ಶಾಸಕ ಜನಾರ್ದನ ರೆಡ್ಡಿ ಮನೆ ಮುಂದೆ ಬ್ಯಾನರ್ ಗಲಾಟೆ : ಕಾಂಗ್ರೆಸ್ ಕಾರ್ಯಕರ್ತ ಸಾವು..!

1 Min Read

ಬಳ್ಳಾರಿ: ನಿನ್ನೆ ರಾತ್ರಿ ಬಳ್ಳಾರಿಯಲ್ಲಿ ದೊಡ್ಡ ಅವಘಡವೇ ನಡೆದಿದೆ. ಒಂದು ಬ್ಯಾನರ್ ಕಟ್ಟುವ ವಿಚಾರಕ್ಕೆ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ಶುರುವಾಗಿದೆ. ಮಾತಿನಲ್ಲಿ ಶುರುವಾದ ಗಲಾಟೆ ಒಂದು ಪ್ರಾಣವೇ ಹೋಗುವಂತೆ ಮಾಡಿದೆ. ಶಾಸಕ ಜನಾರ್ದನ ರೆಡ್ಡಿ ಮನೆ ಮುಂದೆ ಬ್ಯಾನರ್ ಕಟ್ಟುವ ವೇಳೆ ಈ ದುರ್ಘಟನೆ ನಡೆದಿದೆ.

ಗಲಾಟೆ ವೇಳೆ ಸತೀಶ್ ರೆಡ್ಡಿ ಅವರ ಖಾಸಗಿ ಗನ್ ಮ್ಯಾನ್ ಗಳು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಅದರಲ್ಲಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಮೃತ ಪಟ್ಟಿದ್ದಾರೆ. ಸದ್ಯ ರಾಜಶೇಖರ್ ಮೃತದೇಹವನ್ನ ಬಳ್ಳಾರಿ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ನ್ಯಾಯ ವೈದ್ಯಶಾಸ್ತ್ರ ವಿಭಾಗದ ವೈದ್ಯರಿಂದ ಮರಣೋತ್ತರ ಪರೀಕ್ಷೆ ನಡೆಯಲಿದೆ. ಈ ಮರಣೋತ್ತರ ಪರೀಕ್ಷೆ ನಡೆಯುವುದಕ್ಕೆ ಸುಮಾರು 1 ಗಂಟೆಗಳ ಕಾಲ ಆಗಬಹುದು. ಹೀಗಾಗಿ ಪೊಲೀಸ್ ಭದ್ರತೆಯನ್ನು ಒದಗಿಸಿದ್ದಾರೆ. ಈಗಾಗಲೇ ಶವಗಾರದ ಎದುರು ರಾಜಶೇಖರ್ ಕುಟುಂಬಸ್ಥರು ಬಂದಿದ್ದು, ಕಣ್ಣೀರಿಡುತ್ತಿದ್ದಾರೆ.

ಈ ಸಂಬಂಧ ಈಗಾಗಲೇ 11 ಜನರ ಮೇಲೆ ಎಫ್ಐಆರ್ ದಾಖಲಾಗಿದೆಮ ಬ್ರೂಸ್ ಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆಯನ್ನು ಸಹ ನಡೆಸಿದ್ದಾರೆ. ಜೊತೆಗೆ ಶಾಸಕ ಜನಾರ್ದನ ರೆಡ್ಡಿ, ಸೋಮಶೇಖರ ರೆಡ್ಡಿ, ಶ್ರೀರಾಮುಲು, ದಮ್ಮೂರು ಶೇಖರ್ ಸೇರಿದಂತೆ ಒಟ್ಟು 11 ಜನರ ವಿರುದ್ಧ ಎಫ್ಐಆರ್ ಆಗಿದೆ. ಗಲಾಟೆಯಲ್ಲಿ ಶಾಸಕ ಜನಾರ್ದನ ರೆಡ್ಡಿ ಹಾಗೂ ಶಾಸಕ ಭರತ್ ರೆಡ್ಡಿ ಬೆಂಬಲಿಗರಜ ಪರಸ್ಪರ ಕಲ್ಲು ತೂರಾಟ ಮಾಡಿದ್ದಾರೆ. ಈ ಘಟನೆ ಕುರಿತು ಗೃಹಸಚಿವ ಪರಮೇಶ್ವರ್​​​ ಶಾಸಕ ನಾರಾ ಭರತ್ ರೆಡ್ಡಿ ಮತ್ತು ಪೊಲೀಸ್​ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ.

Share This Article
Enable Notifications OK No thanks