ಬೆಳಗಾವಿ: ಲಸಿಕೆ ತೆಗೆದುಕೊಂಡ ಬಳಿಕ ಅಸ್ವಸ್ಥಗೊಂಡಿದ್ದ ಮಕ್ಕಳನ್ನ ಬೀಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆಂದು ಅಡ್ಮಿಟ್ ಮಾಡಲಾಗಿತ್ತು. ಆದ್ರೆ ಮಕ್ಕಳು ನಿಗೂಢವಾಗಿ ಸಾವನ್ನಪ್ಪಿದ್ದು, ಪೋಷಕರ ಗೋಳು ಮುಗಿಲು ಮುಟ್ಟಿದೆ. ಈ ಸಂಬಂಧ ಮಾತನಾಡಿರುವ ಡಿಎಚ್ಓ ತನಿಖೆ ಮಾಡುತ್ತೇವೆ ಎಂದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಡಿಎಚ್ಓ ಡಾ. ಎಸ್ ವಿ ಮುನ್ಯಾಳ್, ಮರಣೋತ್ತರ ಪರೀಕ್ಷೆ ಬಂದ ಬಳಿಕ ಪರಿಶೀಲಿಸಿ ಕ್ರಮ ತೆಗೆದುಕೊಳ್ಳುತ್ತೇವೆ. ಮಕ್ಕಳ ಸಾವಿನ ತನಿಖೆಗೆ ಈಗಾಗಲೇ ಆದೇಶ ನೀಡಿದ್ದೇನೆ. ರಕ್ತದ ಮಾದರಿ, ಮಲಮೂತ್ರದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಿಕೊಟ್ಟಿದ್ದೇವೆ.
ಈ ಸಾವಿನಲ್ಲಿ ಯಾವುದೇ ಸಿಬ್ಬಂದಿ ತಪ್ಪು ಮಾಡಿದ್ದರು ಅವರಿಗೆ ತಕ್ಕ ಶಿಕ್ಷೆಯಾಗಲಿದೆ. ಯಾವುದೇ ಲಸಿಕೆಯ ಪ್ರತಿಕೂಲ ಪರಿಣಾಮ ಬೀರಿದ್ದರು ಅದರ ಪರಿಶೀಲನೆಗೆ ಸಮಿತಿ ಇದೆ. ಆ ಸಮಿತಿಯಿಂದ ಲಸಿಕೆಯಿಂದ ಅಡ್ಡ ಪರಿಣಾಮ ಬೀರಿದ ಬಗ್ಗೆಯೂ ತನಿಖೆ ನಡೆಸಲಾಗುತ್ತದೆ.
ಜ.12 ರಂದು 21 ಮಕ್ಕಳಿಗೆ ಲಸಿಕೆ ನೀಡಲಾಗಿದೆ. ಆಧರೆ ಅದರಲ್ಲಿ ನಾಲ್ಕು ಮಕ್ಕಳಿಗೆ ದಡಾರ್ ರುಬೆಲ್ಲಾ ಲಸಿಕೆ ನೀಡಲಾಗಿತ್ತು. ಪ್ರತಿಕೂಲ ಪರಿಣಾಮವಾದ ಬಳಿಕ ಮಕ್ಕಳನ್ನ ರಾಮದುರ್ಗ ತಾಲೂಕು ಆಸ್ಪತ್ರೆಯಲ್ಲೇ ಅಡ್ಮಿಟ್ ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಈಗ ದಿಢೀರ್ ಸಾವನ್ನಪ್ಪಿದ್ದು, ಪರಿಶೀಲನೆ ನಡೆಸುವುದಾಗಿ ಭರವಸೆ ನೀಡಿದ್ದಾರೆ.
ಚಿತ್ರದುರ್ಗ.ಫೆ.07: ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಜತೆಗೆ ದೇಶದ, ರಾಜ್ಯದ ಸಾಂಸ್ಕøತಿಕ ರಾಯಬಾರಿಗಳಾಗಿ ಕಲೆ, ಸಂಸ್ಕøತಿಯನ್ನು ಮುಂದಿನ ಪೀಳಿಗೆಗೆ ಕೊಂಡ್ಯೊಯುವ ಕೆಲಸ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಶಿಕ್ಷಣ ಇಲಾಖೆಗೆ ಈಗಾಗಲೇ 13 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗಿದ್ದು, ಹೊಸದಾಗಿ 15…
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…