Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಭಾರತ್ ಜೋಡೋ ಯಾತ್ರೆ ಪುನರಾರಂಭ : ಮಂಡ್ಯದಲ್ಲಿ ರಾಹುಲ್ ಜೊತೆ ಹೆಜ್ಜೆ ಹಾಕಿದ ಸೋನಿಯಾ ಗಾಂಧಿ

Facebook
Twitter
Telegram
WhatsApp

ಮಂಡ್ಯ (ಅಕ್ಟೋಬರ್. 6) :  ಜಿಲ್ಲೆಯಲ್ಲಿ ಭಾರತ್ ಜೋಡೋ ಯಾತ್ರೆ ಪುನರಾರಂಭಗೊಂಡಿದೆ. ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ಪುತ್ರ ರಾಹುಲ್ ಗಾಂಧಿಯವರೊಂದಿಗೆ ಹೆಜ್ಜೆ ಹಾಕಿದರು.

ಪಾಂಡವಪುರ ತಾಲೂಕಿನ ಜಕನಹಳ್ಳಿಯಿಂದ ಬೆಳಗ್ಗೆ 6.30ಕ್ಕೆ ಪುನರಾರಂಭಗೊಂಡ ಪಾದಯಾತ್ರೆ ಸಂಜೆ 7ಕ್ಕೆ ನಾಗಮಂಗಲ ತಾಲೂಕಿನಲ್ಲಿ ಕೊನೆಗೊಳ್ಳಲಿದೆ.

ಸೋನಿಯಾ ಗಾಂಧಿ ಅವರು ಈ ಪಾದಯಾತ್ರೆಯಲ್ಲಿ ಪಾಲ್ಗೊಂಡಿರುವುದು ಪಕ್ಷಕ್ಕೆ ಹೆಮ್ಮೆಯ ಸಂಗತಿ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ವಿಜಯದಶಮಿ ನಂತರ ಕರ್ನಾಟಕದಲ್ಲಿ ವಿಜಯೋತ್ಸವ ನಡೆಯಲಿದೆ. ಸೋನಿಯಾ ಗಾಂಧಿ ಅವರು ಕರ್ನಾಟಕದಲ್ಲಿ ಪಾದಯಾತ್ರೆ ಮಾಡುತ್ತಿರುವುದು ನಮಗೆ ಹೆಮ್ಮೆ, ನಾವು ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತೇವೆ ಮತ್ತು ಬಿಜೆಪಿ ಸರ್ಕಾರವನ್ನು ಕಿತ್ತೊಗೆಯುತ್ತೇವೆ  ಎಂದು ಡಿಕೆ ಶಿವಕುಮಾರ್ ಹೇಳಿದರು.

ಸೋನಿಯಾ ಗಾಂಧಿ ಅವರೊಂದಿಗೆ ಶಾಸಕರಾದ ಅಂಜಲಿ ನಿಂಬಾಳ್ಕರ್, ರೂಪಕಲಾ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು. ಪಾದಯಾತ್ರೆ ಬಳಿಕ ಬ್ರಹ್ಮದೇವರಹಳ್ಳಿ ಗ್ರಾಮದಲ್ಲಿ ಸಭೆ ನಡೆಯಲಿದೆ.

ಕರ್ನಾಟಕದಲ್ಲಿ 21 ದಿನಗಳ ಕಾಲ 511 ಕಿ.ಮೀ. ಯಾತ್ರೆಯು ಚಾಮರಾಜನಗರ, ಮೈಸೂರು, ಮಂಡ್ಯ, ತುಮಕೂರು, ಚಿತ್ರದುರ್ಗ, ಬಳ್ಳಾರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಸಂಚರಿಸಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗೋವಿಂದ ಕಾರಜೋಳರವರನ್ನು ಎರಡು ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ,ಏಪ್ರಿಲ್. 16 : ತಾಯಿಯ ಅಂತ್ಯ ಸಂಸ್ಕಾರ ನಡೆಸಿ ಅಂದೇ ಕೆಲಸದಲ್ಲಿ ನಿರತರಾದ ನರೇಂದ್ರಮೋದಿ ಮೂರನೆ ಬಾರಿಗೆ

ಅಭ್ಯರ್ಥಿ ಗೆಲುವಿಗೆ ಶಕ್ತಿ ಕೇಂದ್ರದ ಪ್ರಮುಖರು ಹಗಲು-ರಾತ್ರಿ ಪ್ರಾಮಾಣಿಕವಾಗಿ ಕೆಲಸ ಮಾಡಿ : ಸಂತೋಷ್‍ ಜಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ,ಏಪ್ರಿಲ್. 16  : ಕಾಂಗ್ರೆಸ್ ಪಕ್ಷ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವುದು ಕಾಂಗ್ರೆಸ್‍ನವರಿಗೆ ಬೇಕಿಲ್ಲ. ಅವರವರ ಕುರ್ಚಿ ಉಳಿಕೊಳ್ಳುವುದೇ

ವಾಣಿ ವಿಲಾಸ ಸಾಗರ ಜಲಾಶಯದ ನೀರನ್ನ ಖಾಲಿ ಮಾಡಲು ಹುನ್ನಾರ :  ರೈತ ಮುಖಂಡ  ರಮೇಶ್ ಆರೋಪ

ಸುದ್ದಿಒನ್, ಹಿರಿಯೂರು, ಏಪ್ರಿಲ್. 16 : ತಾಲೂಕಿನ ವಾಣಿವಿಲಾಸ ಸಾಗರ ಜಲಾಶಯದ ನೀರು ಖಾಲಿ ಮಾಡಲು ಹುನ್ನಾರ ನಡೆಸಲಾಗಿದೆ ಎಂಬುದಾಗಿ  ರೈತ ಮುಖಂಡ ಹಾಗೂವಾಣಿವಿಲಾಸ ಸಾಗರ  ಹಾಗೂ  ಭದ್ರಾ ಮೇಲ್ದಂಡೆ ಅಚುಕಟ್ಟುದಾರ ರೈತಹಿತ ರಕ್ಷಣಾ

error: Content is protected !!