ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 03 : ಹೊಳಲ್ಕೆರೆ ರಸ್ತೆಯಲ್ಲಿರುವ ಬರಗೇರಮ್ಮನ ಮೆರವಣಿಗೆ ಶುಕ್ರವಾರ ನಗರದ ರಾಜಬೀದಿಗಳಲ್ಲಿ ಸಾಗಿತು. ಜೋಡೆತ್ತಿನ ಗಾಡಿಯಲ್ಲಿ ವಿರಾಜಮಾನಳಾಗಿದ್ದ ಬರಗೇರಮ್ಮನನ್ನು ಬಂಗಾರದ ಆಭರಣ ಹಾಗೂ ಬಣ್ಣ ಬಣ್ಣ ದೊಡ್ಡ ಗಾತ್ರದ ಹೂವಿನ ಹಾರಗಳಿಂದ ಕಂಗೊಳಿಸುವಂತೆ ಅಲಂಕರಿಸಲಾಗಿತ್ತು.
ಸಂಗೊಳ್ಳಿರಾಯಣ್ಣ ವೃತ್ತ, ಗಾಂಧಿವೃತ್ತದ ಮೂಲಕ ಲಕ್ಷ್ಮಿಬಜಾರ್‍ನಿಂದ ಪ್ರಮುಖ ಬೀದಿಗಳಲ್ಲಿ ಹೊರಟ ಬರಗೇರಮ್ಮನಿಗೆ ರಸ್ತೆಯ ಬದಿಗಳಲ್ಲಿ ನಿಂತಿದ್ದ ಭಕ್ತರು ಪೂಜೆ ಸಲ್ಲಿಸಿ ಭಕ್ತಿ ಸಮರ್ಪಿಸಿದರು, ಡೊಳ್ಳು, ತಮಟೆ, ಚಂಡೆವಾದ್ಯ, ಗೊಂಬೆ ಕುಣಿತ, ಸೋಮನ ಕುಣಿತ ಮೆರವಣಿಗೆಯಲ್ಲಿ ಆಕರ್ಷಣೀಯವಾಗಿತ್ತು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











