Connect with us

Hi, what are you looking for?

ಪ್ರಮುಖ ಸುದ್ದಿ

ರಸಗೊಬ್ಬರ, ಬಿತ್ತನೆ ಬೀಜ ಕೊರತೆಯಾಗದಂತೆ ಜಾಗೃತಿವಹಿಸಿ; ಶಾಸಕರಾದ ಜಿ.ಹೆಚ್.ತಿಪ್ಪಾರೆಡ್ಡಿ

ಸುದ್ದಿಒನ್, ಚಿತ್ರದುರ್ಗ, (ಮೇ.25) : ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಈ ಬಾರಿಯ ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಕಾರ್ಯ ಉತ್ತಮವಾಗುವ ನಿರೀಕ್ಷೆ ಇದೆ. ಹಾಗಾಗಿ ರಸಗೊಬ್ಬರ, ಬಿತ್ತನೆ ಬೀಜ ಕೊರತೆಯಾಗದಂತೆ ಮುಂಜಾಗ್ರತಾ ಕ್ರಮವಹಿಸಿ ವಿತರಣೆಗೆ ಕ್ರಮಕೈಗೊಳ್ಳಬೇಕು ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಎಪಿಎಂಸಿ ಬಳಿಯ ಜಂಟಿ ಕೃಷಿ ನಿರ್ದೇಶಕರ ಕಚೇರಿ ಆವರಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಬಿತ್ತನೆ ಬೀಜಗಳಾದ ಶೇಂಗಾ, ಉದ್ದು, ಮೆಕ್ಕೆಜೋಳ ಸೇರಿದಂತೆ ಬಿತ್ತನೆ ಬೀಜಕ್ಕೆ ಸಬ್ಸಿಡಿ ನಿಗಧಿಪಡಿಸಲಾಗಿದ್ದು, ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗದಂತೆ ನಿಗಧಿತ ಸಮಯದಲ್ಲಿ ಕೃಷಿ ಪರಿಕರ, ಬಿತ್ತನೆ ಬೀಜ, ರಸಗೊಬ್ಬರ ಖರೀದಿ ಸೇರಿದಂತೆ ಕೃಷಿ ಚಟುವಟಿಕೆಗಳಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.

ಈ ಬಾರಿ ಉತ್ತಮವಾಗಿ ಮುಂಗಾರು ಹಂಗಾಮಿನಲ್ಲಿ ಬಿತ್ತನೆಕಾರ್ಯವಾಗುವ ಆಶಾಭಾವನೆ ಇದೆ.ಹಾಗಾಗಿ ಕೃಷಿ ಇಲಾಖೆ ಅಧಿಕಾರಿಗಳು ಮುಂಜಾಗ್ರತಾ ಕ್ರಮವಹಿಸಿ ರೈತರಿಗೆ ಗುಣಮಟ್ಟದ ಬೀಜ ವಿತರಣೆಗೆ ಅಗತ್ಯಕ್ರಮವಹಿಸಬೇಕು ಎಂದು ತಾಕೀತು ಮಾಡಿದರು.

ಕಳೆದ ವರ್ಷ ರಾಜ್ಯ ಮತ್ತು ಜಿಲ್ಲೆಯಲ್ಲಿ ಯೂರಿಯಾ ರಸಗೊಬ್ಬರದ ತುಂಬಾ ಸಮಸ್ಯೆಯಾಯಿತು. ಆದಾಗ್ಯೂ ಜಿಲ್ಲೆಗೆ ಅಗತ್ಯಪ್ರಮಾಣದಲ್ಲಿ ರಸಗೊಬ್ಬರ ಪೂರೈಕೆ ಮಾಡಿ ರೈತರಿಗೆ ಯಾವುದೇ ಸಮಸ್ಯೆಯಾಗದಂತೆ ಕ್ರಮಕೈಗೊಳ್ಳಲಾಯಿತು ಎಂದರು.

