ಬೆಂಗಳೂರು: ಸದ್ಯ ಗುಜರಾತ್ ಮಾದರಿಯಲ್ಲೇ ರಾಜ್ಯದಲ್ಲೂ ಪಠ್ಯಪುಸ್ತಕದಲ್ಲಿ ಭಗವದ್ಗೀತೆ ಸೇರಿಸಬೇಕು ಎಂಬ ಚರ್ಚೆ ನಡೆಯುತ್ತಿದೆ. ಈ ವರ್ಷವೇ ಸೇರಿಸಬೇಕೆಂಬ ಒತ್ತಾಯಗಳು ಕೇಳಿ ಬರುತ್ತಿವೆ.
ಈ ಸಂಬಂಧ ನಗರದಲ್ಲಿ ಮಾತನಾಡಿರುವ ಶಿಕ್ಷಣ ಸಚಿವ ಬಿ ಸಿ ನಾಗೇಶ್, ರಾಜ್ಯದ ಪಠ್ಯಪುಸ್ತಕದಲ್ಲಿ ಈ ವರ್ಷ ಭಗವದ್ಗೀತೆ ಸೇರಿಸಲ್ಲ. ಈಗ ಪುಸ್ತಕದಲ್ಲಿ ಜ್ಞಾನವಿದೆ ಸಂಸ್ಕಾರವಿಲ್ಲ ಅಂತಿದ್ದಾರೆ. ಮಾರಲ್ ಸೈನ್ಸ್ ತರುವಂತೆ ಹಲವರು ಬೇಡಿಕೆ ಇಟ್ಟಿದ್ದಾರೆ. ಇಂತಹದೊಂದು ಬೇಡಿಕೆ ಬಗ್ಗೆ ನಾವೂ ಚರ್ಚೆ ಮಾಡ್ತೇವೆ.
ಸಿಎಂ ಬೊಮ್ಮಾಯಿ ಮತ್ತು ಶಿಕ್ಷಣ ತಜ್ಞರ ಜೊತೆಗೆ ಈ ಸಂಬಂಧ ಚರ್ಚೆ ನಡೆಸುತ್ತೇವೆ. ಬಳಿಕ ಅದನ್ನ ಹೇಗೆ ಜಾರಿ ಮಾಡಬೇಕೆಂದು ತೀರ್ಮಾನಿಸುತ್ತೇವೆ. ನನಗೆ ಗುಜರಾತ್ ಮಾದರಿ ಎಂಬುದು ಗೊತ್ತಿಲ್ಲ. ವಿದ್ಯಾರ್ಥಿಗಳಿಗೆ ಜ್ಞಾನದ ಜೊತೆಗೆ ಸಂಸ್ಕಾರ ಕಲಿಸಬೇಕಿದೆ. ಅದರ ಬಗ್ಗೆ ಈಗ ಚರ್ಚೆ ನಡೆಯುತ್ತಿದೆ ಎಂದಿದ್ದಾರೆ ಎಂದಿದ್ದಾರೆ.