ಬೆಂಗಳೂರು: 2025ರ ಮೈಸೂರು ದಸರಾ ಕಾರ್ಯಕ್ರಮವನ್ನು ಯಾರು ಉದ್ಘಾಟನೆ ಮಾಡಬಹುದು ಎಂದು ಎಲ್ಲರಿಗೂ ಕುತೂಹಲವಿತ್ತು. ಅದರಲ್ಲೂ ಈ ಭಾರೀಯ ಮೈಸೂರು ದಸರಾ ಉದ್ಘಾಟನೆ ಮಾಡುವ ವಿಚಾರಕ್ಕೆ ಅನೇಕ ಗಣ್ಯರ ಹೆಸರುಗಳು ಕೇಳಿ ಬಂದಿತ್ತು. ಮೈಸೂರಿನ ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ಹೆಸರುಗಳು ಚರ್ಚೆಯಲ್ಲಿತ್ತು. ಇದೀಗ ಆ ಕುತೂಹಲಕ್ಕೆ ಇದೀಗ ಬ್ರೇಕ್ ಬಿದ್ದಿದ್ದು, ಸಿಎಂ ಸಿದ್ದರಾಮಯ್ಯ ಅವರು ಉದ್ಘಾಟನೆ ಮಾಡುವುದರ ಬಗ್ಗೆ ಘೋಷಣೆ ಮಾಡಿದ್ದಾರೆ. ಬೂಕರ್ ಪ್ರಶಸ್ತಿ ಪಡೆದ ಭಾನು ಮುಷ್ತಾಕ ಅವರು ಉದ್ಘಾಟನೆ ಮಾಡಲಿದ್ದಾರೆ.
2025ರ ಸೆಪ್ಟೆಂಬರ್ 22 ರಂದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ. ಅಕ್ಟೋಬರ್ 2 ರಂದು ಮೈಸೂರು ಅರಮನೆ ಆವರಣದಲ್ಲಿ ಜಂಬೂಸವಾರಿ ನಡೆಯಲಿದೆ. ಈ ಬಾರಿಯ ದಸರಾದಲ್ಲಿ ಭಾರತೀಯ ವಾಯುಪಡೆಯಿಂದ ಏರ್ ಶೋ ಕೂಡ ನಡೆಸಲು ಒಪ್ಪಿದ್ದಕ್ಕಾಗಿ ಕೇಂದ್ರದ ರಕ್ಷಣಾ ಖಾತೆ ಸಚಿವ ರಾಜನಾಥ್ ಸಿಂಗ್ ಗೆ ಸಿಎಂ ಸಿದ್ದರಾಮಯ್ಯ ಧನ್ಯವಾದ ಅರ್ಪಿಸಿದ್ದಾರೆ.
ಜೊತೆಗೆ ರಾಜನಾಥ್ ಸಿಂಗ್ ಅವರನ್ನು ಮೈಸೂರು ದಸರಾದಲ್ಲಿ ಪಾಲ್ಗೊಳ್ಳುವುದಕ್ಕೆ ಆಹ್ವಾನ ನೀಡಿದ್ದಾರೆ. ಈ ಬಾರಿ ಮೈಸೂರು ದಸರಾ 11 ದಿನಗಳ ಕಾಲ ನಡೆಯಲಿದೆ. ಮೈಸೂರು ದಸರಕ್ಕಾಗಿ ಈಗಾಗಲೇ ಭರದ ಸಿದ್ಧತೆಗಳು ನಡೆಯುತ್ತಿವೆ. ಸೆಪ್ಟೆಂಬರ್ 22 ರಿಂದ ಆಕ್ಟೋಬರ್ 2 ರವರೆಗೆ ಮೈಸೂರು ದಸರಾ ನಡೆಯಲಿದೆ. ಈಗಾಗಲೇ ಚಿನ್ನದ ಅಂಬಾರಿ ಹೊರಲಿರುವ ಆನೆಗಳು ತಂಡ ಮೈಸೂರಿಗೆ ಆಗಮಿಸಿದೆ. ಇನ್ನು ಈ ಬಾರಿ ಉದ್ಘಾಟನೆ ಮಾಡುತ್ತಿರುವ ಭಾನು ಮುಷ್ತಾಕ್ ಅವರು ಬರೆದ ಹಾರ್ಟ್ ಲ್ಯಾಂಪ್ ಕೃತಿಗೆ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಬಂದಿದೆ.






