Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಒಳ ಮೀಸಲಾತಿ ಕೇಂದ್ರಕ್ಕೆ ಶಿಫಾರಸ್ಸು ಒತ್ತಾಯಿಸಿ ಡಿಸೆಂಬರ್ 11ರಂದು ಬೆಳಗಾವಿ ಚಲೋ : ಮಾರೆಪ್ಪ

Facebook
Twitter
Telegram
WhatsApp

 

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ. ನ. 23 :  ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾರಿ ಹೋರಾಟ ಸಮಿತಿ ವತಿಯಿಂದ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಗೆ ಹಿಂದಿನ ಬಿಜೆಪಿ ಸರ್ಕಾರವೂ ಕೇಂದ್ರಕ್ಕೆ ಶಿಫಾರಸ್ಸು ಮಾಡಿದ ಆದೇಶದಲ್ಲಿ ನ್ಯೂನತೆಗಳನ್ನು ಸರಿಪಡಿಸಿ ಪರಿಷ್ಕೃತ ಆದೇಶದೊಂದಿಗೆ ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಡಿ.11ರಂದು ಬೆಳಗಾವಿ ಚಲೋ, ಪ್ರತಿಭಟನಾ ಧರಣಿ ಹಾಗೂ ಬಿಜೆಪಿ ಕೇಂದ್ರ ಸರ್ಕಾರವೂ ಪರಿಶಿಷ್ಟ ಜಾತಿ ಒಳ ಮೀಸಲಾತಿ ಬಿಲ್ಲನ್ನು ಡಿ.2023ರ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮಂಡಿಸಿ ಪರಿಚ್ಛೇದ 3419(3)ಕ್ಕೆ ತಿದ್ದುಪಡಿಗೆ ಒತ್ತಾಯಿಸಿ ಡಿ.13 ಮತ್ತು 14 ರಂದು ದೆಹಲಿಯ ಸಂಸತ್ತು ಭವನದ ಮುಂದೆ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಮಾರೆಪ್ಪ ತಿಳಿಸಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಗೆ ಆಗ್ರಹಿಸಿ ಕಾಲ್ನಡೆಗೆ ಜಾಥ, 111 ದಿನಗಳ ಸುಧೀರ್ಘ ಧರಣಿ ಸತ್ಯಾಗ್ರಹವನ್ನು ನಡೆಸಿದ ಪರಿಣಾಮವಾಗಿ ಅಂದಿನ ಬಿಜೆಪಿ ಸರ್ಕಾರ ಪರಿಶಿಷ್ಟ ಜಾತಿಗಳ ಶೇ.17ರ ಮೀಸಲಾತಿಯನ್ನು 4 ಭಾಗವಾಗಿ ವಿಗಂಡಿಸಿ ಕೇಂದ್ರಕ್ಕೆ ಶಿಫಾರಸ್ಸು ಮಾಡಿತ್ತು. ಆದರೆ ಇದರಲ್ಲಿ ಕೆಲವು ನ್ಯೂನತೆಗಳಿವೆ ವರ್ಗ-4ರಲ್ಲಿರುವ ಜಾತಿಗಳನ್ನು ವರ್ಗ-1, ವರ್ಗ-2 ಗಳಿಗೆ ವರ್ಗಾಯಿಸಿ ಪರಿಷ್ಕøತ ಆದೇಶದೊಂದಿಗೆ ಕೇಂದ್ರಕ್ಕೆ ಶಿಫಾರಸ್ಸು ಮಾಡಬೇಕೆಂದು ಇದು ಆಡಳಿತಾತ್ಮಕ ಕ್ರಮವಾಗಿರುವುದರಿಂದ ಇದಕ್ಕೆ ಮತ್ತೋಮ್ಮ ಸಚಿವ ಸಂಪುಟದ ಅನುಮೋದನೆ ಅಗತ್ಯ ಇರುವುದಿಲ್ಲ ಎಂದು ತಿಳಿಸಿ ಸರ್ಕಾರವನ್ನು ಒತ್ತಾಯಸಿದ್ದಾರೆ.

