ದಾವಣಗೆರೆ ಅ.18 : ನಗರದ ಎ.ವಿ.ಕೆ. ರಸ್ತೆಯಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನ ನಿಲ್ಯಕ್ಷದಿಂದ ಗ್ರಾಹಕರೊಬ್ಬರಿಗೆ ತೊಂದರೆಯಾಗಿದ್ದು, ಈ ಬಗ್ಗೆ ಜಿಲ್ಲಾ ಗ್ರಾಹಕ ನ್ಯಾಯಾಲಯದ ಮೂಲಕ ಗ್ರಾಹಕರಿಗೆ ಬಡ್ಡಿ ಸಮೇತ ಪರಿಹಾರ ನೀಡಲು ಆದೇಶ ನೀಡಲಾಗಿದೆ.
ದಾವಣಗೆರೆ ನಿವೃತ್ತ ಸರ್ಕಾರಿ ಅಭಿಯೋಜಕರಾದ ನಾಗರಾಜ ಆಚಾರ್ ಅವರು ನಗರದ ಎ.ವಿ.ಕೆ. ರಸ್ತೆಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್‍ನಲ್ಲಿ ಖಾತೆ ಹೊಂದಿದ್ದು. 2023 ರ ಸೆಪ್ಟೆಂಬರ್ 28 ರಂದು ಖಾತೆಯ ವಿವರವನ್ನು ಪರಿಶೀಲಿಸಿದಾಗ ಇದೇ 2023 ರ ಸೆಪ್ಟೆಂಬರ್ 26 ರಂದು ಖಾತೆಯ ಯು.ಪಿ.ಐ. ಮೂಲಕ ರೂ. 99,000 ಮೊತ್ತ ವರ್ಗಾವಣೆಯಾಗಿರುತ್ತದೆ.
ಖಾತೆಯಿಂದ ಹಣವನ್ನು ವರ್ಗಾಹಿಸಲು ತಾವು ಯಾವುದೇ ತೆರನಾದ ಪ್ರಕ್ರಿಯೆಗಳನ್ನು ಪಾಲಿಸದೇ ಅವರ ಗಮನಕ್ಕೆ ಬಾರದಂತೆ ವರ್ಗಾವಣೆಗೊಂಡಿದ್ದರ ಮೊತ್ತದ ಬಗ್ಗೆ ಬ್ಯಾಂಕಿಂಗ್ ಓಂಬಡ್ಸ್ ಮನ್‍ಗೆ ಮತ್ತು ಸಕ್ಷಮ ಪ್ರಾಧಿಕಾರಕ್ಕೆ ದೂರು ಸಲ್ಲಿಸಿದ್ದರೂ ಯಾವುದೇ ಪರಿಹಾರ, ನ್ಯಾಯ ಸಿಕ್ಕಿರಲಿಲ್ಲ.
ಈ ಬಗ್ಗೆ ಹಣ ಕಳೆದುಕೊಂಡ ನಾಗರಾಜ ಆಚಾರ್ ಅವರು ದಾವಣಗೆರೆ ಜಿಲ್ಲಾ ಗ್ರಾಹಕರ ನ್ಯಾಯಾಲಯದಲ್ಲಿ ದೂರು ಸಲ್ಲಿಸಿದ್ದು, ದೂರಿನ ವಿಚಾರಣೆ ನಡೆಸಿದ ನ್ಯಾಯಾಲಯವು ಅವರ ಖಾತೆಯಿಂದ ವರ್ಗಾಹಿಸಲ್ಪಟ್ಟ ರೂ. 99,000 ಗಳನ್ನು ವಾರ್ಷಿಕ ಶೇ.12 ಬಡ್ಡಿಯೊಂದಿಗೆ ಸಂಪೂರ್ಣ ಹಣವನ್ನು ಹಿಂತಿರುಗಿಸುವಂತೆ ಮತ್ತು ದೂರುದಾರರಿಗೆ ಉಂಟಾದ ಮಾನಸಿಕ ಪರಿಹಾರ ಮೊತ್ತವಾಗಿ 10,000 ರೂ. ಹಾಗೂ 5000 ರೂ. ದೂರು ದಾಖಲಿಸಲು ಆಗಿರುವ ವೆಚ್ಚ ಕೊಡಬೇಕು ಎಂದು ಜಿಲ್ಲಾ ಗ್ರಾಹಕರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಗಿ, ಸದಸ್ಯರಾದ ತ್ಯಾಗರಾಜನ್ ಆದೇಶಿಸಿದ್ದಾರೆ.
ದಿನಕ್ಕೆ 2 ಮೊಟ್ಟೆ ತಿಂದರೆ ತೂಕ ಕಡಿಮೆಯಾಗುತ್ತದೆಯೇ ? ತಜ್ಞರು ಹೇಳುವುದೇನು ? ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಬಯಸಿದರೆ,…
ಈ ರಾಶಿಯವರ ಕನಸು ನನಸಾಗುವ ದಿನ ಬಂದಿದೆ, ಈ ರಾಶಿಯವರಿಗೆ ಉದ್ಯೋಗ ಪ್ರಾಪ್ತಿ, ಈ ರಾಶಿಯವರಿಗೆ ಅಧಿಕಾರ ಹಾಗೂ ಧನಪ್ರಾಪ್ತಿ,…
ಸುದ್ದಿಒನ್ :ಪ್ರಯಾಗ್‌ರಾಜ್ ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ ಕುರಿತು ಉತ್ತರ ಪ್ರದೇಶ ಸರ್ಕಾರ ಸ್ಪಷ್ಟನೆ ನೀಡಿದೆ. ಕಾಲ್ತುಳಿತದಲ್ಲಿ 30…
ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಸ್ಥಾನದ ಚುನಾವಣೆಯ ವಿಚಾರಕ್ಕೆ ಬಂಡಾಯದ ಕಿಚ್ಚು ಜೋರಾಗಿದೆ. ಹಾಲಿ ರಾಜ್ಯಾಧ್ಯಕ್ಷರಾಗಿರುವ ಬಿವೈ ವಿಜಯೇಂದ್ರ ಅವರ ಸ್ಥಾನಕ್ಕೆ ಕುತ್ತು…
ಬಳ್ಳಾರಿ: ಕಡಲೆ ಕಾಳು ಬೆಎಯನ್ನು ಬೆಂಬಲ ಬೆಲೆಗೆ ಖರೀದಿ ಮಾಡಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ. ಕರ್ನಾಟಕ ಸರ್ಕಾರದ ಪ್ರಸ್ತಾವನೆಯಂತೆ…
ಸುದ್ದಿಒನ್, ಚಿತ್ರದುರ್ಗ,ಜನವರಿ. 29 : ನಮ್ಮ ಜನಗಳಿಗೆ ವಿಜ್ಞಾನದ ಆವಿಷ್ಕಾರಗಳು ಬೇಕು ಆದರಿಂದ ಕಂಡು ಹಿಡಿದ ಮೊಬೈಲ್ .ಟಿ.ವಿ. ವಾಟ್ಸಾಪ್,…