ಚಿತ್ರದುರ್ಗ: ಭಕ್ತಿ ನಂಬಿಕೆ ಆಧಾರಿಸಿದೆ. ಭಗವಂತನ ದರ್ಶನದ ಸಾಧನ ಭಕ್ತಿ. ಈ ಭಕ್ತಿಯಲ್ಲಿ ಶಕ್ತಿ ಅಡಗಿದೆ ಎಂದು ಆಂಧ್ರಪ್ರದೇಶದ ಉರುವಕೊಂಡ ಜಗದ್ಗುರು ಡಾ ಕರಿಬಸವೇಶ್ವರಾಜೇಂದ್ರ ಸ್ವಾಮೀಜಿ ಅಭಿಪ್ರಾಯಪಟ್ಟರು.
ಚಿತ್ರದುರ್ಗ ತಾಲ್ಲೂಕಿನ ಬೆಳಗಟ್ಟದಲ್ಲಿ ಗುರುವಾರ ನಡೆದ ಶ್ರೀಗುರುಕರಿಬಸವೇಶ್ವರಜ್ಜಯ್ಯಸ್ವಾಮಿಯ 25ನೇ ವರ್ಷದ ಮಹಾರಥೋತ್ಸವದ ಸಾನಿಧ್ಯ ವಹಿಸಿ ಮಾತನಾಡಿದರು.
ಕಬೀರಾನಂದ ಆಶ್ರಮದ ಶಿವಾಲಿಂಗಾನಂದ ಸ್ವಾಮೀಜಿ ಮಾತನಾಡಿ, ಮಹಾ ಭಕ್ತೆ ಮಹದೇವಮ್ಮ ಅವರು ಆಧ್ಯಾತ್ಮ ಮತ್ತು ಧಾರ್ಮಿಕ ಕ್ಷೇತ್ರಗಳಲ್ಲಿ ಅಪೂರ್ವ ಸಾಧನೆ ಮಾಡಿರುವ ಸಾಧಕರು. ವ್ಯಕ್ತಿ ಮತ್ತು ಸಮಾಜದ ಸುಧಾರಣೆಗೆ ಸಂಪೂರ್ಣ ಸಮರ್ಪಿಸಿಕೊಂಡವರು.
ಮಹದೇವಮ್ಮ ಬದುಕು ಆದರ್ಶ ಎಂದರು.
ಚಳ್ಳಕೆರೆ ಶಾಸಕರು ಹಾಗೂ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ. ರಘುಮೂರ್ತಿ ಅವರು ಮಹದೇವಮ್ಮ ಅವರ ಸಾಧನೆಯ ಮಹತ್ವ ತಿಳಿಸಿದರು.
ಈ ಸಂದರ್ಭದಲ್ಲಿ ಶ್ರೀಗುರುಕರಿಬಸವೇಶ್ವರಜ್ಜಯ್ಯಸ್ವಾಮಿ ಮಠದ ಪೀಠಾಧ್ಯಕ್ಷರಾದ ಮಹದೇವಮ ಅಧ್ಯಕ್ಷತೆ ವಹಿಸಿದ್ದರು. ಡಾ ಪುರುಷೋತ್ತಮ ಪ್ರಾರ್ಥನೆ ಸಲ್ಲಿಸಿದರು. ಟಿ. ನಾಗೇಶ್ ಸ್ವಾಗತಿಸಿದರು. ಸೋಮೇಂದ್ರ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ. ನಾಗೇಂದ್ರ ಆಚಾರ್ಯ, ಯುಗಧರ್ಮ ರಾಮಣ್ಣ ಇದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.





















