Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಳ್ಳಾರಿ | ಕಾಣೆಯಾದ ಗಂಡ ಮತ್ತು ಹೆಂಡತಿ ಪತ್ತೆಗಾಗಿ ಮನವಿ

---Advertisement---

ಬಳ್ಳಾರಿ,ಅ.30 : ನಗರದ ಕೋಟೆ ಪ್ರದೇಶದ 1ನೇ ಕ್ರಾಸ್ ನ ಭದ್ರಕಾಳಿ ಗುಡಿ ಹತ್ತಿರದ ನಿವಾಸಿಗಳಾದ 28 ವರ್ಷದ ಯುವರಾಜ್ ಅಲಿಯಾಸ್ ಎರಿಸ್ವಾಮಿ ಹಾಗೂ 27 ವರ್ಷದ ಹೆಂಡತಿ ಮಂಜುಳಾ ಇಬ್ಬರು ಅ.21 ರಂದು ಮನೆಯಿಂದ ಹೊರಗಡೆ ಹೋದವರು ವಾಪಾಸ್ ಬಾರದೇ ಕಾಣೆಯಾಗಿರುವ ಕುರಿತು ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮನವಿ ಮಾಡಿದ್ದಾರೆ.

ಯುವರಾಜ್ ಅಲಿಯಾಸ್ ಎರಿಸ್ವಾಮಿ ಚಹರೆ ಗುರುತು: ಅಂದಾಜು 5.6 ಅಡಿ ಎತ್ತರ, ಕೋಲು ಮುಖ, ಕಪ್ಪು ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಬಲಗೈ ಮೇಲೆ ದುರ್ಗಾದೇವಿಯ ಹಚ್ಚೆ ಇರುತ್ತದೆ. ಕಾಣೆಯಾದ ಸಂದರ್ಭದಲ್ಲಿ ತಿಳಿ ಹಸಿರು ಬಣ್ಣದ ಟೀ-ಶರ್ಟ್ ಹಾಗೂ ಕಪ್ಪು ಬಣ್ಣದ ಜಿನ್ಸ್ ಪ್ಯಾಂಟ್ ಧರಿಸಿರುತ್ತಾನೆ.

ಮಂಜುಳಾ ಚಹರೆ ಗುರುತು: ಅಂದಾಜು 5.2 ಅಡಿ ಎತ್ತರ, ಗೋಧಿ ಮೈಬಣ್ಣ, ತೇಳುವಾದ ಮೈಕಟ್ಟು ಹೊಂದಿದ್ದು, ಕಾಣೆಯಾದ ಸಂದರ್ಭದಲ್ಲಿ ಕೆಂಪು ಮತ್ತು ನೀಲಿ ಬಣ್ಣದ ಸೀರೆ ಹಾಗೂ ಕೆಂಪು ಬಣ್ಣದ ಕುಪ್ಪಸ ಧರಿಸಿರುತ್ತಾರೆ.
ಕಾಣೆಯಾದ ವ್ಯಕ್ತಿಗಳ ಬಗ್ಗೆ ಸುಳಿವು ಸಿಕ್ಕಲ್ಲಿ ಕೌಲ್ ಬಜಾರ್ ಪೊಲೀಸ್ ಠಾಣೆಯ ದೂ.08392-240731, 244145 ಅಥವಾ ಪಿಐ ಮೊ.9480803047, ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now