ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಬೆಳಗಾವಿ: ಇಂದಿನಿಂದ ಚಳಿಗಾಲದ ಅಧಿವೇಶನ ಶುರುವಾಗಿದ್ದು, ಆಡಳಿತ ಪಕ್ಷದ ಮೇಲೆ ವಿರೋಧ ಪಕ್ಷಗಳು ಸವಾರಿ ಮಾಡಲು ಸಿದ್ಧತೆ ನಡೆಸಿವೆ. ಅದರ ಭಾಗವಾಗಿಯೇ ಇಂದು ಬಿಪಿಎಲ್ ಕಾರ್ಡ್ ಗಳು ರದ್ದಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಜೋರು ಚರ್ಚೆ ನಡೆಸಲಾಗಿದೆ.
‘ನೀವೂ ಜಗ್ಗಲ್ಲ ಬಗ್ಗಲ್ಲ ಎಂದವರು ಯಾರಿಗೆ ಹೆದರುತ್ತಾ ಇದ್ದೀರಿ. ಯಾಕೆ ಹೆದರಬೇಕು. ನಿರ್ದಾಕ್ಷಿಣ್ಯವಾಗಿ ಅನರ್ಹರನ್ನ ರದ್ದು ಪಡಿಸಿ. ಅರ್ಹರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ಸರ್ಕಾರದ್ದು. ಅನಗತ್ಯವಾಗಿ ಬಿಪಿಎಲ್ ಕಾರ್ಡುಗಳನ್ನ ನೀವೂ ರದ್ದು ಮಾಡ್ತಾ ಇದ್ದೀರ. ಬಡವರ ಹೊಟ್ಟೆ ಮೇಲೆ ಹೊಡೆಯುತ್ತಾ ಇದ್ದೀರಿ. ಇದು ತಪ್ಪು’ ಎಂದು ಸಿಟಿ ರವಿ ಸದನದಲ್ಲಿ ಜೋರು ಮಾಡಿದ್ದಾರೆ. ಬಾಂಗ್ಲಾದೇಶದವರಿಗೆಲ್ಲಾ ಬಿಪಿಎಲ್ ಕಾರ್ಡ್ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.
ಈ ವೇಳೆ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಹಾಗೂ ಪ್ರಿಯಾಂಕ್ ಖರ್ಗೆ ಅವರು ಉತ್ತರ ಕೊಡಿವುದಕ್ಕೆ ಪ್ರಯತ್ನ ಪಟ್ಟರು ವಿರೋಧ ಪಕ್ಷಗಳು ಕೇಳಿಸಿಕೊಳ್ಳುವುದಕ್ಕೆ ರೆಡಿ ಇಲ್ಲ. ಮುಂದುವರೆದು ಮಾತನಾಡಿದ ಕೆ.ಹೆಚ್ ಮುನಿಯಪ್ಪನವರು, ನಾನು ಒಂದು ಪಕ್ಷಕ್ಕೆ ಹೇಳಿಲ್ಲ. ಬಿಜೆಪಿ, ಕಾಂಗ್ರೆಸ್ ಅಂತ ಹೇಳಿಲ್ಲ. ಪಕ್ಷಗಳು ಎಲ್ಲವೂ ಸೇರಿ ಪಕ್ಷಾತೀತವಾಗಿ ಸಹಕಾರ ಕೊಟ್ಟರೆ ಆಗುತ್ತೆ. ಎಪಿಎಲ್ ಕಾರ್ಡ್ ಜಾಸ್ತಿ ಇದೆ. ಅದನ್ನ ರದ್ದು ಮಾಡುವುದಕ್ಕೆ ನಿಮ್ಮ ಸಹಕಾರ ಬೇಕು ಎಂದೇ ಸಚಿವ ಮುನಿಯಪ್ಪ ಅವರು ಕೇಳಿದರು. ಕಲಾಪದಲ್ಲಿ ಬಿಪಿಎಲ್ ಕಾರ್ಡ್ ರದ್ದು ವಿಚಾರ ಎರಡು ಪಕ್ಷಗಳ ನಾಯಕರ ನಡುವೆ ಸದ್ದು ಗದ್ದಲ ಶುರು ಮಾಡಿತು. ವಿರೋಧ ಪಕ್ಷದ ನಾಯಕರು ಕೇಳಿದ ಪ್ರಶ್ನೆಗೆ ಆಹಾರ ಸಚಿವರು ಉತ್ತರ ಕೊಡುವ ಪ್ರಯತ್ನ ಮಾಡಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್