ರಿಯಾಯಿತಿ ದರದ ಬಿತ್ತನೆ ಬೀಜ ವಿವರ; 2021ರ ಮುಂಗಾರು ಹಂಗಾಮಿನಲ್ಲಿ ಕೃಷಿ ಇಲಾಖೆ ವತಿಯಿಂದ ರಿಯಾಯಿತಿ ದರಲ್ಲಿ ಚಿತ್ರದುರ್ಗ ಜಿಲ್ಲೆಯ ಎಲ್ಲ ರೈತ ಸಂಪರ್ಕ ಕೇಂದ್ರಗಳ ಮೂಲಕ ವಿವಿಧ ಬಿತ್ತನೆ ಬೀಜಗಳಾದ ಜೋಳ, ತೊಗರಿ, ಅಲಸಂದೆ, ರಾಗಿ, ನವಣೆ, ನೆಲಗಡಲೆ, ಸೂರ್ಯಕಾಂತಿ, ಹಾಗೂ ಮುಸುಕಿನ ಜೋಳ ಬಿತ್ತನೆ ಬೀಜಗಳನ್ನು ಸಾಮಾನ್ಯ ವರ್ಗದ ರೈತರಿಗೆ ಶೇ.50ರ ರಿಯಾಯಿತಿದರದಲ್ಲಿ ಹಾಗೂ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ವರ್ಗದ ರೈತರಿಗೆ ಶೇ.75ರ ರಿಯಾಯಿತಿ ದರಲ್ಲಿ ಎಲ್ಲ ವರ್ಗದ ರೈತರಿಗೆ ಗರಿಷ್ಠ ಎರಡು ಹೆಕ್ಟೇರ್ ಅಥವಾ ಅವರ ಹಿಡುವಳಿ ಯಾವುದು ಕಡಿಮೆಯೋ ಆ ವಿಸ್ತೀರ್ಣಕ್ಕೆ ಸೀಮಿತಗೊಳಿಸಿ ವಿತರಣೆ ಮಾಡಲಾಗುವುದು ಎಂದರು.

ಬಿತ್ತನೆ ಬೀಜ ವಿತರಣೆ ಕಾರ್ಯಕ್ರಮವು ತಾಲ್ಲೂಕಿನ ಎಲ್ಲಾ ಹೋಬಳಿ ರೈತ ಸಂಪರ್ಕಗಳ ಮುಖಾಂತರ ಸರ್ಕಾರದ ಮಾರ್ಗಸೂಚಿಯಂತೆ ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ಮಾತ್ರ ವಿತರಿಸಲಾಗುವುದು. ರೈತರು ತಮ್ಮ ಎಫ್‍ಐಡಿ ಕಾರ್ಡ್ ಅಥವಾ ಆಧಾರ್ ಕಾರ್ಡ್ ಸಲ್ಲಿಸಿ ಕೋವಿಡ್ ನಿಯಮಗಳನ್ನು ಪಾಲಿಸಿ ಬಿತ್ತನೆ ಬೀಜಗಳನ್ನು ಪಡೆಯಬಹುದಾಗಿದೆ ಎಂದು ತಿಳಿಸಿದೆ.

ಪ್ರಸ್ತುತ ರಸಗೊಬ್ಬರ ದಾಸ್ತಾನು ಸಾಕಷ್ಟ ಲಭ್ಯವಿದ್ದು, ತಾಲ್ಲೂಕಿನ ಎಲ್ಲ ರೈತ ಬಾಂಧವರಲ್ಲಿ ತಮ್ಮ ಹತ್ತಿರದ ಖಾಸಗಿ ರಸಗೊಬ್ಬರ ಮಾರಾಟಗಾರರು ಮತ್ತು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಹಳೆಯ ದರದಲ್ಲಿ ರಸಗೊಬ್ಬರಗಳನ್ನು ಪಡೆಯಲು ಕೋರಿದೆ. ಉದಾಹರಣೆಗೆ ಇಫ್ಕೋ ಸಂಸ್ಥೆಯ ರಸಗೊಬ್ಬರಗಳಾದ (ಪ್ರತಿ ಚೀಲಕ್ಕೆ) ಡಿಎಪಿ-ರೂ.1200, 10:26:26-ರೂ.1175, 20:20:0:13-ರೂ.975, 12:32:16-ರೂ.1185 ದರದಲ್ಲಿ ರಸಗೊಬ್ಬರವನ್ನು ಪಡೆಯಬಹುದು.

ಜಂಟಿ ಕೃಷಿ ನಿರ್ದೇಶಕರಾದ ರಮೇಶ್‍ಕುಮಾರ್, ಉಪನಿರ್ದೇಶಕ ಹುಲಿರಾಜ್, ಸಹಾಯಕ ಕೃಷಿ ನಿರ್ದೇಶಕರಾದ ಎನ್.ಚಂದ್ರಕುಮಾರ್ ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ವರ್ಗದವರು, ರೈತರು ಉಪಸ್ಥಿತರಿದ್ದರು.