ತ್ರಿಮಸ್ಥರಿಗೆ ಪ್ರತ್ಯೇಕ ಅಭೀವೃದ್ದಿ ನಿಗಮವನ್ನು ಸ್ಥಾಪನೆ ಮಾಡಬೇಕು, 43 ಸಾವಿರ ಪೌರ ಕಾರ್ಮಿಕರನ್ನು ಮತ್ತು ವಾಹನ ಚಾಲಕರನ್ನು ಖಾಯಂಗೊಳಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಲಾಗಿತು. ಡಿ.13 ಮತ್ತು 14 ರಂದು ದೆಹಲಿಯ ಸಂಸತ್ತಿನ ಮುಂದೆ ದಕ್ಷಿಣ ಭಾರತದ ರಾಜ್ಯಗಳಾದ ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಕರ್ನಾಟಕದಿಂದ ಸಾವಿರಾರು ಜನತೆ ಇದರಲ್ಲಿ ಭಾಗವಹಿಸಲಿದ್ದಾರೆ. ಈ ಸಂಸತ್ತಿನ ಚಳಗಾಲದ ಅಧಿವೇಶನದಲ್ಲಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಬಿಲ್ಲನ್ನು ಮಂಡಿಸಿ ತಿದ್ದಪಡಿ ಮಾಡಲು ಆಗ್ರಹಿಸಲಾಯಿತು.

ಮುಂದಿನ ವರ್ಷದಲ್ಲಿ ಲೋಕಸಭೆಯ ಚುನವಾಣೆ ಬರಲಿದೆ, ಇದರಲ್ಲಿ ಬಿಜೆಪಿ ಮೂರನೇ ಬಾರಿ ಆಧಿಕಾರವನ್ನು ಹಿಡಿಯಲು ಮುಂದಾಗಿದೆ. ಇದಕ್ಕೆ ಕರ್ನಾಟಕವು ದಕ್ಷಿಣ ಭಾರತದ ಹೆಬ್ಬಾಗಿಲಿನಂತಿದೆ. ಕರ್ನಾಟಕದಿಂದ ಅತಿ ಹೆಚ್ಚಿ ಸಂಸದರನ್ನು ಗೆಲ್ಲಿಸುವ ಹುಮ್ಮಸ್ಸಿನಲ್ಲಿ ಬಿಜೆಪಿ ಇದೆ. ಈ ಹಿನ್ನಲೆಯಲ್ಲಿ ಬಿಜೆಪಿ ಸರ್ಕಾರ ರಾಜ್ಯದ ಪರಿಶಿಷ್ಟ ಜಾತಿಗಳ ಬಹು ಸಂಖ್ಯಾತರ ಬೇಡಿಕೆಯಾದ ಒಳ ಮೀಸಲಾತಿ ಬಿಲ್ಲನ್ನು ಚಳಿಗಾಲದ ಅಧಿವೇಶನದಲ್ಲಿ ಮಂಡಿಸಿ ಸಂವಿಧಾನದ ಪರಿಚ್ಷೇಧ 341(3)ಕ್ಕೆ ತಿದ್ದುಪಡಿ ತಂದರೆ ಮಾತ್ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲು ಸಾಧ್ಯವಿದೆ. ಕೇವಲ ಸಮಿತಿಯನ್ನು ರಚನೆ ಮಾಡುವುದರಿಂದ ಯಾವುದೇ ಕೆಲಸವಾಗುವುದಿಲ್ಲ ಎಂದು ದೂರಿದ್ದಾರೆ.

