Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಭದ್ರಾ ಮೇಲ್ದಂಡೆ ಯೋಜನೆ : ಕರ್ನಾಟಕದ ಜನತೆಗೆ ಸಿಹಿ ಸುದ್ದಿ

---Advertisement---

ಭದ್ರಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕದ ಜನತೆಗೆ ಗುಡ್ ನ್ಯೂಸ್ ಸಿಕ್ಕಿದೆ. ಈ ಯೋಜನೆಗೆ ಬೇಕಾದ ಅರಣ್ಯ ಭೂಮಿಯನ್ನು ಬಳಸಿಕೊಳ್ಳಲು ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಭೂಮಿ ಬಳಸಿಕೊಳ್ಳಲು ಷರತ್ತು ಬದ್ಧ ಒಪ್ಪಿಗೆ ನೀಡಿದೆ. 128 ಎಕರೆ ಅರಣ್ಯ ಭೂಮಿ ಬಳಸಿಕೊಳ್ಳಲು ಕೇಂದ್ರ ಸರ್ಕಾರದ ರಾಷ್ಟ್ರೀಯ ವನ್ಯ ಜೀವಿ ಮಂಡಳಿಯ ಸ್ಥಾಯಿ ಸಮಿತಿ ಒಪ್ಪಿಗೆ ನೀಡಿದೆ.

ಶಿರಾ ತಾಲೂಕಿನ ಬುಕ್ಕಾಪಟ್ಟಣ ಚಿಂಕಾರ ವನ್ಯಜೀವಿ ಧಾಮದ 128 ಎಕರೆ ಭದ್ರಾ ಮೇಲ್ದಂಡೆ ಕಾಲುವೆ ನಿರ್ಮಾಣಕ್ಕೆ ಬಳಕೆ ಮಾಡಬೇಕು. ಕಾಲುವೆಯ ಮೇಲೆ ಪ್ರತಿ 500 ಮೀಟರ್ ಅಂತರದಲ್ಲಿ ಮೇಲು ರಸ್ತೆ ನಿರ್ಮಿಸಲು ಷರತ್ತು ವಿಧಿಸಿದೆ. ಇದರಿಂದ ಚಿಂಕಾರ ವನ್ಯಜೀವಿಗಳು ಸುಲಲಿತವಾಗಿ ಓಡಾಡಲು ಅನುಕೂಲ ಆಗಲಿದೆ ಎಂಬ ಷರತ್ತನ್ನು ಕೇಂದ್ರ ಸರ್ಕಾರ ವಿಧಿಸಿದೆ. ಈ ಷರತ್ತಿಗೆ ಕರ್ನಾಟಕ ಕೂಡ ಒಪ್ಪಿಗೆ ಸೂಚಿಸಿದೆ.

ಭದ್ರಾ ಮೇಲ್ದಂಡೆ ಯೋಜನೆಯಿಂದ ಹಲವು ಜಿಲ್ಲೆಗಳಿಗೆ ಅನುಕೂಲ ಆಗಲಿದೆ. ಅದರಲ್ಲೂ ತುಮಕೂರು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಿಗೆ ಭಾರೀ ಅನುಕೂಲವಾಗಲಿದೆ. ಶಿರಾ ತಾಲೂಕಿನಲ್ಲಿ ನೀರಿನ ವ್ಯವಸ್ಥೆ ಸರಿಯಾಗಿಲ್ಲದ ಕಾರಣ ಅಲ್ಲಿ ಬೇರೆ ಬೆಳೆಯನ್ನು ಜನ ಅಷ್ಟಾಗಿ ಬೆಳೆಯಲು ಸಾಧ್ಯವಾಗಿಲ್ಲ. ಭದ್ರಾ ಮೇಲ್ದಂಡೆ ಯೋಜನೆ ಕಂಪ್ಲೀಟ್ ಆದರೆ ಇದರಿಂದ ಶಿರಾ, ಚಿಕ್ಕನಾಯಕನಹಳ್ಳಿ,ಪಾವಗಡ ತಾಲೂಕಿಗೆ ನೀರು ಸರಬರಾಜು ಆಗಲಿದೆ. ನಂತರ ರೈತರ ಬೆಳೆಗಳಿಗೆ ಹನಿ ನೀರಾವರಿ ಮೂಲಕ ನೀರು ಪೂರೈಕೆಯಾಗಲಿದೆ‌. ಭದ್ರಾ ಮೇಲ್ದಂಡೆ ಯೋಜನೆ ಶಾಶ್ಚತ ಬರಪೀಡಿತ ಪ್ರದೇಶಗಳಿಗೆ ವರದಾನವಾಗಲಿದೆ. ಮಧ್ಯ ಕರ್ನಾಟಕ ಭಾಗದ ರೈತರ ಕನಸು ಈ ಮೂಲಕ ನನಸಾಗಲಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...