Click to comment

Leave a Reply

Your email address will not be published. Required fields are marked *

Latest

ದಿನ ಭವಿಷ್ಯ

ಬುಧವಾರ ರಾಶಿ ಭವಿಷ್ಯ-ಆಗಸ್ಟ್-4,2021 ಕಾಮಿಕಾ ಏಕಾದಶಿ ಸೂರ್ಯೋದಯ: 06:04 AM, ಸೂರ್ಯಸ್ತ: 06:44 PM ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077, ಪ್ಲವ ನಾಮ ಸಂವತ್ಸರ ಆಷಾಢ ಮಾಸ, ದಕ್ಷಿಣಾಯಣ, ಗ್ರೀಷ್ಮ...

ಚಿತ್ರದುರ್ಗ

upper bhadra meeting in DS Hally, chitradurga ಡಿಎಸ್ ಹಳ್ಳಿಯಲ್ಲಿ ಭದ್ರಾ ಮೇಲ್ದಂಡೆ ಸಭೆ; ಗ್ರಾಮಸ್ಥರು ಭಾಗಿ ಸುದ್ದಿಒನ್, ಚಿತ್ರದುರ್ಗ, (ಆ.03) : ತಾಲೂಕಿನ ದೊಡ್ಡಸಿದ್ದವ್ವನಹಳ್ಳಿ ಗ್ರಾಮದ ಜ್ಞಾನಪೂರ್ಣ ಶಾಲೆ ಆವರಣದಲ್ಲಿ...

ಚಿತ್ರದುರ್ಗ

ಸುದ್ದಿಒನ್, ಚಿತ್ರದುರ್ಗ, (ಆ.03) : ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಎಸ್ ಜೆ ಎಮ್ ಸಿ ಬಿ ಎಸ್ ಇ ರೆಸಿಡೆನ್ಷಿಯಲ್ ಶಾಲೆಯು 2020-21 ನೇ ಸಾಲಿನ ಸಿ ಬಿ ಎಸ್ ಇ...

ಪ್ರಮುಖ ಸುದ್ದಿ

ಬೆಂಗಳೂರು: ಸಚಿವ ಸಂಪುಟ ರಚನೆ ಬಗ್ಗೆ ಚರ್ಚೆ ನಡೆಸೋದಕ್ಕಾಗಿಯೇ ಸಿಎಂ ಮೂರು ದಿನದಿಂದ ದೆಹಲಿಯಲ್ಲಿದ್ದಾರೆ. ಈಗಾಗಲೇ ಹೈಕಮಾಂಡ್ ಜೊತೆ ಈ ಬಗ್ಗೆ ಮಾತುಕತೆ ನಡೆದಿದೆ ಎನ್ನಲಾಗಿದೆ. ಅಷ್ಟೇ ಅಲ್ಲ ಸಂಪುಟದಲ್ಲಿ ಯಾರೆಲ್ಲಾ ಇರ್ಬೇಕು...

ಪ್ರಮುಖ ಸುದ್ದಿ

ಮುಂಬೈ: ಶಿಲ್ಲಾ ಶೆಟ್ಟಿ ಸೋಷಿಯಲ್ ಮೀಡಿಯಾದಲ್ಲಿ ಎಷ್ಟು ಆ್ಯಕ್ಟೀವ್ ಆಗಿದ್ರೋ ಮಗ ವಿಹಾನ್ ಕುಂದ್ರಾ ಕೂಡ ಅಷ್ಟೇ ಆ್ಯಕ್ಟೀವ್ ಆಗಿದ್ದ. ಸದಾ ಸೋಷಿಯಲ್ ಮೀಡಿಯಾದಲ್ಲಿ ಒಂದಿಲ್ಲೊಂದು ಪೋಸ್ಟ್ ಹಾಕ್ತಾ ಇದ್ದ. ಆದ್ರೆ ರಾಜ್...

