ಬಳ್ಳಾರಿ,ಮಾ.27 : ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ ಅಳವಡಿಸುವ ಕಾರ್ಯ ಕೈಗೊಳ್ಳುತ್ತಿರುವುರಿಂದ ಮಾ.28 ರಂದು ಮಧ್ಯಾಹ್ನ 02 ಗಂಟೆಯಿAದ ಸಂಜೆ 06 ಗಂಟೆಯವರೆಗೆ ನಗರದ ಫೀಡರ್-02 ರ ವ್ಯಾಪ್ತಿಯ ಗಾಂಧಿನಗರ 1 ನೇ ಕ್ರಾಸ್ ಮತ್ತು 2ನೇ ಕ್ರಾಸ್ ಏರಿಯಾಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


