Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಶಾಖಾ ಕಾಲುವೆಗೆ ಹರಿದ ಭದ್ರೆ: ಪೂಜೆ ಸಲ್ಲಿಸಿ ಚಾಲನೆ ನೀಡಿದ ಸಚಿವ ಟಿ. ರಘುಮೂರ್ತಿ

---Advertisement---

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 06 : ಭದ್ರಾ ಜಲಾಶಯದಿಂದ ಚಿತ್ರದುರ್ಗ ಶಾಖಾ ಕಾಲುವೆಗೆ ಪ್ರಾಯೋಗಿಕವಾಗಿ ನೀರು ಹರಿಸುವ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಯಿತು.

ಭದ್ರಾ ಮೇಲ್ದಂಡೆ ಯೋಜನೆಯ ಇನ್ಟೇಕ್ ಪಾಯಿಂಟ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಟಿ. ರಘುಮೂರ್ತಿ ಅವರು ಪೂಜೆ ನೆರವೇರಿಸುವ ಮೂಲಕ ನೀರು ಹರಿಸುವ ಕಾರ್ಯಕ್ಕೆ ಚಾಲನೆ ನೀಡಿದರು.

ಭದ್ರಾ ಜಲಾಶಯದಿಂದ ಚಿತ್ರದುರ್ಗ ಶಾಖಾ ಕಾಲುವೆಗೆ ನೀರು ಹರಿಯುತ್ತಿರುವುದು ಜಿಲ್ಲೆಯ ಜನರಲ್ಲಿ ಸಂತಸ ಮೂಡಿಸಿದೆ. ಪ್ರಾಯೋಗಿಕವಾಗಿ ನೀರು ಹರಿಸುವ ಮೂಲಕ ಕಾಲುವೆಯ ವ್ಯವಸ್ಥೆ ಹಾಗೂ ನೀರಿನ ಹರಿವನ್ನು ಪರಿಶೀಲಿಸಲಾಗುತ್ತಿದೆ.

ಕಾರ್ಯಕ್ರಮದಲ್ಲಿ ಹೊಸದುರ್ಗ ಶಾಸಕ ಬಿ.ಜಿ. ಗೋವಿಂದಪ್ಪ, ಚಿತ್ರದುರ್ಗ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ, ತರೀಕೆರೆ ಶಾಸಕ ಶ್ರೀನಿವಾಸ್, ಶಿರಾ ಶಾಸಕ ಟಿ.ಬಿ. ಜಯಚಂದ್ರ ಸೇರಿದಂತೆ ಹಲವು ಗಣ್ಯರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now