Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗಕ್ಕೆ ಆಗಮಿಸಿದ ಭಾರತ್ ಬಂಜಾರ ಜೋಡೋ ಏಕತಾ ಸಂಕಲ್ಪ ಯಾತ್ರೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜುಲೈ. 08 : ಭಾರತ್ ಬಂಜಾರ ಜೋಡೋ ಏಕತಾ ಸಂಕಲ್ಪ ಯಾತ್ರೆ ಬುಧವಾರ ಚಿತ್ರದುರ್ಗಕ್ಕೆ ಆಗಮಿಸಿದಾಗ ಬಂಜಾರ ಗುರುಪೀಠದ ಸರ್ದಾರ್ ಸೇವಾಲಾಲ್ ಸ್ವಾಮೀಜಿ ಬರಮಾಡಿಕೊಂಡರು.
ಮಹಾರಾಷ್ಟ್ರದ ಬಂಜಾರ ಸಮಾಜದ ಗುರುಗಳಾದ ಬಾಬುಸಿಂಗ್ ಮಹಾರಾಜ್‍ರವರ ಸಾರಥ್ಯದಲ್ಲಿ ಅನಂತಪುರ ಜಿಲ್ಲೆಯ ಗುತ್ತಿ ಸೇವಾಗಡ್‍ನಿಂದ ಪ್ರಾರಂಭಗೊಂಡಿರುವ ಈ ಯಾತ್ರೆ ಸೂರಗೊಂಡನಕೊಪ್ಪಕ್ಕೆ ತೆರಳಿ ಅಲ್ಲಿಂದ ದೆಹಲಿ ತಲುಪಿ ಬೃಹತ್ ಮಟ್ಟದಲ್ಲಿ ಬಂಜಾರ ಜೋಡೋ ಏಕತಾ ಸಂಕಲ್ಪ ಯಾತ್ರೆಯನ್ನು ನಡೆಸಲಿದೆ.

 

ಒಂದು ಸಮಾಜ, ಒಂದು ಧ್ವನಿ, ಒಂದು ಸಂಕಲ್ಪ ಎಂಬ ಉದ್ದೇಶವನ್ನಿಟ್ಟುಕೊಂಡು ಸಂಚರಿಸುತ್ತಿರುವ ಬಂಜಾರ ಜೋಡೋ ಏಕತಾ ಸಂಕಲ್ಪ ಯಾತ್ರೆಯ ದೆಹಲಿ ಕಾರ್ಯಕ್ರಮದಲ್ಲಿ ರಾಜ್ಯದ 22 ಜಿಲ್ಲೆಗಳಿಂದ ಸ್ವಾಮೀಜಿಗಳು, ರಾಜಕಾರಣಿಗಳು, ಬಂಜಾರ ಸಮಾಜದ ಮುಖಂಡರುಗಳು ಭಾಗವಹಿಸಲಿದ್ದಾರೆಂದು ಚಿತ್ರದುರ್ಗ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಸುರೇಶ್‍ನಾಯ್ಕ ತಿಳಿಸಿದರು.

 

ಬಂಜಾರ ಗುರುಪೀಠದ ಸರ್ದಾರ್ ಸೇವಾಲಾಲ್ ಸ್ವಾಮೀಜಿ, ಆರ್.ಗಿರೀಶ್‍ನಾಯ್ಕ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ರಾಜಾನಾಯ್ಕ ಸೇರಿದಂತೆ ಬಂಜಾರ ಸಮಾಜದ ಅನೇಕ ಮುಖಂಡರುಗಳು ಈ ಸಂದರ್ಭದಲ್ಲಿ ಹಾಜರಿದ್ದರು. ಏಕತಾ ಸಂಕಲ್ಪ ಯಾತ್ರೆಯ ನೇತೃತ್ವ ವಹಿಸಿದರುವ ಬಾಬುಸಿಂಗ್ ಮಹಾರಾಜ್‍ರವರು ಒನಕೆ ಓಬವ್ವ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗಳಿಗೆ ಮಾಲಾರ್ಪಣೆ ಸಲ್ಲಿಸಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now