Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬೆಂಗಳೂರಿನ ಖಾಸಗಿ ಶಾಲೆಗೆ ಬೀಗ.. 140 ಮಕ್ಕಳ ಭವಿಷ್ಯ ಅತಂತ್ರ..!

---Advertisement---

 

 

ಬೆಂಗಳೂರು: ಶಾಲೆ ಮಕ್ಕಳ ಮುಂದಿನ ಉಜ್ವಲ ಭವಿಷ್ಯಕ್ಕೆ ಬುನಾದಿ. ಮಕ್ಕಳ ಆಟ‌ಪಾಠ ಎಲ್ಲವನ್ನು ಸರಿಯಾದ ಮಾರ್ಗದಲ್ಲಿ ಕಲಿಸಿಕೊಡುತ್ತದೆ ಶಾಲೆ. ಅಲ್ಲಿನ ಶಿಕ್ಷಕರು ಕೂಡ ಮಕ್ಕಳಿಗೆ ಎರಡನೇ ಪೋಷಕರು. ಗುರುವೆಂದರೆ ದೇವರಿಗೆ ಸಮಾನ. ಆದ್ರೆ ಆ ಗುರುಗಳೇ ಕಾಮುಕರಾದರೆ..? ಬೇಲಿಯೇ ಎದ್ದು ಜೊಲ ಮೇಯ್ದಂತೆಯೇ ಸರಿ. ಇಂಥ ಕ್ರೂರ ಕೃತ್ಯ ನಡೆದಿರೋದು ಬೆಂಗಳೂರಿನ ವರ್ತೂರಿನಲ್ಲಿರುವ ಖಾಸಗಿ ಶಾಲೆಯಲ್ಲಿ. 10 ವರ್ಷದ ಬಾಲಕಿ‌ ಮೇಲೆ ಪ್ರಾಂಶುಪಾಲ ಅತ್ಯಾಚಾರ ಎಸಗಿದ್ದ. ಇದೀಗ ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಗೆ ಬೀಗ ಹಾಕಲಾಗಿದೆ.

ಬಿಇಒ ಈ ಆದೇಶ ಹೊರಡಿಸಿದ್ದಾರೆ. ಶಾಲೆ ಮುಚ್ಚುವಂತೆ ಆದೇಶ ಹೊರಡಿಸಲಾಗಿದೆ. ಇನ್ನು ಅತ್ಯಾಚಾರದ ಆರೋಪಿ ಈ ಶಾಲೆಯನ್ನು ಕೋರಮಂಗಲದಲ್ಲಿ ತೆರೆಯಲು ಅನುಮತಿ‌ ಕೇಳಿದ್ದ. ಆದ್ರೆ ವರ್ತೂರಿನಲ್ಲಿ ಅನಧಿಕೃತವಾಗಿ ತೆರೆದಿದ್ದ. ಹೀಗಾಗಿ ಶಾಲೆಗೆ ಬೀಗ ಹಾಕಿಸಲಾಗಿದೆ.

ಆದ್ರೆ ಈ ಶಾಲೆಯಲ್ಲಿ ಸುಮಾರು 140ಕ್ಕೂ ಹೆಚ್ಚು ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದರು. ಹೀಗಾಗಿ ಮಕ್ಕಳ ಭವಿಷ್ಯ ಅತಂತ್ರವಾಗಿದೆ. ಈ ಮಧ್ಯೇ ಕ್ಷೇತ್ರ ಶಿಕ್ಷಣಾಧಿಕಾರಿಯೇ ಮಕ್ಕಳ ಭವಿಷ್ಯಕ್ಕೆ ಬೇರೆ ವ್ಯವಸ್ಥೆ ಮಾಡಲು ಮುಂದಾಗಿದ್ದಾರೆ. ಬೇರೆ ಶಾಲೆಯಲ್ಲಿ ಮಕ್ಕಳಿಗೆ ಅಡ್ಮಿಷನ್ ಕೊಡಿಸಲು ನಿರ್ಧಾರ ಮಾಡಿದ್ದಾರೆ. ಆದ್ರೆ ಈಗಾಗಲೇ ಅರ್ಧ ಶೈಕ್ಷಣಿಕ ವರ್ಷ ಕಳೆದು ಆಗಿದೆ‌. ಈಗ ಬೇರೆ ಶಾಲೆಗೆ ಸೇರಿಸಿದರೆ ಮಕ್ಕಳ ಭವಿಷ್ಯ ಏನಾಗಲಿದೆ ಅನ್ನೋದು ಪೋಷಕರ ಆತಂಕವಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...