Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಕಾಂಗ್ರೆಸ್ ಪಕ್ಷದ ಸುಳ್ಳು ಭರವಸೆಗಳ ಬಗ್ಗೆ ಜಾಗೃತರಾಗಿರಿ, ಮತ ಹಾಕಿದ ಜನರಿಗೆ ಮೋಸ ಮಾಡುತ್ತಿದೆ : ಪ್ರಧಾನಿ ನರೇಂದ್ರ ಮೋದಿ

---Advertisement---

ಸುದ್ದಿಒನ್ |ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಪಕ್ಷವನ್ನು ಗುರಿಯಾಗಿಸಿಕೊಂಡು ಹಲವು ಟೀಕೆಗಳನ್ನು ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಸುಳ್ಳು ಭರವಸೆಗಳ ವಿರುದ್ಧ ಜಾಗೃತರಾಗಬೇಕು ಎಂದು ಕರೆ ನೀಡಿದರು.

ಪ್ರಧಾನಿ ಮೋದಿ ಎಕ್ಸ್ ಪ್ಲಾಟ್ ಫಾರಂನಲ್ಲಿ ಟೀಕಿಸಿದ್ದಾರೆ. “ನೀವು ಕಾಂಗ್ರೆಸ್‌ಗೆ ಮತ ಹಾಕಿದರೆ ಆ ಪಕ್ಷವು ಆಡಳಿತ ನಡೆಸುವುದಿಲ್ಲ, ಬದಲಾಗಿ ಆರ್ಥಿಕತೆ ದುರ್ಬಲಗೊಳ್ಳುತ್ತದೆ ಮತ್ತು ಲೂಟಿ ಹೆಚ್ಚಾಗುತ್ತದೆ. ಈ ನಿಟ್ಟಿನಲ್ಲಿ ಜನರು ಜಾಗೃತರಾಗಬೇಕು. ಹರಿಯಾಣದ ಜನರು ಅವರ ಸುಳ್ಳಗಳನ್ನು ಹೇಗೆ ತಿರಸ್ಕರಿಸಿದರು ಎಂಬುದು ಇಡೀ ದೇಶಕ್ಕೆ ತಿಳಿದಿದೆ. ಭಾರತದ ಜನರು ಅಭಿವೃದ್ಧಿಯನ್ನು ಬಯಸುತ್ತಾರೆ. ಕಾಂಗ್ರೆಸ್‌ನ ನಕಲಿ ಭರವಸೆಯಲ್ಲ! #FakePromisesOfCongress

ಕರ್ನಾಟಕ, ಹಿಮಾಚಲ ಪ್ರದೇಶ ಮತ್ತು ತೆಲಂಗಾಣ ರಾಜಕೀಯದ ಬಗ್ಗೆ…

”ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ಆಂತರಿಕ ರಾಜಕಾರಣದಲ್ಲಿ ನಿರತವಾಗಿದೆ.ಅಭಿವೃದ್ಧಿ ಮಾಡಲು ಹೆಣಗಾಡುತ್ತಿದೆ.ಅಷ್ಟೇ ಅಲ್ಲ, ಈಗಿರುವ ಯೋಜನೆಗಳನ್ನು ಹಿಂದಕ್ಕೆ ಪಡೆಯಲು ಹೊರಟಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಸರ್ಕಾರಿ ನೌಕರರಿಗೆ ಸಮಯಕ್ಕೆ ಸರಿಯಾಗಿ ವೇತನ ನೀಡುತ್ತಿಲ್ಲ. ತೆಲಂಗಾಣದಲ್ಲಿ ಕಾಂಗ್ರೆಸ್ ಭರವಸೆ ನೀಡಿದ ಸಾಲ ಮನ್ನಾಕ್ಕಾಗಿ ರೈತರು ಎದುರು ನೋಡುತ್ತಿದ್ದಾರೆ. ಈ ಹಿಂದೆ, ಛತ್ತೀಸ್‌ಗಢ ಮತ್ತು ರಾಜಸ್ಥಾನದಲ್ಲಿ ಅವರು ಕೆಲವು ಯೋಜನೆಗಳ ಬಗ್ಗೆ ಭರವಸೆ ನೀಡಿದ್ದರು. ಆ ಯೋಜನೆಗಳು ಐದು ವರ್ಷಗಳವರೆಗೆ ಜಾರಿಯಲ್ಲಿ ಇರಲಿಲ್ಲ. ಕಾಂಗ್ರೆಸ್ ಹೇಗೆ ಕೆಲಸ ಮಾಡುತ್ತದೆ ಎಂಬುದಕ್ಕೆ ಹಲವು ಉದಾಹರಣೆಗಳಿವೆ,’’ ಎಂದು ಪ್ರಧಾನಿ ಮೋದಿ ಹೇಳಿದರು.

ಇಂದು ಕಾಂಗ್ರೆಸ್ ಸರಕಾರ ಇರುವ ಯಾವುದೇ ರಾಜ್ಯದಲ್ಲಿ ಆರ್ಥಿಕ ಪರಿಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದೆ. ಭರವಸೆಗಳನ್ನು ಈಡೇರಿಸುತ್ತಿಲ್ಲ. ಇದು ನಿಜವಾಗಿಯೂ ನಂಬಿ ಮತ ಹಾಕಿದ ಜನರಿಗೆ ಮೋಸ ಮಾಡುತ್ತಿದೆ. ಇಂತಹ ರಾಜಕಾರಣಕ್ಕೆ ಬಡವರು, ಯುವಕರು, ಮಹಿಳೆಯರು, ರೈತರು ಬಲಿಯಾಗಿದ್ದಾರೆ. ಜಾರಿಯಾಗದ ಭರವಸೆಗಳನ್ನು ನೀಡುವುದು ಸುಲಭ, ಆದರೆ ಅನುಷ್ಠಾನಗೊಳಿಸುವುದು ಕಷ್ಟ ಎಂಬುದು ಕಾಂಗ್ರೆಸ್ ಪಕ್ಷಕ್ಕೂ ಅರಿವಾಗಿದೆ. ಚುನಾವಣೆಗೂ ಮುನ್ನ ಬಹಳಷ್ಟು ಆಶ್ವಾಸನೆಗಳನ್ನು ನೀಡುತ್ತಾರೆ. ಅವುಗಳನ್ನು ಕಾರ್ಯರೂಪಕ್ಕೆ ತರಲು ಸಾಧ್ಯವೇ ಇಲ್ಲ ಎಂಬುದು ಅವರಿಗೂ ಗೊತ್ತಿದೆ,’’ ಎಂದು ಕಾಂಗ್ರೆಸ್ ಪಕ್ಷವನ್ನು ಗುರಿಯಾಗಿಸಿಕೊಂಡು ಟೀಕಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...