ಬಳ್ಳಾರಿ,ಏ.19 : ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಯ 220/11ಕೆವಿ ಅಲ್ಲಿಪುರ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಬ್ಯಾಂಕ್-2ನ ಫೀಡರ್ ಆದ ಎಫ್-36 ರ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಏ.21 ರಂದು ಬೆಳಿಗ್ಗೆ 09 ಗಂಟೆಯಿAದ ಸಂಜೆ 05 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:
ನಗರದ ಬಂಡಿಹಟ್ಟಿ, ಆಶ್ರಯ ಕಾಲೋನಿ, ಈದ್ಗ ರೋಡ್, ಟೀರ‍್ಸ್ ಕಾಲೋನಿ, ಜಾಗೃತಿ ನಗರ ಸರ್ಕಲ್, ಆಜಾದ್ ನಗರ ಸೇರಿದಂತೆ ಇನ್ನೂ ಮುಂತಾದ ಏರಿಯಾಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಏಪ್ರಿಲ್ 22 ರಂದು ಬಳ್ಳಾರಿ ಗ್ರಾಮೀಣ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ :
ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ 110ಕೆ.ವಿ ಅಲ್ಲಿಪುರ-ಬಳ್ಳಾರಿ ಉತ್ತರ ಮಾರ್ಗದ ಲಿಲೋ ನಿರ್ಮಾಣ ಕಾರ್ಯ ತುರ್ತಾಗಿ ಕೈಗೊಳ್ಳುತ್ತಿರುವುದರಿಂದ 110/11ಕೆ.ವಿ ಸೋಮಸಮುದ್ರ ವಿದ್ಯುತ್ ಉಪ-ಕೇಂದ್ರ ಮತ್ತು 33/11ಕೆ.ವಿ ಗುಡದೂರು ವಿದ್ಯುತ್ ಉಪಕೇಂದ್ರದಿAದ ವಿದ್ಯುತ್ ಸರಬರಾಜು ಆಗುವ ಎಲ್ಲಾ 11ಕೆ.ವಿ ಮಾರ್ಗಗಳಲ್ಲಿ ಏ.22 ರಂದು ಬೆಳಿಗ್ಗೆ 07 ಗಂಟೆಯಿAದ ಸಂಜೆ 06 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:
110/11ಕೆ.ವಿ ಶ್ರೀಧರಗಡ್ಡೆ ಉಪ-ಕೇಂದ್ರದ 110/11ಕೆ.ವಿ ಶ್ರೀಧರಗಡ್ಡೆ ಉಪ-ಕೇಂದ್ರದಿAದ ಹೊರಡುವ ಎಲ್ಲಾ 11ಕೆ.ವಿ ಫೀಡರ್‌ಗಳು ಮತ್ತು 33/11ಕೆ.ವಿ ಗುಡದೂರು ಉಪ-ಕೇಂದ್ರದ 33/11ಕೆ.ವಿ ಗುಡದೂರು ಉಪ-ಕೇಂದ್ರದಿAದ ಹೊರಡುವ ಎಲ್ಲಾ 11ಕೆ.ವಿ. ಫೀಡರ್‌ಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ವಿದ್ಯುತ್ ಗ್ರಾಹಕರು ಮತ್ತು ಸಾರ್ವಜನಿಕರು ಸಹಕರಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















