ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಲೇ ಇದ್ದಾರೆ. ಇದೀಗ ಹೋರಾಟ ಮತ್ತೆ ತೀವ್ರತೆ ಪಡೆದುಕೊಂಡಿದ್ದು, ಸೆಪ್ಟೆಂಬರ್ 27ಕ್ಕೆ ಭಾರತ್ ಬಂದ್ ಗೆ ಕರೆ ನೀಡಿದ್ದಾರೆ.
ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆ ಭಾರತ್ ಬಂದ್ ಗೆ ಕರೆ ಕೊಟ್ಟಿದೆ. ಈ ನೂತನ ಕಾಯ್ದೆಗಳನ್ನು ವಿರೋಧಿಸಿ ಇಂದು ರೈತ ಸಂಘಟಬೆಗಳು ಉತ್ತರ ಪ್ರದೇಶದಲ್ಲಿ ರೈತರ ಮಹಾಪಂಚಾಯತ್ ಆಯೋಜನೆ ಮಾಡಿದ್ದರು. ಆ ಸಭೆಯಲ್ಲಿ ಸಾವಿರಾರು ಜನ ರೈತರು ಪಾಲ್ಗೊಂಡಿದ್ದರು.
ಮಹಾಪಂಚಾಯತ್ ಸಭೆಯಲ್ಲಿ 300 ಕ್ಕೂ ಹೆಚ್ಚು ರೈತರು ಭಾಗಿಯಾಗಿದ್ರು. ಈ ವೇಳೆ ಎಲ್ಲರಿಂದಲೂ ಅಭೂತಪೂರ್ವ ಸ್ಪಂದನೆ ಸಿಕ್ಮಿದೆ. ಇನ್ನು ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆಯ ರಾಕೇಶ್ ಟಿಕಾಯತ್ ಮಾತನಾಡಿ, ಕೇಂದ್ರದ ವಿರುದ್ಧ ಬಹಳ ಪರಿಣಾಮಕಾರಿಯಾಗಿ ನಮ್ಮ ಹಕ್ಕುಗಳನ್ನು ಮಂಡಿಸಲಿದ್ದೇವೆ. ಇನ್ನು ಒಂಜಾಬ್ ನ 32 ರೈತ ಸಂಘಟನೆಯ ಕಾರ್ಯಕರ್ತರ ವಿರುದ್ಧ ದಾಖಲಾಗಿರುವ ಕೇಸನ್ನ ವಾಪಾಸ್ ಪಡೆಯಲು ಕೇಂದ್ರಕ್ಕೆ ಸೆಪ್ಟೆಂಬರ್ 8ರವರೆಗೆ ಗಡುವು ನೀಡಲಾಗಿದೆ. ನೂತನ ಕಾಯ್ದೆಗಳನ್ನು ಹಿಂಪಡೆಯಬೇಕು ಇದಕ್ಕಾಗಿ ಸೆಪ್ಟೆಂಬರ್ 27 ರಂದು ಭಾರತ್ ಬಂದ್ ಮಾಡಲಾಗುತ್ತೆ ಎಂದು ಎಚ್ಚರಿಸಿದ್ದಾರೆ.