ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬಳ್ಳಾರಿ,ಏ.01: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇವರ ನಿರ್ದೇಶನದಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಜುಲೈ 12 ರಂದು ನಗರದ ತಾಳೂರು ರಸ್ತೆಯ ಹೊಸ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ನಡೆಸಲಾಗುವುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಕೆ.ಜಿ.ಶಾಂತಿ ಅವರು ತಿಳಿಸಿದ್ದಾರೆ.
ಸಾರ್ವಜನಿಕರು ತಮ್ಮ ವ್ಯಾಜ್ಯಪೂರ್ವ, ರಾಜಿಯಾಗಬಹುದಾದ ಅಪರಾಧಿಕ ಪ್ರಕರಣಗಳು, ಚೆಕ್ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ವೈವಾಹಿಕ ಹಾಗೂ ಕೌಟುಂಬಿಕ ಪ್ರಕರಣಗಳು, ಸಿವಿಲ್ ಪ್ರಕರಣಗಳು ಹಾಗೂ ಇತರೆ ರಾಜಿಯಾಗಬಹುದಾದ ಪ್ರಕರಣಗಳನ್ನು ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಒಟ್ಟು 31 ನ್ಯಾಯಾಲಯಗಳಲ್ಲಿ ಜುಲೈ 12 ರಂದು ನಡೆಯುವ ರಾಷ್ಟಿçÃಯ ಲೋಕ್ ಅದಾಲತ್ ಮೂಲಕ ಶೀಘ್ರವೇ ಇತ್ಯರ್ಥಗೊಳಿಸಿ ಪರಿಹಾರ ಪಡೆದುಕೊಳ್ಳಲು ಸುವರ್ಣ ಅವಕಾಶವಾಗಿದೆ. ಸಾರ್ವಜನಿಕರು ಹಾಗೂ ಕಕ್ಷಿದಾರರು ಇದರ ಪ್ರಯೋಜನ ಪಡೆದುಕೊಂಡು ತಮ್ಮ ವಿವಾದಗಳನ್ನು ಅಂತ್ಯಗೊಳಿಸಬಹುದು ಎಂದು ಅವರು ತಿಳಿಸಿದ್ದಾರೆ.
ರಾಷ್ಟ್ರೀಯ ಲೋಕ್ ಅದಾಲತ್ ಅಂಗವಾಗಿ ಪ್ರತಿದಿನ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಒಟ್ಟು 31 ನ್ಯಾಯಾಲಯಗಳಲ್ಲ್ಲಿ ಪೂರ್ವಭಾವಿ ಬೈಠಕ್‌ಗಳು ನಡೆಯುತ್ತಲಿವೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಚೇರಿ ಅಥವಾ ದೂ.08392-278077 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್