Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಂಜಾರ ಜನಾಂಗ ಸಂವಿಧಾನದ ಹಂಗಿನಲ್ಲಿದೆಯೇ ಹೊರತು ಯಾರ ಮುಲಾಜಿನಲ್ಲಿಲ್ಲ : ಶಾಸಕ ಕೃಷ್ಣನಾಯ್ಕ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜನವರಿ. 18 : ಲಂಬಾಣಿ ಸಮಾಜವನ್ನು ಹತ್ತಿಕ್ಕುವ ಪ್ರಯತ್ನ ನಡೆದಿದೆ. ವೈಯಕ್ತಿಕ ಪ್ರತಿಷ್ಠೆಗಳನ್ನು ಬಿಟ್ಟು ಎಲ್ಲರೂ ಒಗ್ಗಟ್ಟಾಗಿ ಅನ್ಯಾಯದ ವಿರುದ್ದ ಹೋರಾಡೋಣ ಎಂದು ಹೂವಿನ ಹಡಗಲಿ ಶಾಸಕ ಕೃಷ್ಣನಾಯ್ಕ ಕರೆ ನೀಡಿದರು.

ಸಿಟಿಜನ್ಸ್ ಫಾರ್ ಸೋಷಿಯಲ್ ಜಸ್ಟಿಸ್-ಕರ್ನಾಟಕ, ದಿಕ್ಸೂಚಿ ಬಂಜಾರ-ಕರ್ನಾಟಕ ವತಿಯಿಂದ ಸಂವಿಧಾನ ಗೌರವ ಅಭಿಯಾನ ಸಂವಿಧಾನೇರೋ ಮಾನ್ ಪಾನ್ ಅಭಿಯಾನ ಬಾಬಾ ಸಾಹೇಬರ ಸಂವಿಧಾನ ಬದಲಾಯಿಸಿದ್ದು ಯಾರು?/ಬಲಪಡಿಸಿದ್ದು ಯಾರು? ರಾಜ್ಯ ಮಟ್ಟದ ವಿಚಾರಗೋಷ್ಟಿಯನ್ನು ಶನಿವಾರ ಉಮಾಪತಿ ಕಲ್ಯಾಣ ಮಂಟಪದಲ್ಲಿ ಉದ್ಗಾಟಿಸಿ ಮಾತನಾಡಿದರು.

ಸಂವಿಧಾನ ಬದಲಾವಣೆಯಾದರೆ ಮುಂದಿನ ಮಕ್ಕಳ ಭವಿಷ್ಯ ಏನಾಗಬಹುದು ಎನ್ನುವ ಗೊಂದಲದಲ್ಲಿದ್ದೇವೆ. ಲಂಬಾಣಿ ಸಮಾಜಕ್ಕೆ ಮುಂದೆ ಮಾರಕವಾಗಬಹುದು. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಲೆಲ್ಲಾ ನಮ್ಮ ಸಮಾಜದ ಒಬ್ಬರಾದರೂ ಸಚಿವರಿರುತ್ತಾರೆ. ಪ್ರತಿ ತಾಲ್ಲೂಕು ಜಿಲ್ಲಾ ಮಟ್ಟದಲ್ಲಿ ಸಂಘಟನೆ ಹುಟ್ಟು ಹಾಕಿ ಹೋರಾಟ ಮಾಡಬೇಕಿದೆ. ಬಂಜಾರ ಜನಾಂಗ ಸಂವಿಧಾನದ ಹಂಗಿನಲ್ಲಿದೆಯೇ ಹೊರತು ಯಾರ ಮುಲಾಜಿನಲ್ಲಿಲ್ಲ. ಮುಂದಿನ ಪೀಳಿಗೆ ಉಳಿಯಬೇಕಾಗಿರುವುದರಿಂದ ಸಂವಿಧಾನದಡಿ ಸಿಗಬೇಕಾದ ಹಕ್ಕಿಗಾಗಿ ಹೋರಾಡೋಣ ಎಂದು ತಿಳಿಸಿದರು.

