Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

6 ವರ್ಷಗಳ ಕಾಲ ಬಿಜೆಪಿಯಿಂದ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆ..!

---Advertisement---

 

ಸುದ್ದಿಒನ್, ಬೆಂಗಳೂರು, ಮಾರ್ಚ್. 26 :  ಬಿಜೆಪಿಯ ಶಿಸ್ತು ಸಮಿತಿ ಸಾಕಷ್ಟು ಬಾರೀ ಎಚ್ಚರಿಕೆಯನ್ನು ನೀಡಿದರು ಸಹ ಎಚ್ಚೆತ್ತುಕೊಳ್ಳದೆ ಮತ್ತೆ ಅದೇ ರೀತಿಯ ಮಾತುಗಳನ್ನ ಆಡುತ್ತಿದ್ದರು. ಇದೀಗ ಯತ್ನಾಳ್ ಅವರನ್ನು ಬಿಜೆಪಿಯ ಪ್ರಾಥಮಿಕ ಸ್ಥಾನದಿಂದ ಉಚ್ಚಾಟನೆ ಮಾಡಿದ್ದಾರೆ. ಸುಮಾರು ಆರು ವರ್ಷಗಳ ಕಾಲ ಬಿಜೆಪಿ ಸದಸ್ಯತ್ವ ಸ್ಥಾನದಿಂದ ಉಚ್ಛಾಟನೆ ಮಾಡಲಾಗಿದೆ.

ಶಾಸಕ ಯತ್ನಾಳ್ ಸದಾ ಕಾಲ ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ನಾಲಿಗೆ ಹರಿಬಿಟ್ಟು ಮಾತನಾಡುತ್ತಿದ್ದರು. ಪಕ್ಷದ ಶಿಸ್ತು ಉಲ್ಲಂಘಟನೆ ಮಾಡಿದ ಹಿನ್ನೆಲೆ ಉಚ್ಛಾಟನೆ ಮಾಡಲಾಗಿದೆ. ಯಡಿಯೂರಪ್ಪ ಹಾಗೂ ಅವರ ಕುಟುಂಬಸ್ಥರ ವಿರುದ್ಧ ಯಾವಾಗಲೂ ಆಕ್ರೋಶ ಹೊರ ಹಾಕುತ್ತಿದ್ದರು. ಇತ್ತೀಚೆಗಷ್ಟೇ ಬಿಜೆಪಿ ಹೈಕಮಾಂಡ್ ನೋಟೀಸ್ ಜಾರಿ ಮಾಡಿತ್ತು. ಅದಕ್ಕೆ ಯತ್ನಾಳ್ ಉತ್ತರವನ್ನು ನೀಡಿದ್ದರು. ಆದರೆ ಸರಿಯಾದ ಉತ್ತರ ನೀಡದೆ ಇದ್ದ ಕಾರಣ ಇದೀಗ ಉಚ್ಛಾಟನೆ ಮಾಡಲಾಗಿದೆ.

ಪಕ್ಷದಿಂದ ಉಚ್ಛಾಟನೆಯಾದ ಕಾರಣ ಶಾಸಕ ಸ್ಥಾನಕ್ಕೂ ಕುತ್ತು ಬರುತ್ತಾ ಎಂಬ ಚರ್ಚೆಯೂ ನಡೆಯುತ್ತಿದೆ. ಅಥವಾ ಫೈಯರ್ ಬ್ರ್ಯಾಂಡ್ ಎಂದೇ ಖ್ಯಾತಿ ಪಡೆದಿರುವ ಯತ್ನಾಳ್ ಅವರೇ ಬಿಜೆಪಿ ಪಕ್ಷದಿಂದ ಸಿಕ್ಕಿರುವ ಶಾಸಕ ಸ್ಥಾನ ಬೇಡ ಎಂದು ರಾಜೀನಾಮೆ ನೀಡಬಹುದು. ಪಕ್ಷದ ಕೇಂದ್ರ ಶಿಸ್ತು ಸಮಿತಿಯು 2025 ಫೆಬ್ರವರಿ 10 ರಂದು ನೀಡಿದ್ದ ಶೋಕಾಸ್ ನೋಟಿಸ್‌ಗೆ ನಿಮ್ಮ ಪ್ರತಿಕ್ರಿಯೆಯನ್ನು ಪರಿಗಣಿಸಿದೆ ಮತ್ತು ಹಿಂದಿನ ಶೋಕಾಸ್ ನೋಟಿಸ್‌ಗಳಿಗೆ ಪ್ರತಿಕ್ರಿಯೆಯಾಗಿ ಉತ್ತಮ ನಡವಳಿಕೆ ಮತ್ತು ನಡವಳಿಕೆಯ ಭರವಸೆಗಳನ್ನು ನೀಡಿದ್ದರೂ ಸಹ, ನೀವು ಪಕ್ಷದ ಶಿಸ್ತಿನ ಪದೇ ಪದೇ ಉಲ್ಲಂಘಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದೆ. ಆದ್ದರಿಂದ, ನಿಮ್ಮನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತಕ್ಷಣದಿಂದ ಜಾರಿಗೆ ಬರುವಂತೆ 6 ವರ್ಷಗಳ ಅವಧಿಗೆ ಉಚ್ಚಾಟಿಸಲು ನಿರ್ಧರಿಸಲಾಗಿದೆ ಮತ್ತು ನೀವು ಇಲ್ಲಿಯವರೆಗೆ ಹೊಂದಿದ್ದ ಯಾವುದೇ ಪಕ್ಷದ ಹುದ್ದೆಯಿಂದ ನಿಮ್ಮನ್ನು ತೆಗೆದುಹಾಕಲಾಗಿದೆ ಎಂದು ಬಿಜೆಪಿ ಕೇಂದ್ರ ಶಿಸ್ತು ಸಮಿತಿಯ ಕಾರ್ಯದರ್ಶಿ ಓಂ ಪಾಠಕ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment