ಹುಬ್ಬಳ್ಳಿ; ಬಸವರಾಜ್ ಹೊರಟ್ಟಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ವಿಧಾನಪರಿಷತ್ ಉಪಾಸಭಾಪತಿ ಪ್ರಾಣೇಶ್ ಅವರಿಗೆ ರಾಜೀನಾಮೆಯನ್ನು ರವಾನಿಸಿದ್ದಾರೆ. ಮೇ 1ರ ಒಳಗೆ ರಾಜೀನಾಮೆ ಪತ್ರವನ್ನು ಅಂಗೀಕರಿಸಿ, ಸಭಾಪತಿ ಸ್ಥಾನದಿಂದ ಮುಕ್ತಿ ನೀಡಬೇಕೆಂದು ಮನವಿ ಮಾಡಿದ್ದಾರೆ.
ಇಂದು ಬೆಳಗ್ಗೆಯಷ್ಟೇ ಮಾಧ್ಯಮದವರ ಮುಂದೆ ರಾಜೀನಾಮೆ ಬಗ್ಗೆ ಮಾತನಾಡಿದ್ದರು. ವಿಧಾನಪರಿಷತ್ ನಲ್ಲಿ ಸದಸ್ಯರ ವರ್ತನೆ ಸರಿ ಇಲ್ಲ. ಹೀಗಾಗಿ ನಾನು ನನ್ನ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದಿದ್ದರು. ಸಂಜೆ ವೇಳೆಗೆ ರಾಜೀನಾಮೆ ಪತ್ರವನ್ನು ರವಾನಿಸಿದ್ದಾರೆ. ಮಾರ್ಚ್ 18ರಂದೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಆ ಪತ್ರದಲ್ಲಿ 1-4-2025ರಂದು ರಾಜೀನಾಮೆ ನೀಡುತ್ತಿದ್ದೇನೆ. ವೈಯಕ್ತಿಕ ಕಾರಣದಿಂದ ರಾಜೀನಾಮೆ ನೀಡುತ್ತಿದ್ದು, ಸದರಿ ರಾಜೀನಾಮೆಯನ್ನು 31-3-2025ರ ಒಳಗೆ ಸ್ವೀಕರಿಸಿ, ದಿನಾಂಕ 1-4-2025 ರಿಂದ ಅನ್ವಯವಾಗುವಂತೆ ಕ್ರಮಕೈಗೊಂಡು ಹಾಗೂ ನನ್ನನ್ನು ಈ ಹುದ್ದೆಯಿಂದ ಮುಕ್ತಿಗೊಳಿಅಬೇಕೆಂದು ಮನವಿ ಮಾಡಿದ್ದಾರೆ.

ಸದನದಲ್ಲಿ ನಡೆಯುತ್ತಿರುವ ಘಟನೆಗಳಿಂದ ನನಗೆ ಬೇಜಾರಾಗಿದೆ. ಸಭಪತಿಗೆ ಹೇಳೋದಿಲ್ಲ ಕೇಳೋದಿಲ್ಲ. ಸದನದೊಳಗೆ ಪ್ರತಿಭಟನೆ ನಡೆಸುತ್ತಾರೆ. ಪರಿಷತ್ಗೆ ಪ್ಲೇ ಕಾರ್ಡ್‌ಗಳನ್ನು ತೆಗೆದುಕೊಂಡು ಬರುತ್ತಾರೆ. ಸದನ ನಡೆಸುವುದಕ್ಕೆ ನನಗೆ ಯೋಗ್ಯತೆ ಇಲ್ಲ. ಮೊನ್ನೆ ನಾನು 17 ನಿಮಿಷ ಸುಮ್ಮನೆ ಕುತ್ತಿದ್ದೆ. ಇದರಿಂದ ನಾನು ಸದನದಲ್ಲಿ ಇರಬಾರದು ಎಂದು ತೀರ್ಮಾನ ಮಾಡಿದ್ದೇನೆ. 45 ವರ್ಷಗಳಿಂದ ರಾಜಕೀಯದಲ್ಲಿ ಇದ್ದೇನೆ. ಸದನದಲ್ಲಿ ಯಾರೂ ಗೌರವ ಕೊಡುತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದ್ದರು. ಬಸವರಾಜ್ ಹೊರಟ್ಟಿ ಅವರು ಹಿಂದೆಯೇ ರಾಜೀನಾಮೆ ಮಾತನಾಡಿದ್ದರು. ಇತ್ತೀಚೆಗೆ ಮೇಲ್ಮನೆಯಲ್ಲಿ ಸಭಾಪತಿ ಹೊರಟ್ಟಿಯವರ ವಿರುದ್ಧವೇ ಅವಿಶ್ವಾಸ ಗೊತ್ತುವಳಿ ಮಂಡಿಸಲು ಕಾಂಗ್ರೆಸ್ ಸಜ್ಜಾಗಿತ್ತು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















