ಸುದ್ದಿಒನ್, ಹಿರಿಯೂರು, ಆಗಸ್ಟ್. 21 : ತಾಲ್ಲೂಕಿನ ಐಮಂಗಲ ಹೋಬಳಿಯ ಚಿಕ್ಕಸಿದ್ದವ್ವನಹಳ್ಳಿ ಗ್ರಾಮದಲ್ಲಿ ನೂತನವಾಗಿ ಪ್ರಾರಂಭಿಸಿರುವ ಚಿಕ್ಕಸಿದ್ದವ್ವನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘ ಕೇಂದ್ರವನ್ನು ಶಿಮುಲ್ ನಿರ್ದೇಶಕ ಬಿಸಿ ಸಂಜೀವಮೂರ್ತಿ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು ಗ್ರಾಮೀಣ ಭಾಗದಲ್ಲಿ ಹೈನುಗಾರಿಕೆಯು ಆದಾಯದ ಮೂಲವಾಗಿದ್ದು ಯುವಜನತೆ ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡಬೇಕಾಗಿದೆ. ತಾಲ್ಲೂಕಿನಲ್ಲಿ ಉತ್ತಮ ಗುಣಮಟ್ಟದ ಹಾಲು ಉತ್ಪಾದನೆಯಾಗುತ್ತಿದೆ. ಶಿಮುಲ್ ಒಕ್ಕೂಟದಿಂದ ಹೆಚ್ಚಿನ ಸಹಕಾರ ನೀಡಿ ಹೈನುಗಾರಿಕೆ ಹೆಚ್ಚಿಸಲು ಕ್ರಮ ವಹಿಸಲಾಗುವುದು. ಮುಂದಿನ ದಿನಗಳಲ್ಲಿ ತಾಲ್ಲೂಕಿನ ಪ್ರತಿಯೊಂದು ಗ್ರಾಮಕ್ಕೂ ಹಾಲು ಉತ್ಪಾದಕರ ಸಹಕಾರ ಸಂಘ ಪ್ರಾರಂಭಿಸಲು ಶ್ರಮಿಸುವುದಾಗಿ ಭರವಸೆ ನೀಡಿದರು.
ನಾವು ಆಡಳಿತಕ್ಕೆ ಬಂದು ಒಂದು ವರ್ಷ ಪೂರೈಸಿದೆ. ಸಾಕಷ್ಟು ಸುಧಾರಣೆ ಕಂಡಿದೆ. 43 ಸಂಘಗಳು ಹೊಸದಾಗಿ ಆರಂಭಿಸಿದ್ದೇವೆ. ಇಂದಿನಿಂದ ಚಿಕ್ಕಸಿದ್ದವ್ವನಹಳ್ಳಿ ಗ್ರಾಮದಲ್ಲಿ ಹಾಲಿನ ಡೈರಿ ಪ್ರಾರಂಭವಾಗಿದ್ದು ಗ್ರಾಮಸ್ಥರಿಗೆ ತುಂಬಾ ಅನುಕೂಲವಾಗಲಿದೆ. ಮುಂದಿನ ದಿನಗಳಲ್ಲಿ ಒಕ್ಕೂಟದಿಂದ ಸಿಗುವ ಸೌಲಭ್ಯಗಳನ್ನು ಕೊಡಿಸುವ ಪ್ರಯತ್ನ ಮಾಡಲಾಗುವುದು. ಮೊದಲ ದಿನವೇ 103 ಲೀಟರ್ ಹಾಲು ಬಂದಿದ್ದು, ಮುಂದಿನ ದಿನಗಳಲ್ಲಿ 300ಕ್ಕೂ ಹೆಚ್ಚು ಲೀಟರ್ ಗಳಷ್ಟು ಅಭಿವೃದ್ಧಿಯಾಗಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಗಿರೀಶ್ ಎಸ್ ಟಿ, ಉಪಾಧ್ಯಕ್ಷ ಸಂತೋಷ್ ಎಸ್, ನಿರ್ದೇಶಕರಾದ ರವಿ ಹೆಚ್ ಜೆ, ಗಿರೀಶ್ ಎಂ, ರವಿ ಜಿ, ಮಂಜುಳ, ಕಾರ್ಯದರ್ಶಿ ಶ್ರೀಧರ್ ಬಿ ಟಿ, ಮುಖಂಡರಾದ ಎಂ ಜಿ ತಿಪ್ಪೇಸ್ವಾಮಿ, ಟಿ ಕಾರ್ತಿಕ್, ಎಸ್ ತಿಪ್ಪೇಸ್ವಾಮಿ ಸೇರಿದಂತೆ ಮತ್ತಿತರರು ಇದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















