Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಳ್ಳಾರಿ: ನಿರುದ್ಯೋಗಿ ಯುವಕ-ಯುವತಿಯರಿಗೆ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ

---Advertisement---

ಸುದ್ದಿಒನ್, ಬಳ್ಳಾರಿ, ಮಾ.26 : ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ-ಯುವತಿಯರು ಸ್ವಯಂ ಉದ್ಯೋಗದ ಮೂಲಕ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಅನುವು ಮಾಡಿಕೊಡುವ ನಿಟ್ಟಿನಲ್ಲಿ ವಿವಿಧ ವೃತ್ತಿಪರ ತರಬೇತಿಗಳಿಗೆ ಅರ್ಜಿ ಆಹ್ವಾನಿಸಿದೆ.

 

ಗ್ರಾಮೀಣ ಪ್ರದೇಶದ 19 ರಿಂದ 45 ವರ್ಷ ವಯೋಮಿತಿಯ ಆಸಕ್ತ ಅಭ್ಯರ್ಥಿಗಳಿಗೆ ಉಚಿತ ಊಟ ಮತ್ತು ವಸತಿ ಸೌಲಭ್ಯದೊಂದಿಗೆ ತರಬೇತಿಗಳನ್ನು ಆಯೋಜಿಸಲಾಗಿದೆ.

*ತರಬೇತಿಗಳ ವಿವರ:*
ಏ.06 ರಿಂದ ಮೊಬೈಲ್ ಸರ್ವಿಸಿಂಗ್ ತರಬೇತಿ (30 ದಿನ).
ಏ.09 ರಿಂದ ಕೃತಕ ಆಭರಣ ತಯಾರಿಕೆ ತರಬೇತಿ (14 ದಿನ).
ಏ.15 ರಿಂದ ಕೃಷಿ ಉದ್ಯಮಿ ತರಬೇತಿ (13 ದಿನ).
ಏ.14 ರಿಂದ ಅಗರಬತ್ತಿ ತಯಾರಿಕೆ ತರಬೇತಿ (12 ದಿನ).
ಮೇ 04 ರಿಂದ ಮೋಟಾರ್ ರಿವೈಂಡಿAಗ್ ಮತ್ತು ಪಂಪ್ ಸೆಟ್ ರಿಪೇರಿ ತರಬೇತಿ (30 ದಿನ).
ಮೇ 18 ರಿಂದ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿ (30 ದಿನ).
ಮೇ 25 ರಿಂದ ಫಾಸ್ಟ್ ಫುಡ್ ತಯಾರಿಕೆ ತರಬೇತಿ (14 ದಿನ).
ಜೂ.04 ರಿಂದ ಬ್ಯೂಟಿ ಪಾರ್ಲರ್ ತರಬೇತಿ (35 ದಿನ).
ತರಬೇತಿಗೆ ಸೇರಬಯಸುವ ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ ತೇರ್ಗಡೆಯಾಗಿರಬೇಕು. ಆಧಾರ್ ಕಾರ್ಡ್, ಬಿಪಿಎಲ್ ಕಾರ್ಡ್ ಪ್ರತಿ, ಉದ್ಯೋಗ ಖಾತ್ರಿ ಕಾರ್ಡ್, 3 ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ನಿರ್ದೇಶಕರು, ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ, ಡಿ.ಐ.ಸಿ ಕಾಂಪೌಂಡ್, ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಹತ್ತಿರ, ಹೊಸಪೇಟೆ ರಸ್ತೆ, ಬಳ್ಳಾರಿ. ದೂ.08392-299117, ಮೊ.9449860659, 9008464120, 9980123603 ಗೆ ಸಂಪರ್ಕಿಸಬಹುದು.

ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಉಚಿತ ತರಬೇತಿಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now