Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಡಿ. 09 ರಂದು ಬೆಳಗಾವಿ ಚಲೋ : ಲಕ್ಷ್ಮಿಕಾಂತ ಲಿಂಗಾವರಹಟ್ಟಿ

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 04 : ಬೆಳೆ ಹಾನಿ ಪರಿಹಾರ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಡಿ.9 ರಂದು ಬೆಳಗಾವಿ ಸುವರ್ಣಸೌಧ ಚಲೋ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ವಾಸುದೇವ ಮೇಟಿ ಬಣದ ಜಿಲ್ಲಾಧ್ಯಕ್ಷ ಈ.ಎನ್.ಲಕ್ಷ್ಮಿಕಾಂತ ಲಿಂಗಾವರಹಟ್ಟಿ ತಿಳಿಸಿದರು.

ಪತ್ರಕರ್ತರ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಎಲ್ಲಾ ರೀತಿಯ ಬೆಳೆಗಳಿಗೆ ಎಕರೆಗೆ ನಲವತ್ತು ಸಾವಿರ ರೂ. ಕೊಡಬೇಕು. ಬೆಳೆ ವಿಮೆ ಪಾವತಿಸಿರುವ ರೈತರಿಗೆ ವಿಮೆ ಹಣವನ್ನು ಶೀಘ್ರವೇ ನೀಡಬೇಕು. ಜಿಲ್ಲಾ ತಾಲ್ಲೂಕು ಹೋಬಳಿ ಮಟ್ಟದಲ್ಲಿ ಮೆಕ್ಕೆಜೋಳ ಖರೀಧಿ ಕೇಂದ್ರ ತೆರೆದು ಒಬ್ಬ ರೈತನಿಂದ ಐವತ್ತು ಕ್ವಿಂಟಾಲ್ ಮೆಕ್ಕೆಜೋಳ ಖರೀಧಿಸಬೇಕು. ಗೋಮಾಳ ಅರಣ್ಯ ಭೂಮಿ, ಬಗರ್‍ಹುಕುಂ, ಸೇಂದಿವನ, ಹುಲ್ಲುಬನ್ನಿ, ಖರಾಬು, ಸಾಗುವಳಿ ಮಾಡುತ್ತಿರುವ ರೈತರಿಗೆ ಹಕ್ಕುಪತ್ರಗಳನ್ನು ವಿತರಿಸಬೇಕು. ರೈತರ ಸಂಪೂರ್ಣ ಬೆಳೆ ಸಾಲ ಮನ್ನ ಆಗಬೇಕು. ಭದ್ರಾಮೇಲ್ದಂಡೆ ಯೋಜನೆಯಿಂದ ವಂಚಿತವಾಗಿರುವ ಕೆರೆಗಳಿಗೆ ನೀರು ಹರಿಸಬೇಕು. ರೈತರ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗಧಿಪಡಿಸಿ ಮೂರು ಕೃಷಿ ಕಾಯಿದೆಗಳನ್ನು ಸರ್ಕಾರ ಹಿಂದಕ್ಕೆ ಪಡೆಯುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು ಎಂದು ಹೇಳಿದರು.

 

ಜಿಲ್ಲಾ ಉಪಾಧ್ಯಕ್ಷ ಸಿ.ಡಿ.ನಿಜಲಿಂಗಪ್ಪ, ಕಾರ್ಯದರ್ಶಿ ನವೀನ ಆರ್.ಮದಕರಿ, ಬಿ.ವೆಂಕಟೇಶ, ಲೋಕಾಕ್ಷಮ್ಮ, ಶಿವಮೂರ್ತಿ, ನಾಗರಾಜ್, ಹೆಚ್.ಎನ್.ಅಂಜು,. ಅರುಣ್ ಕುಮಾರ್, ವೆಂಕಟೇಶ್, ರಂಗಸ್ವಾಮಿ, ಮಲ್ಲಿಕಾರ್ಜುನ್, ಜಯಲಕ್ಷ್ಮಿ, ಶಕುಂತಲ, ಮಂಜುಳ ಕೊಳಹಾಳ್, ಕಾಂತರಾಜ್ ಮಾಳಪ್ಪನಹಟ್ಟಿ ಇವರುಗಳು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...