ಚಿಂಚೋಳಿ ಶಾಸಕ ಡಾ. ಅವಿನಾಶ್ ಜಾಧವ್ ಮಾತನಾಡಿ ಡಾ.ಬಿ.ಆರ್.ಅಂಬೇಡ್ಕರ್ ದೇಶಕ್ಕೆ ಸಂವಿಧಾನವನ್ನು ದೊಡ್ಡ ಕೊಡುಗೆಯಾಗಿ ನೀಡಿದ್ದಾರೆ. ಚುನಾವಣೆಯಲ್ಲಿ ಅಂಬೇಡ್ಕರ್‍ರವರನ್ನು ಸೋಲಿಸಿದ ಕಾಂಗ್ರೆಸ್ ಪಕ್ಷ ಅನೇಕ ಹಗರಣಗಳಲ್ಲಿ ಸಿಲುಕೊಂಡಿದೆ. ಮುಡಾ, ವಾಲ್ಮೀಕಿ ಹಗರಣದಲ್ಲಿರುವ ರಾಜ್ಯ ಸರ್ಕಾರಕ್ಕೆ ಅಂಬೇಡ್ಕರ್ ಹೆಸರೇಳುವ ನೈತಿಕತೆಯಿಲ್ಲ ಎಂದರು.

ಕುಡುಚಿ ಮಾಜಿ ಶಾಸಕ ಪಿ.ರಾಜೀವ್ ದಿಕ್ಸೂಚಿ ಭಾಷಣ ಮಾಡುತ್ತ ಸಂವಿಧಾನ ಬದಲಾವಣೆಯಾಗುತ್ತದೆಂದು ಸಾಕಷ್ಟು ಗೊಂದಲ, ಚರ್ಚೆಗಳು ನಡೆಯುತ್ತಿವೆ. ದೇಶದ ಪ್ರಧಾನಿ ನರೇಂದ್ರಮೋದಿ ಸಂವಿಧಾನವನ್ನು ಬದಲಾವಣೆ ಮಾಡುತ್ತಾರೆಂಬ ಆತಂಕವಿದೆ. ಲಂಬಾಣಿ ಸಮಾಜಕ್ಕೂ ಸಂವಿಧಾನಕ್ಕೂ ಅವಿನಾಭಾವ ಸಂಬಂಧವಿದೆ. ಡಾ.ಬಿ.ಆರ್.ಅಂಬೇಡ್ಕರ್‍ರವರು ಸಂವಿಧಾನವನ್ನು ನೀಡಿದಾಗ ಆರು ಜಾತಿಗಳನ್ನು ಸಂವಿಧಾನದೊಳಗೆ ಸೇರಿಸುತ್ತಾರೆ. 1919 ರಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಮಿಲ್ಲರ್ ಕಮಿಟಿ ರಚಿಸಿ ಮೀಸಲಾತಿ ನೀಡಿದರು ಎಂದು ಸ್ಮರಿಸಿದರು.

ಸಂವಿಧಾನ ಜಾರಿಗೆ ಬಂದು 75 ವರ್ಷವಾಗಿದೆ. ನಾಲ್ವಡಿ ಕೃಷ್ಣರಾಜ ಒಡೆಯರ್, ಸಂತ ಸೇವಾಲಾಲ್ ಹಾಗೂ ಡಾ.ಬಿ.ಆರ್.ಅಂಬೇಡ್ಕರ್‍ರವರ ಫೋಟೋವನ್ನು ಪ್ರತಿ ಮನೆಯಲ್ಲಿಟ್ಟು ಪೂಜಿಸುವುದನ್ನು ಲಂಬಾಣಿ ಜನಾಂಗ ಮರೆಯಬಾರದು. ಪವಿತ್ರ ಗ್ರಂಥ ಸಂವಿಧಾನದಿಂದ ನಮ್ಮ ಜನಾಂಗ ಈ ಮಟ್ಟಕ್ಕೆ ಬೆಳೆದಿದೆ. ರಾಹುಲ್‍ಗಾಂಧಿ ಸಂವಿಧಾನವನ್ನು ಕೈಯಲ್ಲಿ ಹಿಡಿದುಕೊಂಡು ಓಡಾಡುತ್ತಿದ್ದಾರೆ. ಆದರೆ ಅವರ ಅಜ್ಜಿ ಇಂದಿರಾಗಾಂಧಿ ಪ್ರಧಾನಿ ಹುದ್ದೆಗೆ ರಾಜಿನಾಮೆ ನೀಡದೆ ನ್ಯಾಯಾಂಗಕ್ಕೆ ಅವಮಾನ ಮಾಡಿದರು. ಸಂವಿಧಾನಕ್ಕಿದ್ದ ಅಧಿಕಾರವನ್ನು ತೆಗೆದಿದ್ದು, ಕಾಂಗ್ರೆಸ್. ದಲಿತರಿಗೆ ನ್ಯಾಯ ಕೊಡಿಸುವುದಕ್ಕಾಗಿ ಡಾ.ಬಿ.ಆರ್.ಅಂಬೇಡ್ಕರ್ ಸಾಕಷ್ಟು ಹೋರಾಟ ನಡೆಸಿದರು. ದೇಶಕ್ಕೆ ಸಂವಿಧಾನ ಸಮರ್ಪಣೆ ಮಾಡಿದ ದಿನವನ್ನು ಕಾಂಗ್ರೆಸ್ ಗೌರವಿಸುತ್ತಿಲ್ಲ. ಬಿಜೆಪಿ. ಮೇಲ್ವರ್ಗದ ಪರವಾಗಿದೆ ಎಂದು ಕಾಂಗ್ರೆಸ್ ಅಪ ಪ್ರಚಾರದಲ್ಲಿ ತೊಡಗಿದೆ. ಮೀಸಲಾತಿ ಭಿಕ್ಷೆಯಲ್ಲ. ಅದು ನಮ್ಮ ಹಕ್ಕು. ಆರ್.ಎಸ್.ಎಸ್.ಸಿದ್ದಾಂತ ಸ್ಪಷ್ಟವಾಗಿದೆ. ಆರ್ಟಿಕಲ್ 368 ರ ಪ್ರಕಾರ ಸಂವಿಧಾನ ತಿದ್ದುಪಡಿಗೆ ಅವಕಾಶ ಕೊಟ್ಟಿದೆ. ಸಂವಿಧಾನದ ಅಧಿಕಾರ ಕಿತ್ತಿರುವುದು ಕಾಂಗ್ರೆಸ್ಸೆ ಹೊರತು ಬಿಜೆಪಿ.ಯಲ್ಲ. ಎಂದು ಬಂಜಾರ ಸಮಾಜಕ್ಕೆ ಜಾಗೃತಿ ಮೂಡಿಸಿದರು.

ಮಾಜಿ ಶಾಸಕ ಅಶೋಕ್‍ನಾಯ್ಕ ಮಾತನಾಡಿ ಅತ್ಯಂತ ಸ್ವಾಭಿಮಾನಿ, ಶ್ರಮಜೀವಿ ಸಮಾಜ ನಮ್ಮದು. ಪ್ರಾಮಾಣಿಕ, ನಿಸ್ವಾರ್ಥ ಸೇವಾ ಗುಣ ಹೊಂದಿರುವ ಲಂಬಾಣಿ ಸಮಾಜ ಸಂವಿಧಾನದಡಿ ಸಿಗಬೇಕಾದ ನ್ಯಾಯಯುತವಾದ ಸೌಲಭ್ಯಗಳಿಗಾಗಿ ಸಂಘಟಿತರಾಗಿ ಹೋರಾಟ ಮಾಡಬೇಕಿದೆ ಎಂದರು.

ಶಿರಹಟ್ಟಿ ಶಾಸಕ ಡಾ.ಚಂದ್ರು ಲಮಾಣಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಮಾಜಿ ಸಂಸದ ಡಾ.ಉಮೇಶ್ ಜಾಧವ್ ಅಧ್ಯಕ್ಷತೆ ವಹಿಸಿದ್ದರು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಅನುಸೂಯ ಜಾಧವ್ ವೇದಿಕೆಯಲ್ಲಿದ್ದರು.
ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಸುರೇಶ್‍ನಾಯ್ಕ ಸೇರಿದಂತೆ ಲಂಬಾಣಿ ಸಮಾಜದ ಅನೇಕರು ವಿಚಾರಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...