Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬೆಂಗಳೂರು: ಭೀಕರ ಅಗ್ನಿ ದುರಂತಕ್ಕೆ ಇಬ್ಬರು ಹಸುಗೂಸುಗಳು ಬಲಿ

---Advertisement---

ಸುದ್ದಿಒನ್,ಬೆಂಗಳೂರು,ಮೇ.12: ನಗರದ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ಸಂಜೆ ಸಂಭವಿಸಿದ ಅಗ್ನಿ ಅವಘಡವೊಂದು ಇಬ್ಬರು ಕಂದಮ್ಮಗಳ ಪ್ರಾಣಪಕ್ಷಿಯನ್ನು ಹಾರಿಸಿದೆ. ಆಟವಾಡುತ್ತಿದ್ದ ಶೆಡ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಇಬ್ಬರು ಮಕ್ಕಳು ಜೀವಂತ ದಹನವಾಗಿರುವ ದಾರುಣ ಘಟನೆ ನಡೆದಿದೆ.

ಉತ್ತರ ಕರ್ನಾಟಕ ಮೂಲದ ವಲಸೆ ಕಾರ್ಮಿಕರು ಕೊತ್ತನೂರಿನ ನಿರ್ಮಾಣ ಹಂತದ ಕಟ್ಟಡವೊಂದರ ಸಮೀಪ ತಾತ್ಕಾಲಿಕ ಶೆಡ್‌ಗಳನ್ನು ನಿರ್ಮಿಸಿಕೊಂಡು ವಾಸವಿದ್ದರು. ಮೃತ ಮಕ್ಕಳನ್ನು ಸಿದ್ಧಾರ್ಥ್ ಮತ್ತು ಅಕ್ಷತಾ ಎಂದು ಗುರುತಿಸಲಾಗಿದೆ. ಕಾರ್ಮಿಕ ದಂಪತಿಗಳು ಕೆಲಸಕ್ಕೆ ತೆರಳಿದ್ದ ಸಮಯದಲ್ಲಿ ಈ ದುರಂತ ಸಂಭವಿಸಿದೆ.

ಮಕ್ಕಳ ತಂದೆ-ತಾಯಿ ಎಂದಿನಂತೆ ಕೆಲಸಕ್ಕೆ ಹೋಗಿದ್ದಾಗ, ಮಕ್ಕಳಿಬ್ಬರು ಶೆಡ್‌ನ ಒಳಭಾಗದಲ್ಲಿ ಆಟವಾಡುತ್ತಿದ್ದರು. ಈ ವೇಳೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಶೆಡ್ ನಿರ್ಮಾಣಕ್ಕೆ ಪ್ಲಾಸ್ಟಿಕ್ ಶೀಟ್ ಹಾಗೂ ಇತರ ದಹನಕಾರಿ ವಸ್ತುಗಳನ್ನು ಬಳಸಿದ್ದರಿಂದ, ಬೆಂಕಿ ಕ್ಷಣಾರ್ಧದಲ್ಲಿ ಇಡೀ ಶೆಡ್ ಅನ್ನು ಆವರಿಸಿಕೊಂಡಿದೆ.

ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಅಷ್ಟರಲ್ಲಾಗಲೇ ಮಕ್ಕಳು ಬೆಂಕಿಗೆ ಆಹುತಿಯಾಗಿದ್ದರು. ಕೊತ್ತನೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now