ಮಂಗಳೂರು: ಕಳೆದ ಕೆಲ ತಿಂಗಳ ಹಿಂದೆ ಅನ್ಯಧರ್ಮೀಯರ ಬಹಿಷ್ಕಾರದ ವಿಚಾರ ಸಾಕಷ್ಟು ಚರ್ಚೆಗೂ ಕಾರಣವಾಗಿತ್ತು, ಸಾಕಷ್ಟು ಅವಾಂತರ ಕೂಡ ಆಗಿತ್ತು. ಜಾತ್ರೆ, ಹಬ್ಬ ಹರಿದಿನಗಳಲ್ಲಿ ಅನ್ಯ ಧರ್ಮೀಯರ ಅಂಗಡಿಗಳಿಗೆ ನಿಷೇಧ ಹೇರಲಾಗಿತ್ತು. ಅನ್ಯಧರ್ಮೀಯರ ಜೊತೆ ವ್ಯಾಪಾರ ವಹಿವಾಟು ಬೇಡ ಎನ್ನುವ ಅಭಿಯಾನ ಕೂಡ ಆರಂಭವಾಗಿತ್ತು. ನಂತರದಲ್ಲಿ ತಣ್ಣಗಾಗಿದ್ದ ವಿಚಾರ, ಈಗ ಮತ್ತೆ ಮುನ್ನೆಲೆಗೆ ಬಂದಿದೆ.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ರಾಜ್ಯದಿಂದ ಮಾತ್ರವಲ್ಲ ಬೇರೆ ರಾಜ್ಯದಿಂದಲೂ ಮೂಲೆ ಮೂಲೆಯಿಂದ ಜನ ಬರುತ್ತಾರೆ. ಹಲವು ರೀತಿಯ ಪೂಜೆಗಳನ್ನು ಮಾಡುತ್ತಾರೆ. ಮುಂದಿನ ದಿನಗಳಲ್ಲಿ ದೇವಸ್ಥಾನದಲ್ಲಿ ಚಂಪಾಷಷ್ಠಿಯ ಪೂಜೆ ಇರಲಿದೆ. ಈ ಪೂಜೆಯ ವೇಳೆ ಇಲ್ಲಿ ಜಾತ್ರೆ ನಡೆಯುತ್ತದೆ. ಈ ಸಂದರ್ಭದಲ್ಲಿ ಅನ್ಯ ಧರ್ಮೀಯರ ವ್ಯಾಪಾರ ವಹಿವಾಟನ್ನು ನಿಷೇಧ ಮಾಡಲಾಗಿದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ದೇವಸ್ಥಾನದ ದ್ವಾರಕ ಬಾಗಿಲಿನಲ್ಲಿಯೇ ಬ್ಯಾನರ್ ಹಾಕಲಾಗಿದೆ. ಕುಕ್ಕೆ ಸುಬ್ರಮಣ್ಯ ಚಂಪಾಷಷ್ಠಿಯ ಸಂದರ್ಭದಲ್ಲಿ ಈ ಪರಿಸರದಲ್ಲಿ ಅನ್ಯ ಮತಿಯ ವ್ಯಾಪಾರ ವಹಿವಾಟುಗಳನ್ನು ನಿಷೇಧಿಸಲಾಗಿದೆ ಎಂದು ಬ್ಯಾನರ್ ನಲ್ಲಿ ಬರೆಯಲಾಗಿದೆ.
ಸುದ್ದಿಒನ್ : ಒಣದ್ರಾಕ್ಷಿ ಅನೇಕ ಪೋಷಕಾಂಶಗಳನ್ನು ಮತ್ತು ಔಷಧೀಯ ಗುಣಗಳನ್ನು ಹೊಂದಿವೆ. ಅವುಗಳನ್ನು ತಿನ್ನುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು.…
ಈ ರಾಶಿಯವರ ಮಧ್ಯವರ್ತಿಗಳ ಆದಾಯ ಚೇತರಿಕೆ, ಈ ರಾಶಿಯ ನವದಂಪತಿಗಳು ಹೊಂದಿಕೊಳ್ಳುವುದೇ ಕಷ್ಟ, ಗುರುವಾರದ ರಾಶಿಭವಿಷ್ಯ 17 ಏಪ್ರಿಲ್ 2025…
ಬೀದರ್,(ಏಪ್ರಿಲ್ 16): ಗ್ಯಾರಂಟಿಗಳನ್ನು ಜಾರಿ ಮಾಡಿ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಏ. 16 : ಹೊಳಲ್ಕೆರೆ…
ಚಿತ್ರದುರ್ಗ. ಏ.16: ಜಿಲ್ಲೆಯಲ್ಲಿ ಪೂರ್ವ ಮುಂಗಾರು ಮಳೆಯಿಂದಾಗಿ ಹಾನಿಗೊಳಗಾದ ಬೆಳೆಹಾನಿ ಪ್ರದೇಶಗಳಿಗೆ ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಭೇಟಿ…
ಚಿತ್ರದುರ್ಗ. ಏ.16: ಆರೋಗ್ಯ ಇಲಾಖೆ, ಜಿಲ್ಲಾ ಆಸ್ಪತ್ರೆ, ಹಜ್ ಸಮಿತಿ ಸಹಯೋಗದೊಂದಿಗೆ ಬುಧವಾರ ನಗರದ ಎಂ.ಕೆ.ಪ್ಯಾಲೇಸ್ ಸಭಾಂಗಣದಲ್ಲಿ ಜಿಲ್ಲೆಯ 99…