
ದಾವಣಗೆರೆ, (ಜ.29): ಬಂಡಾಯ ಸಾಹಿತಿ ಹಾಗೂ ಚಿತ್ರ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರ ಆರೋಗ್ಯದಲ್ಲಿ ಏರುಪೇರಾಗಿ ಕುಸಿದು ಬಿದ್ದಿದ್ದಾರೆ.

ಹರಿಹರದಲ್ಲಿ ನಡೆದ ಬಂಡಾಯ ಸಾಹಿತ್ಯ ವೇದಿಕೆಯ ಕಾರ್ಯಕ್ರಮದಲ್ಲಿ ಅವರು ಅಸ್ವಸ್ಥರಾಗಿ ಕುಸಿದು ಬಿದ್ದ ಘಟನೆ ನಡೆದಿದೆ.ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಅವರಿಗೆ ರಕ್ತದೊತ್ತಡದಲ್ಲಿ ಏರುಪೇರಾಗಿದ್ದು ಕುಸಿದ್ದು ಬಿದ್ದಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಚಿಕಿತ್ಸೆ ನಂತರ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಆಸ್ಪತ್ರೆಗೆ ಕರೆದೊಯ್ಯಲು ನಿರ್ಧರಿಸಲಾಗಿದೆ.

GIPHY App Key not set. Please check settings