ಬಳ್ಳಾರಿ : ಜುಲೈ 12 ರಂದು ರಾಷ್ಟ್ರೀಯ ಲೋಕ್ ಅದಾಲತ್

ಬಳ್ಳಾರಿ,ಏ.01: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇವರ ನಿರ್ದೇಶನದಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಜುಲೈ 12 ರಂದು ನಗರದ ತಾಳೂರು ರಸ್ತೆಯ ಹೊಸ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ನಡೆಸಲಾಗುವುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಕೆ.ಜಿ.ಶಾಂತಿ ಅವರು ತಿಳಿಸಿದ್ದಾರೆ.

ಸಾರ್ವಜನಿಕರು ತಮ್ಮ ವ್ಯಾಜ್ಯಪೂರ್ವ, ರಾಜಿಯಾಗಬಹುದಾದ ಅಪರಾಧಿಕ ಪ್ರಕರಣಗಳು, ಚೆಕ್ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ವೈವಾಹಿಕ ಹಾಗೂ ಕೌಟುಂಬಿಕ ಪ್ರಕರಣಗಳು, ಸಿವಿಲ್ ಪ್ರಕರಣಗಳು ಹಾಗೂ ಇತರೆ ರಾಜಿಯಾಗಬಹುದಾದ ಪ್ರಕರಣಗಳನ್ನು ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಒಟ್ಟು 31 ನ್ಯಾಯಾಲಯಗಳಲ್ಲಿ ಜುಲೈ 12 ರಂದು ನಡೆಯುವ ರಾಷ್ಟಿçÃಯ ಲೋಕ್ ಅದಾಲತ್ ಮೂಲಕ ಶೀಘ್ರವೇ ಇತ್ಯರ್ಥಗೊಳಿಸಿ ಪರಿಹಾರ ಪಡೆದುಕೊಳ್ಳಲು ಸುವರ್ಣ ಅವಕಾಶವಾಗಿದೆ. ಸಾರ್ವಜನಿಕರು ಹಾಗೂ ಕಕ್ಷಿದಾರರು ಇದರ ಪ್ರಯೋಜನ ಪಡೆದುಕೊಂಡು ತಮ್ಮ ವಿವಾದಗಳನ್ನು ಅಂತ್ಯಗೊಳಿಸಬಹುದು ಎಂದು ಅವರು ತಿಳಿಸಿದ್ದಾರೆ.

ರಾಷ್ಟ್ರೀಯ ಲೋಕ್ ಅದಾಲತ್ ಅಂಗವಾಗಿ ಪ್ರತಿದಿನ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಒಟ್ಟು 31 ನ್ಯಾಯಾಲಯಗಳಲ್ಲ್ಲಿ ಪೂರ್ವಭಾವಿ ಬೈಠಕ್‌ಗಳು ನಡೆಯುತ್ತಲಿವೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಚೇರಿ ಅಥವಾ ದೂ.08392-278077 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

Recent Posts

ಲೇಡಿ ಸಿಂಗಂ ಎಂದೇ ಖ್ಯಾತಿ ಪಡೆದ ಈ ಪಿಎಸ್ಐ ಅನ್ನಪೂರ್ಣ ಯಾರು..?

ಹುಬ್ಬಳ್ಳಿ; ಐದು ವರ್ಷದ ಮಗುವನ್ನು ಅಪಹರಿಸಿ, ಅತ್ಯಚಾರ‌ಎಸಗಲು ಪ್ರಯತ್ನಿಸಿ, ಮಗುವನ್ನೇ ಕೊಂದ ಪಾಪಿಗೆ ಮಹಿಳಾ ಪಿಎಸ್ಐ ಎನ್ಕೌಂಟರ್ ಶಿಕ್ಷೆ ನೀಡಿದ್ದಾರೆ.…

5 minutes ago

ಸಾಮಾಜಿಕ ಕ್ರಾಂತಿಯ ಮೂಲಕ ಬದಲಾವಣೆಗೆ ನಾಂದಿಹಾಡಿದವರು ಡಾ.ಬಿ.ಆರ್.ಅಂಬೇಡ್ಕರ್ : ನರೇನಹಳ್ಳಿ ಅರುಣ್ ಕುಮಾರ್

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್ 14 : ಭಾರತಕ್ಕೆ ಶ್ರೇಷ್ಠ ಸಂವಿಧಾನ ನೀಡಿದ ಡಾ.ಬಾಬಾಸಾಹೇಬ್ ಅಂಬೇಡ್ಕರ್ ರವರು ಜಾತಿ,ಧರ್ಮ ಮೀರಿ ನಿಂತ…

31 minutes ago

ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ಸಂಪನ್ನಗೊಂಡ ಶ್ರೀ ಸಿದ್ದೇಶ್ವರನ ರಥೋತ್ಸವ

ಸುದ್ದಿಒನ್, ಹಿರಿಯೂರು, ಏಪ್ರಿಲ್. 14  : ತಾಲೂಕಿನ ಐಮಂಗಲ ಹೋಬಳಿಯ ಸುಪ್ರಸಿದ್ದ ಶ್ರೀ ಕ್ಷೇತ್ರ ವದ್ದೀಕೆರೆಯ ಕಾಲಭೈರವೇಶ್ವರ ಸ್ವಾಮಿ ಯಾನೆ…

51 minutes ago

ದಾವಣಗೆರೆಗೆ ನಾಳೆಯಿಂದ ಮೂರು ದಿನ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ

  ದಾವಣಗೆರೆ ಏ.14  ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮೀ ಚೌಧರಿ ಅವರು ಏಪ್ರಿಲ್ 15, 16 ಮತ್ತು 17…

1 hour ago

ಲಕ್ಷ್ಮೀಸಾಗರದಲ್ಲಿ ಯಶಸ್ವಿಯಾಗಿ ನಡೆದ ಉಚಿತ ಆರೋಗ್ಯ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ

  ಸುದ್ದಿಒನ್, ಚಿತ್ರದುರ್ಗ ಏ.14 : ರಾಷ್ಟ್ರೀಯ ಸೇವಾ ಯೋಜನೆ, ದಾವಣಗೆರೆ ವಿಶ್ವವಿದ್ಯಾಲಯ, ಐಕ್ಯೂಎಸಿ, ಶ್ರೀ ಜಗದ್ಗುರು ಮುರುಘರಾಜೇಂದ್ರ ಕಲಾ…

1 hour ago

ಶಿಕ್ಷಣದಲ್ಲಿ ರಂಗಕಲೆ : ನಾಳೆ ಒಂದು ದಿನದ ಕಾರ್ಯಾಗಾರ

  ಸುದ್ದಿಒನ್,ಚಿತ್ರದುರ್ಗ, ಏಪ್ರಿಲ್. 14 : ನಗರದ ಕೋಟೆ ರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಶಿಕ್ಷಣ ಮಹಾವಿದ್ಯಾಲಯದ ಆವರಣದಲ್ಲಿ ರಂಗಸೌರಭ ಕಲಾ…

2 hours ago