Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಳ್ಳಾರಿ | ಮೇ 14 ರಂದು ನೇರ ಸಂದರ್ಶನ

---Advertisement---

 

ಬಳ್ಳಾರಿ,ಮೇ 11 : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ನಿರುದ್ಯೋಗಿ ಯುವಕರಿಗಾಗಿ ಮೇ 14 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 02 ಗಂಟೆಯವರೆಗೆ ನಗರದ ಎಂ.ಜಿ ರಸ್ತೆಯ ಶಾಂತಿನಿಕೇತನ ಶಾಲೆಯ ಮುಂಭಾಗದ ಭಾರತ್ ಫೈನಾನ್ಷಿಯಲ್ ಇನ್ಕೂ÷್ಲಷನ್ ಲಿಮಿಟೆಡ್ ಕಚೇರಿಯಲ್ಲಿ ವಿಶೇಷ ನೇರ ಸಂದರ್ಶನ ಆಯೋಜಿಸಲಾಗಿದೆ.
ಇಂಡಸ್ ಇಂಡ್ ಬ್ಯಾಂಕ್ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಪುರುಷ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.

ಪಿಯುಸಿ ಅಥವಾ ಯಾವುದೇ ಪದವಿ ಹೊಂದಿದ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ. ಈ ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ. ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ತಮ್ಮ ಸ್ವ-ವಿವರದ ಪ್ರತಿ, ಆಧಾರ್ ಕಾರ್ಡ್ ಪ್ರತಿ ಹಾಗೂ ದ್ವಿಚಕ್ರ ವಾಹನ ಕಡ್ಡಾಯವಾಗಿ ಹೊಂದಿರಬೇಕು.

 

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಬಳ್ಳಾರಿ ಅಥವಾ ಮೊ.7619207762, 9663263086, 7676774293, 6360408094 ಗೆ ಸಂಪರ್ಕಿಸಬಹುದಾಗಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಸದಾವಕಾಶವನ್ನು ಬಳಸಿಕೊಳ್ಳಬೇಕು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...