Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬೆಳಗಟ್ಟ: ಶ್ರೀಗುರುಕರಿಬಸವೇಶ್ವರಜ್ಜಯ್ಯಸ್ವಾಮಿಯ 25ನೇ ಮಹಾರಥೋತ್ಸವ : ಭಕ್ತಿಯಲ್ಲಿ ಶಕ್ತಿ ಅಡಗಿದೆ

---Advertisement---

ಚಿತ್ರದುರ್ಗ: ಭಕ್ತಿ ನಂಬಿಕೆ ಆಧಾರಿಸಿದೆ. ಭಗವಂತನ ದರ್ಶನದ ಸಾಧನ ಭಕ್ತಿ. ಈ ಭಕ್ತಿಯಲ್ಲಿ ಶಕ್ತಿ ಅಡಗಿದೆ ಎಂದು ಆಂಧ್ರಪ್ರದೇಶದ ಉರುವಕೊಂಡ ಜಗದ್ಗುರು ಡಾ ಕರಿಬಸವೇಶ್ವರಾಜೇಂದ್ರ ಸ್ವಾಮೀಜಿ ಅಭಿಪ್ರಾಯಪಟ್ಟರು.

ಚಿತ್ರದುರ್ಗ ತಾಲ್ಲೂಕಿನ ಬೆಳಗಟ್ಟದಲ್ಲಿ ಗುರುವಾರ ನಡೆದ ಶ್ರೀಗುರುಕರಿಬಸವೇಶ್ವರಜ್ಜಯ್ಯಸ್ವಾಮಿಯ 25ನೇ ವರ್ಷದ ಮಹಾರಥೋತ್ಸವದ ಸಾನಿಧ್ಯ ವಹಿಸಿ ಮಾತನಾಡಿದರು.

ಕಬೀರಾನಂದ ಆಶ್ರಮದ ಶಿವಾಲಿಂಗಾನಂದ ಸ್ವಾಮೀಜಿ ಮಾತನಾಡಿ, ಮಹಾ ಭಕ್ತೆ ಮಹದೇವಮ್ಮ ಅವರು ಆಧ್ಯಾತ್ಮ ಮತ್ತು ಧಾರ್ಮಿಕ ಕ್ಷೇತ್ರಗಳಲ್ಲಿ ಅಪೂರ್ವ ಸಾಧನೆ ಮಾಡಿರುವ ಸಾಧಕರು. ವ್ಯಕ್ತಿ ಮತ್ತು ಸಮಾಜದ ಸುಧಾರಣೆಗೆ ಸಂಪೂರ್ಣ ಸಮರ್ಪಿಸಿಕೊಂಡವರು.
ಮಹದೇವಮ್ಮ ಬದುಕು ಆದರ್ಶ ಎಂದರು.

ಚಳ್ಳಕೆರೆ ಶಾಸಕರು ಹಾಗೂ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ. ರಘುಮೂರ್ತಿ ಅವರು ಮಹದೇವಮ್ಮ ಅವರ ಸಾಧನೆಯ ಮಹತ್ವ ತಿಳಿಸಿದರು.
ಈ ಸಂದರ್ಭದಲ್ಲಿ ಶ್ರೀಗುರುಕರಿಬಸವೇಶ್ವರಜ್ಜಯ್ಯಸ್ವಾಮಿ ಮಠದ ಪೀಠಾಧ್ಯಕ್ಷರಾದ ಮಹದೇವಮ ಅಧ್ಯಕ್ಷತೆ ವಹಿಸಿದ್ದರು.  ಡಾ ಪುರುಷೋತ್ತಮ ಪ್ರಾರ್ಥನೆ ಸಲ್ಲಿಸಿದರು. ಟಿ. ನಾಗೇಶ್ ಸ್ವಾಗತಿಸಿದರು. ಸೋಮೇಂದ್ರ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ. ನಾಗೇಂದ್ರ ಆಚಾರ್ಯ, ಯುಗಧರ್ಮ ರಾಮಣ್ಣ ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...