ಸಮಾಜದ ಬಡ ಮಕ್ಕಳ ಶಿಕ್ಷಣಕ್ಕಾಗಿಯೇ ಇರುವ ಬಂಜಾರ ಬಾಲಕಿಯರ ವಿದ್ಯಾರ್ಥಿನಿಲಯದ ಜಾಗವನ್ನು ಕೆಲವರು ಮಾರಾಟ ಮಾಡುವ ಹುನ್ನಾರ ನಡೆಸುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಯಾವುದೇ ಕಾರಣಕ್ಕೂ ಮಾರಾಟ ಮಾಡಲು ಅವಕಾಶ ಕೊಡುವುದಿಲ್ಲ ಎಂದು ಲಂಬಾಣಿ ಸಮಾಜದ ಮುಖಂಡ ಆರ್.ನಿಂಗಾನಾಯ್ಕ ಆಕ್ಷೇಪ ವ್ಯಕ್ತಪಡಿಸಿದರು.
ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ತ.ರಾ.ಸು.ರಂಗಮಂದಿರದ ಎದುರಿಗಿರುವ ಬಂಜಾರ ಬಾಲಕಿಯರ ವಿದ್ಯಾರ್ಥಿನಿಲಯದ ವಿಶಾಲವಾದ ಜಾಗವನ್ನು ಮಾರಾಟ ಮಾಡಲು ನಕಲಿ ದಾಖಲೆಗಳನ್ನು ಸೃಷ್ಟಿಸಿ ಖಾತೆ ಬದಲಾವಣೆಗಾಗಿ ನಗರಸಭೆಗೆ ಅರ್ಜಿ ಕೊಟ್ಟಿದ್ದಾರೆ. ಯಾವುದೇ ಕಾರಣಕ್ಕೂ ಖಾತೆ ಬದಲಾವಣೆ ಮಾಡಬಾರದೆಂದು ಮನವಿ ಮಾಡಿದ್ದೇವೆ. ತುಮಕೂರು, ಬಳ್ಳಾರಿ, ಶಿವಮೊಗ್ಗ, ಚಿತ್ರದುರ್ಗ ಜಿಲ್ಲೆಯ ಬಡ ವಿದ್ಯಾರ್ಥಿಗಳು ಇಲ್ಲಿ ಓದಲು ಅವಕಾಶವಿತ್ತು. ಕೆಲವರು ಮಾರಾಟ ಮಾಡುವ ಷಡ್ಯಂತ್ರ ನಡೆಸುತ್ತಿದ್ದಾರೆ. ಪ್ರಕರಣ ನ್ಯಾಯಾಲಯದಲ್ಲಿರುವುದರಿಂದ ವಿದ್ಯಾರ್ಥಿನಿಲಯದ ಜಾಗವನ್ನು ಯಾರು ಖರೀದಿ ಮಾಡಿ ಮೋಸ ಹೋಗಬಾರದೆಂದು ಆರ್.ನಿಂಗಾನಾಯ್ಕ ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಸೂರಗೊಂಡನಹಳ್ಳಿಯ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿಯ ಪ್ರಧಾನ ಕಾರ್ಯದರ್ಶಿ ನರೇನಹಳ್ಳಿ ಅರುಣ್‍ಕುಮಾರ್ ಮಾತನಾಡಿ ಬಂಜಾರ ಬಾಲಕಿಯರ ವಿದ್ಯಾರ್ಥಿನಿಲಯದ ಜಾಗವನ್ನು ಮಾರಾಟ ಮಾಡಲು ಯಾರಿಗೂ ಅವಕಾಶವಿಲ್ಲ. ಹಾಗಾಗಿ ನಮ್ಮ ಜನಾಂಗದ ಜಾಗವನ್ನು ಯಾರಾದರೂ ಕೊಂಡುಕೊಂಡರೆ ಮುಂದೆ ಆಗಬಹುದಾದ ನಷ್ಟಕ್ಕೆ ನಾವುಗಳು ಹೊಣೆಗಾರರಲ್ಲ ಎಂದು ಎಚ್ಚರಿಸಿದರು.
ಶಂಕರ್‌ನಾಯ್ಕ್, ರಮೇಶ್‍ನಾಯ್ಕ, ತಿಪ್ಪೇಶನಾಯ್ಕ, ಕುಬೇರನಾಯ್ಕ, ಬಾಲ್ಯಾನಾಯ್ಕ ಇವರುಗಳು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.
ಚಿತ್ರದುರ್ಗ.ಎಪ್ರಿಲ್.11: ಜಿಲ್ಲೆಯಲ್ಲಿ ಪೋಕ್ಸೋ ಹಾಗೂ ಬಾಲ್ಯ ವಿವಾಹ ಪ್ರಕರಣಗಳ ತಡೆಗೆ ಸಮಗ್ರ ಯೋಜನೆ ರೂಪಿಸುವುದರೊಂದಿಗೆ ಹಳ್ಳಿ, ಗ್ರಾಮ ಪಂಚಾಯಿತಿ, ತಾಲ್ಲೂಕು…
ಸುದ್ದಿಒನ್, ದಾವಣಗೆರೆ, ಏಪ್ರಿಲ್. 11 : ಮಹಾನಗರ ಪಾಲಿಕೆಯ ಕಾಂಗ್ರೆಸ್ ಮಾಜಿ ಕಾರ್ಪೊರೇಟರ್ ವಕ್ಫ್ ಬಿಲ್ ವಿರೋಧಿಸಿ ಪ್ರಚೋದನಕಾರಿಯಾಗಿ ಆಡಿದ…
ಹುಬ್ಬಳ್ಳಿ; ಇತ್ತೀಚೆಗಷ್ಟೇ ಶಾಸಕ ಯತ್ನಾಳ್ ಅವರನ್ನು ಬಿಜೆಪಿ ಉಚ್ಛಾಟನೆ ಮಾಡಿದೆ. ಆರು ವರ್ಷಗಳ ಕಾಲ ಪಕ್ಷದಿಂದ ಹೊರಗಿಟ್ಟಿದೆ. ಹೀಗಾಗಿ ಪಂಚಮಸಾಲಿ…
ಸುದ್ದಿಒನ್, ಹಿರಿಯೂರು, ಏಪ್ರಿಲ್. 11 : ನಗರ ಪ್ರದೇಶ ಹಾಗೂ ತಾಲೂಕಿನ ವಿವಿಧ ಕಡೆಗಳಲ್ಲಿ ಗಾಳಿ, ಗುಡುಗು, ಮಿಂಚು ಸೇರಿದಂತೆ…
ಚೆನ್ನೈ; ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ ಕೊಟ್ಟ ಬಳಿಕ ಇದೀಗ ಅವಿರೋಧ ಆಯ್ಕೆ ಮಾಡಲಾಗಿದೆ.…
ಬೆಂಗಳೂರು, ಏಪ್ರಿಲ್ 11: ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಆರೋಪಗಳ ಬಗ್ಗೆ ಗೌರವಾನ್ವಿತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್‌ದಾಸ್ ಅವರ…