Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಣದ ಆನ್‌ಲೈನ್ ಗೇಮ್‌ಗಳಿಗೆ ಕಟ್ಟೆಚ್ಚರ: ಮೇ 1ರಿಂದ ಹೊಸ ನಿಯಮ ಜಾರಿ

---Advertisement---

ಭಾರತದಲ್ಲಿ ಹಣದ ಬೆಟ್ಟಿಂಗ್ ಒಳಗೊಂಡ ಆನ್‌ಲೈನ್ ಗೇಮ್‌ಗಳನ್ನು ನಿಷೇಧಿಸುವ ದಿಕ್ಕಿನಲ್ಲಿ ಕೇಂದ್ರ ಸರ್ಕಾರ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ಕಳೆದ ವರ್ಷ ಸಂಸತ್ತಿನಲ್ಲಿ ಅಂಗೀಕಾರಗೊಂಡ ‘ಆನ್‌ಲೈನ್ ಗೇಮಿಂಗ್ ಪ್ರಚಾರ ಮತ್ತು ನಿಯಂತ್ರಣ ಕಾಯ್ದೆ’ ಜಾರಿಗೆ ತರಲು ಅಗತ್ಯವಿರುವ ನಿಯಮಗಳನ್ನು ಇದೀಗ ಕೇಂದ್ರ ಅಧಿಕೃತವಾಗಿ ಅಧಿಸೂಚಿಸಿದೆ. ಈ ಹೊಸ ನಿಯಮಗಳು ಮೇ 1, 2026ರಿಂದ ಜಾರಿಗೆ ಬರಲಿವೆ.

ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯವು ‘ಆನ್‌ಲೈನ್ ಗೇಮಿಂಗ್ ಅಥಾರಿಟಿ’ ಸ್ಥಾಪಿಸುವುದಾಗಿ ಘೋಷಿಸಿದ್ದು, ಯಾವ ಗೇಮ್ ಕಾನೂನುಬದ್ಧ ಮತ್ತು ಯಾವುದು ಕಾನೂನುಬಾಹಿರ ಎಂಬುದನ್ನು ನಿರ್ಧರಿಸುವ ಅಧಿಕಾರ ಈ ಸಂಸ್ಥೆಗೆ ಇರಲಿದೆ.
ಐಟಿ ಇಲಾಖೆಯ ಕಾರ್ಯದರ್ಶಿ ಎಸ್. ಕೃಷ್ಣನ್ ಮಾತನಾಡಿ, “ಹಣದ ವ್ಯವಹಾರ ಇರುವ ಗೇಮ್‌ಗಳಿಗಷ್ಟೇ ಕಡ್ಡಾಯ ನಿಯಂತ್ರಣ ಇರಲಿದೆ. ಇತರೆ ಸಾಮಾನ್ಯ ಗೇಮ್‌ಗಳಿಗೆ ಕಡ್ಡಾಯ ನೋಂದಣಿ ಅವಶ್ಯಕತೆ ಇರುವುದಿಲ್ಲ. ಆದರೆ ಇ-ಸ್ಪೋರ್ಟ್ಸ್ ಗೇಮ್‌ಗಳು ಕಾನೂನಿನಡಿ ನೋಂದಾಯಿಸಿಕೊಳ್ಳಬೇಕು,” ಎಂದು ಸ್ಪಷ್ಟಪಡಿಸಿದರು. ಒಂದು ಗೇಮ್ ರಿಯಲ್ ಮನಿ ಗೇಮ್ ಆಗಿದೆಯೇ ಅಥವಾ ಸೋಶಿಯಲ್ ಗೇಮ್ ಅಥವಾ ಇ-ಸ್ಪೋರ್ಟ್ಸ್ ಆಗಿದೆಯೇ ಎಂಬುದನ್ನು ಗುರುತಿಸುವ ಪ್ರಕ್ರಿಯೆ ನಿರ್ದಿಷ್ಟ ಮಾನದಂಡಗಳ ಆಧಾರದಲ್ಲಿ ನಡೆಯಲಿದೆ. ಅಗತ್ಯವಿದ್ದಲ್ಲಿ ಅಥಾರಿಟಿ ಸ್ವಯಂ ಪ್ರೇರಿತವಾಗಿ ಕ್ರಮ ಕೈಗೊಳ್ಳುವ ಅಧಿಕಾರ ಹೊಂದಿರುತ್ತದೆ.

ಈ ಅಥಾರಿಟಿ ಆರು ಸದಸ್ಯರ ತಂಡದೊಂದಿಗೆ ಕಾರ್ಯನಿರ್ವಹಿಸಲಿದೆ. ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಅಧ್ಯಕ್ಷರಾಗಿದ್ದು, ಗೃಹ, ಆರ್ಥಿಕ ವ್ಯವಹಾರಗಳು, ಮಾಹಿತಿ ಮತ್ತು ಪ್ರಸಾರ, ಯುವಜನ ವ್ಯವಹಾರಗಳು ಹಾಗೂ ಕ್ರೀಡಾ ಸಚಿವಾಲಯ ಮತ್ತು ನ್ಯಾಯಾಂಗ ಇಲಾಖೆಯ ಜಂಟಿ ಕಾರ್ಯದರ್ಶಿಗಳು ಸದಸ್ಯರಾಗಿರುತ್ತಾರೆ.

ಆನ್‌ಲೈನ್ ಬೆಟ್ಟಿಂಗ್ ಆಪ್‌ಗಳ ಹೆಚ್ಚುತ್ತಿರುವ ಹಾವಳಿಯನ್ನು ನಿಯಂತ್ರಿಸುವ ಉದ್ದೇಶದಿಂದ ಈ ಕಾನೂನು ತರಲಾಗಿದೆ. ನಿಯಮ ಉಲ್ಲಂಘಿಸಿದ ಗೇಮಿಂಗ್ ವೇದಿಕೆಗಳಿಗೆ ಗರಿಷ್ಠ 3 ವರ್ಷಗಳ ಜೈಲು ಶಿಕ್ಷೆ ಅಥವಾ 1 ಕೋಟಿ ರೂಪಾಯಿವರೆಗೆ ದಂಡ ಅಥವಾ ಎರಡನ್ನೂ ವಿಧಿಸುವ ವ್ಯವಸ್ಥೆ ಈ ಕಾಯ್ದೆಯಲ್ಲಿ ಹೊಂದಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...