ಚಿತ್ರದುರ್ಗ. ಜುಲೈ23: ಬೆಂಗಳೂರು ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಅವರು 10 ಖಾಯಂ ಚಾಲಕ ಹುದ್ದೆಗಳಿಗೆ 43 ವರ್ಷದೊಳಗಿನ SHAPE-1 ಮೆಡಿಕಲ್ ಕ್ಯಾಟಗೇರಿ ಹೊಂದಿರುವ ಅರ್ಹ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ವೇತನ ಶ್ರೇಣಿ 20500-3%-79000 ಮತ್ತು ಇತರೆ ಭತ್ಯೆಗಳು. ಅಭ್ಯರ್ಥಿಗಳು ಎಸ್‍ಎಸ್‍ಎಲ್‍ಸಿ ಉತ್ತೀರ್ಣರಾಗಿರಬೇಕು ಹಾಗೂ ಕನ್ನಡ ಭಾಷಾ ಜ್ಞಾನವನ್ನು ಕಡ್ಡಾಯವಾಗಿ ಹೊಂದಿರಬೇಕು. ಅರ್ಜಿ ಸಲ್ಲಿಸಲು ಆಗಸ್ಟ್ 06 ಕೊನೆಯ ದಿನವಾಗಿದೆ.
ಅರ್ಜಿಯನ್ನು ವೆಬ್‍ಸೈಟ್ www.bel-india.in/careers ನಲ್ಲಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-22195650 ಅನ್ನು ಸಂಪರ್ಕಿಸಬಹುದು ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕ ಡಾ.ಸಿ.ಎ.ಹಿರೇಮಠ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