ಪ್ರಮುಖ ಸುದ್ದಿ

ರಾಜಸ್ಥಾನ : ಹಿಂದಿನ ಕಾಲದಿಂದಲೂ ಪಾರಿವಾಳ ಸಂದೇಶ ರವಾನಿಸುವ, ಬೇಹುಗಾರಿಕೆಯಲ್ಲೂ ತನ್ನ ಚಾಣಾಕ್ಯತನ ತೋರಿದೆ. ತಂತ್ರಜ್ಞಾನ ಮುಂದುವರೆದ ಕಾಲದಲ್ಲೂ ಪಾಕಿಸ್ತಾನದಿಂದ ಪತ್ರವೊಂದನ್ನ ಹೊತ್ತು ತಂದಿದೆ ಪಾರಿವಾಳ. ಹೌದು, ಈ ಘಟನೆ ನಡೆದಿರೋದು ರಾಜಸ್ಥಾನದ...

You May Also Like

ಚಿತ್ರದುರ್ಗ

ಚಿತ್ರದುರ್ಗ, (ಜು.31): ಕೋಟೆನಾಡಿನಲ್ಲಿ ಮತ್ತೆ ಸರಗಳ್ಳತ ಹಾವಳಿ ಶುರುವಾಗಿದೆ. ಬೆಳಗಿ ಹೊತ್ತು ವಾಯು ವಿಹಾರಕ್ಕೆ ಬರುವ ಮಹಿಳೆಯರನ್ನು ಟಾರ್ಗೆಟ್ ಮಾಡುವ ಕಳ್ಳರು ಬೈಕ್ ನಲ್ಲಿ ಬಂದು ಸರ ಕಿತ್ತುಕೊಂಡು ಪರಾರಿಯಾಗುತ್ತಿದ್ದಾರೆ. ಶನಿವಾರ ಬೆಳಗ್ಗೆ...

ಪ್ರಮುಖ ಸುದ್ದಿ

ಅಭಿಮಾನಿಗಳು ತಮ್ಮ ಅಭಿಮಾನವನ್ನ ಒಂದೊಂದು ಬಾರಿ ಒಂದೊಂದು ರೀತಿಯಲ್ಲಿ ಅಭಿಮಾನ ತೋರಿಸ್ತಾರೆ. ಅದರಲ್ಲೂ ಅಭಿಮಾನಿಗಳು ತಮ್ಮ ನೆಚ್ಚಿನ ನಟ ನಟಿಯರ ಫೋಟೋಗಳಿಗೆ ಹಾರ ಹಾಕಿ, ಅಭಿಷೇಕ‌ ಮಾಡಿ ಎಂಜಾಯ್ ಮಾಡ್ತಾರೆ. ಇನ್ನು ಒಂದೆಜ್ಜೆ...

ಆರೋಗ್ಯ

ರಾಗಿ ತಿಂದೋನಿಗೆ ರೋಗವಿಲ್ಲ ಅನ್ನೋ ಮಾತು ಕೇಳಿರ್ತೀರಿ. ಆದ್ರೆ ಈ ಮಾತು ಯಾಕೆ ಹೇಳ್ತಾರೆ ಅಂತ ಗೊತ್ತಾಗ್ಬೇಕಂದ್ರೆ ರಾಗಿಯಿಂದ ಆರೋಗ್ಯಕ್ಕೆ ಅದೆಷ್ಟೆಲ್ಲ ಲಾಭಗಳಿವೆ ಎಂದು ತಿಳ್ಕೋಬೇಕು. ರಾಗಿಯಲ್ಲಿ ಸಾಕಷ್ಟು ಕ್ಯಾಲ್ಶಿಯಂ ಇದೆ. ಆಸ್ಟಿಯೋಪೋರೋಸಿಸ್...

ಆರೋಗ್ಯ

ಅರಳಿ ಮರ ಸಾಮಾನ್ಯವಾಗಿ ಎಲ್ಲೆಡೆ ಇರುತ್ತೆ. ಅದಕ್ಕೆ ನಗರ, ಗ್ರಾಮೀಣ ಅಂತೆಲ್ಲಾ ಏನಿಲ್ಲ. ನಗರ ಪ್ರದೇಶದಲ್ಲೂ ದೇವಾಲಯದ ಮುಂದೆ ಅರಳಿಮರವನ್ನ ಕಾಣಬಹುದು. ಈ ಅರಳಿ‌ಮರದ ಎಲೆಗಳಿಂದ ಸಾಕಷ್ಟು ಲಾಭಗಳಿವೆ. ಅದು ಅಷ್ಟಾಗಿ ಯಾರಿಗೂ...

Copyright © 2021 Suddione. Kannada online news portal

error: Content is protected !!