ಬೆಂಗಳೂರು: ಬೆಂಗಳೂರು – ಮೈಸೂರು ದಶಪಥ ರಸ್ತೆ ಉದ್ಘಾಟನೆಗೆ ಸಿದ್ಧವಾಗಿದೆ. ಪ್ರಧಾನಿ ನರೇಂದ್ರ ಅವರು ರಸ್ತೆ ಉದ್ಘಾಟನೆ ಮಾಡಲಿದ್ದಾರೆ. ಆದ್ರೆ ಈ ರಸ್ತೆಗೆ ಯಾರ ಹೆಸರನ್ನು ಇಡುತ್ತಾರೆ ಎಂಬುದೇ ದೊಡ್ಡ ಕುತೂಹಲವಾಗಿದೆ. ಹಲವರು ಮಾಜಿ ಪ್ರಧಾನಿ ದೇವೇಗೌಡರ ಹೆಸರನ್ನು ಇಡಬೇಕೆಂದು ಸೂಚನೆ ನೀಡಿದ್ದಾರೆ.

ಹೈವೈಗೆ ದೇವೇಗೌಡರ ಹೆಸರನ್ನಿಡುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ, ಬೆಂಗಳೂರು – ಮೈಸೂರು ದಶಪಥ ರಸ್ತೆಗೆ ದೇವೇಗೌಡ ಅವರ ಹೆಸರಿಡುವಂತೆ ಜೆಡಿಎಸ್ ಎಂಎಲ್ಎ ಶರಣವ ಮನವಿ ಮಾಡಿದ್ದಾರೆ. ಆದ್ರೆ ವೈಮಾನಿಕ ಸಮೀಕ್ಷೆ ನಡೆಸಲು, ವೀಕ್ಷಣೆ ನಡೆಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಮನವಿ ಪತ್ರ ಸಲ್ಲಿಸಿರುವ ಶರವಣ, ನೀವೂ ಈ ಭಾಗದ ಜನರ ಭಾವನೆಗಳನ್ನು ಅರ್ಥ ಮಾಡಿಕೊಳ್ಳಬೇಕು. ಈ ಮಹಾರಸ್ತೆಗೆ ಮಾಜಿ ಪ್ರಧಾನಿ ದೇವೇಗೌಡರ ಹೆಸರಿಡಬೇಕು ಎಂದು ಪತ್ರದ ಮೂಲಕ ಕೇಳಿಕೊಂಡಿದ್ದರು. ಪತ್ರದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು, ನಿಮ್ಮ ಪತ್ರವನ್ನು ಸ್ವೀಕರಿಸಿದ್ದೇವೆ. ಈ ಮನವಿ ಬಗ್ಗೆ ಗಮನ ಹರಿಸುತ್ತೇವೆ ಎಂದಿದ್ದಾರೆ.


