Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಭಾರತ್ ಜೋಡೋ ಯುವಕ ಸಂಘ ಸ್ಥಾಪನೆ, 72 ಸಾವಿರ ಸರ್ಕಾರಿ ಹುದ್ದೆಗಳ ನೇಮಕಾತಿ ಶೀಘ್ರ ; ಸಿಎಂ ಡಿ.ಕೆ ಶಿವಕುಮಾರ್

---Advertisement---

ಬೀದರ್.ಜುಲೈ.07: ಯುವಕರಲ್ಲಿ ಕ್ರೀಡೆ, ಸಂಸ್ಕೃತಿ, ಭ್ರಾತೃತ್ವ, ಸಾಂವಿಧಾನಿಕ ಮೌಲ್ಯಗಳು ಹಾಗೂ ಸಂಘಟನೆಯನ್ನು ಬಲವರ್ಧನೆಗೊಳಿಸಲು ರಾಜ್ಯದಲ್ಲಿ ಭಾರತ್ ಜೋಡೋ ಯುವಕ ಸಂಘವನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.

ಬೀದರ್ ಜಿಲ್ಲಾ ಕಾಂಗ್ರೆಸ್ ಪಕ್ಷದ ವತಿಯಿಂದ ಆಯೋಜಿಸಲಾಗಿದ್ದ ಬೃಹತ್ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಯುವಜನತೆಯ ಸಬಲೀಕರಣಕ್ಕೆ ಸರ್ಕಾರ ಬದ್ಧವಾಗಿದೆ ಎಂದ ಸಿಎಂ, ಶೀಘ್ರದಲ್ಲೇ 72,000 ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಲಾಗುವುದು ಎಂದು ಭರವಸೆ ನೀಡಿದರು. ಇದರೊಂದಿಗೆ ಸಾರ್ವಜನಿಕರ ಅನುಕೂಲಕ್ಕಾಗಿ ಇ-ಖಾತಾದಂತಹ ಸುಧಾರಿತ ಡಿಜಿಟಲ್ ವ್ಯವಸ್ಥೆಗಳನ್ನು ಜಾರಿಗೆ ತರಲಾಗಿದೆ. ಮುಂದಿನ 5 ತಿಂಗಳಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ನಡೆಸಲಾಗುವುದು ಎಂದು ಇದೇ ವೇಳೆ ಅವರು ಸ್ಪಷ್ಟಪಡಿಸಿದರು.

ನಾನು ಕೊರೋನಾ ಸಂಕಷ್ಟದ ಸಮಯದಲ್ಲಿ ಅಧಿಕಾರ ವಹಿಸಿಕೊಂಡು, ಕಳೆದ ಆರು ವರ್ಷಗಳಿಂದ ಕೆಪಿಸಿಸಿ ಅಧ್ಯಕ್ಷನಾಗಿ ಸೇವೆ ಸಲ್ಲಿಸಿದ್ದೇನೆ. ಈ ಅವಧಿಯಲ್ಲಿ ನಾವು ಎದುರಿಸಿದ ಹಲವಾರು ಚುನಾವಣೆಗಳಲ್ಲಿ ನಮಗೆ ನಿಜವಾದ ಶಕ್ತಿ ತುಂಬಿದ್ದು ನಮ್ಮ ಹೆಮ್ಮೆಯ ಕಾರ್ಯಕರ್ತರು. ನಾವೆಲ್ಲಾ ಒಟ್ಟಾಗಿ ಶ್ರಮಿಸಿದ್ದರಿಂದಲೇ ಇಂದು 136 ಸ್ಥಾನಗಳನ್ನು ಗೆದ್ದು ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಸಾಧ್ಯವಾಗಿದೆ. ನಾನೂ ಕೂಡ ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ ಬೆಳೆದು ಬಂದವನು. ಕಾರ್ಯಕರ್ತರೇ ಕಾಂಗ್ರೆಸ್ ಪಕ್ಷದ ಅಸಲಿ ಆಧಾರಸ್ತಂಭ ಎಂದು ಹೇಳಿದರು.

ಈ ರಾಜಕೀಯ ಸಮಾವೇಶದಲ್ಲಿ ಉಪಮುಖ್ಯಮಂತ್ರಿಗಳಾದ ಡಾ. ಜಿ. ಪರಮೇಶ್ವರ್, ಸಚಿವರಾದ ಈಶ್ವರ್ ಖಂಡ್ರೆ, ಶಾಸಕರಾದ ರಹೀಂ ಖಾನ್, ಸಂಸದರಾದ ಸಾಗರ್ ಖಂಡ್ರೆ ಸೇರಿದಂತೆ ಪಕ್ಷದ ಪ್ರಮುಖ ಮುಖಂಡರು ಹಾಗೂ ಸಾವಿರಾರು ಸಂಖ್ಯೆಯ ಕಾರ್ಯಕರ್ತರು ಉಪಸ್ಥಿತರಿದ್ದರು.

Join WhatsApp

Join Now

Join Telegram

Join Now