Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸುಪ್ರೀಂ ಕೋರ್ಟ್ ನಲ್ಲೂ ವಜಾ ಆಯ್ತು ಬಾನು ಮುಷ್ತಾಕ ವಿರೋಧಿಸಿದ್ದ ಅರ್ಜಿ..!

---Advertisement---

ನವದೆಹಲಿ: ಈ ಬಾರಿಯ ದಸರಾ ಉದ್ಘಾಟನೆ ಮಾಡುವುದಕ್ಕೆ ಸರ್ಕಾರವೇ ಬಾನು ಮುಷ್ತಾಕ ಅವರನ್ನು ಆಯ್ಕೆ ಮಾಡಿದೆ. ಆದರೆ ಪ್ರತಾಪ್ ಸೇರಿದಂತೆ ಹಲವರು ಬಾನು ಮುಷ್ತಾಕ ಆಯ್ಕೆ ತಪ್ಪು ಎಂದೇ ಹೇಳಿದರು, ಹೈಕೋರ್ಟ್ ಮೆಟ್ಟಿಲು ಕೂಡ ಹೇರಿದರು. ಹೈಕೋರ್ಟ್ ನಿಂದ ಆ ಅರ್ಜಿ ವಜಾಗೊಂಡಿತ್ತು. ಬಳಿಕ ವಿರೋಧಿಸಿದ ಅರ್ಜಿಯೊಂದು ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಇದೀಗ ಸುಪ್ರೀಂ ಕೋರ್ಟ್ ನಲ್ಲೂ ಅರ್ಜಿ ವಜಾಗೊಂಡಿದೆ.

ಜಸ್ಟೀಸ್ ವಿಕ್ರಮ್ ನಾಥ್ ಅವರಿದ್ದ ಪೀಠವೂ ಈ ಅರ್ಜಿಯನ್ನು ವಜಾಗೊಳಿಸಿದೆ. ಅರ್ಜಿ ವಜಾಗೊಳಿಸುವುದಕ್ಕೂ ಮುನ್ನ ಅರ್ಜಿಯ ಉದ್ದೇಶವನ್ನು ಕೇಳಿದ ಕೋರ್ಟ್, ಬಳಿಕ ಅರ್ಜಿ ವಜಾಗೊಳಿಸಿದೆ. ಈ ವೇಳೆ ಅರ್ಜಿದಾರರ ಪರ ವಕೀಲರಾದ ಸುರೇಶ್ ಅವರು, ಮೈ ಲಾರ್ಡ್ ದಯವಿಟ್ಟು ನನ್ನ ವಾದವನ್ನು ಕೇಳಿ. ಇದು ಜಾತ್ಯಾತೀಯ ವ್ಯವಸ್ಥೆ ಹೌದು. ಆದರೆ ನನ್ನ ಧಾರ್ಮಿಕ ಚಟುವಟಿಕೆಗಳಲ್ಲಿ ಹಸ್ಯಕ್ಷೇಪ ಮಾಡಬೇಡಿ ಎಂದು ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ವಾದಿಸಿದ್ದರು. ಆಗ ನ್ಯಾಯಮೂರ್ತಿ ವಿಕ್ರಮ್ ನಾಥ್ ಅವರು, ಇದು ರಾಜ್ಯ ಸರ್ಕಾರದ ಕಾರ್ಯಕ್ರಮ. ರಾಜ್ಯವು ಎ, ಬಿ ಮತ್ತು ಸಿ ನಡುವೆ ಹೇಗೆ ವ್ಯತ್ಯಾಸವನ್ನು ತೋರಿಸುತ್ತದೆ ಎಂದು ಪ್ರಶ್ನೆ ಮಾಡಿದರು.

ಈ ಮೂಲಕ ಬಾನು ಮುಷ್ತಾಕ ಅವರು ದಸರಾ ಉದ್ಘಾಟನೆ ಮಾಡುವ ಹಾದಿ ಬಹಳ ಸುಲಭವಾದಂತೆ ಆಗಿದೆ. ಮೊದಲು ಈ ಸಂಬಂಧ ಸಲ್ಲಿಕೆಯಾಗಿದ್ದ ಅರ್ಜಿ ಹೈಕೋರ್ಟ್ ನಲ್ಲಿ ವಜಾಗೊಂಡಿತ್ತು, ಈಗ ಸುಪ್ರೀಂ ಕೋರ್ಟ್ ನಲ್ಲೂ ಅರ್ಜಿ ವಜಾಗೊಂಡಿದೆ. ಈ ಎಲ್ಲಾ ಬೆಳವಣಿಗೆಯಿಂದ ಬಾನು ಮುಷ್ತಾಕ ಅವರೆ ಅರ್ಜಿ ಸಲ್ಲಿಕೆ ಮಾಡುವುದು ದೃಢವಾದಂತೆ ಆಯ್ತು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now