ಸುದ್ದಿಒನ್,ಬೆಂಗಳೂರು,ಮೇ.09: ಆಟವಾಡುತ್ತಿದ್ದ ಮಗುವಿನ ಮೇಲೆ ಕಾಂಪೌಂಡ್ ಗೇಟ್ ಬಿದ್ದು, ಐದು ವರ್ಷದ ಬಾಲಕಿ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಬೆಂಗಳೂರು ಉತ್ತರ ತಾಲ್ಲೂಕಿನ ಚಿಕ್ಕಬಾಣಾವರ ದ್ವಾರಕಾನಗರದಲ್ಲಿ ನಡೆದಿದೆ.
ದ್ವಾರಕಾನಗರದ ನಿವಾಸಿಗಳಾದ ಇಮಾಮ್ ಮತ್ತು ರಮೀಜಾ ದಂಪತಿಯ ಪುತ್ರಿ ಗೌಸಿಯಾ (5) ಮೃತಪಟ್ಟ ದುರ್ದೈವಿ. ಈ ಘಟನೆಯಲ್ಲಿ ಗೌಸಿಯಾಳ ಅಣ್ಣ ಇಮಾಮ್ ಹಾಗೂ ತಂಗಿ ಶಕಿಲಾ ಗಾಯಗೊಂಡಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮತ್ತೊಂದು ಮಗು, ಮೂರು ವರ್ಷದ ಸುಮಯ್ ಸ್ಥಿತಿ ಗಂಭೀರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿದಿದೆ.
ಮೃತ ಮಗುವಿನ ಪೋಷಕರು ಕಳೆದ 5 ತಿಂಗಳ ಹಿಂದೆಯಷ್ಟೇ ದ್ವಾರಕಾನಗರದ ಬಾಡಿಗೆ ಮನೆಗೆ ವಲಸೆ ಬಂದಿದ್ದರು. ಇವರು ಸ್ಥಳೀಯ ಬಸ್ ನಿಲ್ದಾಣದ ಬಳಿ ಹಣ್ಣಿನ ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಚಿಕ್ಕಬಾಣಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.