ಕೇಂದ್ರ ಸರ್ಕಾರ ಚಳಿಗಾಲದ ಅಧೀವೇಶನದಲ್ಲಿ ಈ ಬಿಲ್ಲನ್ನು ಮಂಡಿಸಿ ಸಂವಿಧಾನದಲ್ಲಿ ತಿದ್ದುಪಡಿಯನ್ನು ತರುವ ಕಾರ್ಯವನ್ನು ಮಾಡಬೇಕಿದೆ. ಇಲ್ಲವಾದಲ್ಲಿ ಮುಂದಿನ ಚುನಾವಣೆಯಲ್ಲಿ ಇದಕ್ಕೆ ತಕ್ಕ ಉತ್ತರವನ್ನು ನೀಡಬೇಕಾಗುತ್ತದೆ. ದಕ್ಷಿಣ ಭಾರತದ ಲೋಕಸಭಾ ಚುನಾವಣೆಯನ್ನು ಸಂಘರ್ಷದ ವೇದಿಕೆಯಾಗಿ ಬಳಸಿಕೊಳ್ಳಲು ಸಿದ್ದರಾಗಬೇಕಿದೆ ಎಂದು ತಿಳಿಸಿದರು.

ಗೋಷ್ಠಿಯಲ್ಲಿ ಸಮಾಜಿಕ ಸಂಘರ್ಷ ಸಮಿತಿಯ ರಾಜ್ಯಾಧ್ಯಕ್ಷರಾದ ಪ್ರೋ.ಸಿ.ಕೆ.ಮಹೇಶ್ವರಪ್ಪ, ಮಾದಿಗ ದಂಡೂರ ಸಮಿತಿಯ ರಾಜ್ಯಾಧ್ಯಕ್ಷರಾದ ಶ್ರೀನಿವಾಸ್, ರಾಜ್ಯ ಸಂಚಾಲಕರಾದ ಯುವರಾಜ್, ಕೇಶವ ಮೂರ್ತಿ, ಮುಖಂಡರುಗಳಾದ ದುರುಗೇಶಪ್ಪ, ಚಿಕ್ಕಣ್ಣ, ಕುಮಾರ್, ರಾಮು, ರಾಮು ನೋಸಾಯಿ ಸೇರಿದಂತೆ ಇತರರು ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಿಇಎನ್ ಪೊಲೀಸರ ದಾಳಿ : ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಬಂಧನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22 : ಆಂದ್ರಪ್ರದೇಶದ ವಿಶಾಖಪಟ್ಟಣಂ ನಿಂದ ಗಾಂಜಾವನ್ನು ತಂದು ಚಿತ್ರದುರ್ಗ ನಗರಕ್ಕೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಹರಿ ಓಂಕುಮಾರ್(24

ಪೆಟ್ರೋಲ್ ಬಂಕಿನಲ್ಲಿ ವಂಚನೆ ಆರೋಪ : ಗ್ರಾಹಕರು ಹಾಗೂ ಸಿಬ್ಬಂದಿಗಳ ನಡುವೆ ಮಾತಿನ ಚಕಮಕಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ನವೆಂಬರ್. 22 : ಬೈಕ್ ಗಳಿಗೆ ಪೆಟ್ರೋಲ್ ಹಾಕುವ ವೇಳೆ ಗ್ರಾಹಕರಿಗೆ ಇಲ್ಲಿನ ಸಿಬ್ಬಂದಿ ವಂಚನೆ

ಅಕ್ರಮ ಕಸಾಯಿ ಖಾನೆ ಬಂದ್ ಮಾಡಿ : ದಾದಾ ಪೀರ್ ಆಗ್ರಹ : ವಿಡಿಯೋ ವೈರಲ್..!

ಸುದ್ದಿಒನ್, ಹಿರಿಯೂರು : ಅಕ್ರಮವಾಗಿ ಕಸಾಯಿ ಖಾನೆ ನಡೆಸುತ್ತಿರುವವರ ವಿರುದ್ಧ ದಾದಾ ಪೀರ್ ಎಂಬುವವರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾದಾ ಪೀರ್ 6ನೇ ವಾರ್ಡ್ ನಲ್ಲಿ ವಾಸಿಸುವವ ವ್ಯಕ್ತಿಯಾಗಿದ್ದಾರೆ. ಕಸಾಯಿ ಖಾನೆಯಿಂದ ಮಕ್ಕಳು ಅನಾರೋಗ್ಯಕ್ಕೆ

error: Content is protected !!