Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬೆಂಗಳೂರು | ಹೊತ್ತಿ ಉರಿದ ಖಾಸಗಿ ಬಸ್ ; 40 ಪ್ರಯಾಣಿಕರು ಪಾರು

---Advertisement---

ಸುದ್ದಿಒನ್, ಬೆಂಗಳೂರು, ಫೆಬ್ರವರಿ. 06 : ಇಂದು ಬೆಳ್ಳಂಬೆಳಿಗ್ಗೆ ಖಾಸಗಿ ಬಸ್ ಒಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೆಂಕಿಗೆ ಆಹುತಿಯಾಗಿದ್ದು, ಸುಮಾರು 40 ಪ್ರಯಾಣಿಕರು ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾರೆ.

ಅದೃಷ್ಟವಶಾತ್ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿ ಪಾರಾಗಿದ್ದಾರೆ.

ಬೆಂಗಳೂರು ಮತ್ತು ತುಮಕೂರು ಹೆದ್ದಾರಿಯ ನಡುವಿನ ನೆಲಮಂಗಲ ಬಳಿಯ ಹನುಮಂತಪುರ ಗೇಟ್ ಬಳಿ ಈ ಘಟನೆ ಸಂಭವಿಸಿದೆ. ಬಸ್ ರಸ್ತೆ ಬದಿಯ ಕಂದಕಕ್ಕೆ ಬಿದ್ದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ನಂತರ ಬೆಂಕಿ ಹೊತ್ತಿಕೊಂಡಿತು. ಘಟನೆಯಲ್ಲಿ ಬಸ್ ಸಂಪೂರ್ಣವಾಗಿ ಸುಟ್ಟ ಕರಕಲಾಗಿದೆ. ಬಸ್ ನಲ್ಲಿದ್ದ ಲಗೇಜ್, ಬೆಲೆಬಾಳುವ ಬಸ್ತುಗಳು ಸುಟ್ಟು ಭಸ್ಮವಾಗಿವೆ. ಘಟನೆಗೆ ನಿರ್ದಿಷ್ಟವಾದ ಕಾರಣ ಇನ್ನೂ ತಿಳಿದು ಬಂದಿಲ್ಲ. ಸ್ಥಳಕ್ಕೆ ಬಂದ ನೆಲಮಂಗಲ ಅಗ್ನಿಶಾಮಕ ದಳ ಬೆಂಕಿ ನಂದಿಸಿದೆ. ನೆಲಂಮಗಲ ಸಂಚಾರಿ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now