ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 22 : ಸಾರ್ವಜನಿಕರಿಗೆ ಕೆಲಸ ಕಾರ್ಯಗಳನ್ನು ಮಾಡಿಕೊಡದೆ ವಿನಾ ಕಾರಣ ಅಲೆದಾಡಿಸುವ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಉಪ ಕಾರ್ಯದರ್ಶಿ ಹಾಗೂ ಮುಖ್ಯ ಲೆಕ್ಕಾಧಿಕಾರಿ ಇವರುಗಳ ವಿರುದ್ದ ಬಂಜಾರ ಲಂಬಾಣಿ ಸಮಾಜದಿಂದ ಸೆ.23 ರಂದು ಜಿಲ್ಲಾ ಪಂಚಾಯಿತಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಗುವುದೆಂದು ಬಂಜಾರ ಲಂಬಾಣಿ ಸಮಾಜದ ಜಿಲ್ಲಾಧ್ಯಕ್ಷ ಎಂ.ಸತೀಶ್‍ಕುಮಾರ್ ತಿಳಿಸಿದ್ದಾರೆ.

ಅವ್ಯವಹಾರಗಳಲ್ಲಿ ತೊಡಗಿರುವ ಪಿ.ಡಿ.ಓ.ಗಳ ಪರವಾಗಿರುವ ಇವರುಗಳು ವಿರುದ್ದ ಸರ್ಕಾರದ ಮಾರ್ಗಸೂಚಿಯನ್ವಯ ಕೆಲಸ ಮಾಡುತ್ತಿಲ್ಲದಿರುವುದಿಂದ ಮುತ್ತಿಗೆಗೆ ಮುಂದಾಗಿದ್ದೇವೆಂದು ಎಂ.ಸತೀಶ್‍ಕುಮಾರ್ ಪ್ರಕಟಣೆಯಲ್ಲಿ ಹೇಳಿದ್ದಾರೆ.










