ಭಾರತ್ ಜೋಡೋ ಪಾದಯಾತ್ರೆ ವಾರ್ಷಿಕೋತ್ಸವ : ಚಿತ್ರದುರ್ಗದಲ್ಲಿ ಜಿಲ್ಲಾ ಕಾಂಗ್ರೆಸ್ ನಿಂದ ಮತ್ತೆ ಪಾದಯಾತ್ರೆ, ಇಲ್ಲಿದೆ ಮಾಹಿತಿ

1 Min Read

 

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್ 07 : ದೇಶದಾದ್ಯಂತ ತೀವ್ರ ಸಂಚಲನವನ್ನು ಸೃಷ್ಟಿ ಮಾಡಿದ್ದ ಭಾರತ್ ಜೋಡೋ ಪಾದಯಾತ್ರೆಯ ಪ್ರಥಮ ವಾರ್ಷಿಕೋತ್ಸವವನ್ನು ಆಚರಿಸಲು ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಸಿದ್ದತೆ ನಡೆಸಿದೆ.

ನಗರದ ಹೊಳಲ್ಕೆರೆ ರಸ್ತೆಯಲ್ಲಿರುವ ಕನಕ ವೃತ್ತದಿಂದ ಆರಂಭವಾಗಿ ಸಂಗೊಳ್ಳಿ ರಾಯಣ್ಣ ವೃತ್ತದ ಮುಖಾಂತರ ಗಾಂಧಿ ವೃತ್ತಕ್ಕೆ ತಲುಪಿ ಅಲ್ಲಿಂದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ಮುಖಾಂತರ ಮದಕರಿ ನಾಯಕ ವೃತ್ತದಿಂದ ಎಡಕ್ಕೆ ತಿರುಗಿ ಒನಕೆ ಓಬವ್ವ ವೃತ್ತಕ್ಕೆ ಬಂದು ಭಾರತ್ ಜೋಡೋ ಪಾದಯಾತ್ರೆಯ ಪ್ರಥಮ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಆಚರಿಸಲಾಗುವುದು.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು ಹಾಗೂ ಮಾನ್ಯ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಆದೇಶದ ಮೇರೆಗೆ, ಡಿ.ಸುಧಾಕರ್ ರವರು, ಮಾನ್ಯ ಸಚಿವರು, ಯೋಜನಾ ಮತ್ತು ಸಾಂಖ್ಯಿಕ ಇಲಾಖೆ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರು,  ಬಿ.ಎನ್.ಚಂದ್ರಪ್ಪ ರವರು, ಕಾರ್ಯಾಧ್ಯಕ್ಷ , ಕೆಪಿಸಿಸಿ & ಮಾಜಿ ಸಂಸದರು, ಎಂ. ಕೆ. ತಾಜ್‍ಪೀರ್ ರವರು, ಅಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ಸಮಿತಿ, ಚಿತ್ರದುರ್ಗ ಮತ್ತು ಕೆ. ಎಂ. ಹಾಲಸ್ವಾಮಿ ಕಾರ್ಯಾಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ಸಮಿತಿ,  ಇವರ ಸೂಚನೆಯಂತೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಸೆಪ್ಟೆಂಬರ್ 9 ರ ಶನಿವಾರ ಸಂಜೆ 5-00 ಗಂಟೆಯಿಂದ 6-00 ಗಂಟೆಗಳ ವರೆಗೆ ನಗರದ ಹೊಳಲ್ಕೆರೆ ರಸ್ತೆಯ ಕನಕ ವೃತ್ತದಿಂದ ಆರಂಭವಾಗಿ ಸಂಗೊಳ್ಳಿ ರಾಯಣ್ಣ ವೃತ್ತದ ಮುಖಾಂತರ ಗಾಂಧಿ ವೃತ್ತಕ್ಕೆ ತಲುಪಿ ಅಲ್ಲಿಂದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ಮುಖಾಂತರ ಮದಕರಿ ನಾಯಕ ವೃತ್ತದಿಂದ ಎಡಕ್ಕೆ ತಿರುಗಿ ಒನಕೆ ಓಬವ್ವ ವೃತ್ತಕ್ಕೆ ಬಂದು ಭಾರತ್ ಜೋಡೋ ಪಾದಯಾತ್ರೆಯ ಪ್ರಥಮ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಆಚರಿಸಲಾಗುವುದು. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ. ಪಿ. ಸಂಪತ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಧಾನ ಕಾರ್ಯದರ್ಶಿ ಮೊಬೈಲ್ ಸಂಖ್ಯೆ :
9449681822

Share This Article
Leave a Comment

Leave a Reply

Your email address will not be published. Required fields are marked *