Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಭರತನಾಟ್ಯ ಕ್ಷೇತ್ರದ ಸಾಧಕ ಸಿ.ಆರ್. ಶಿವಪ್ರಕಾಶ್‌ಗೆ ‘ಕರ್ನಾಟಕ ಕಲಾಶ್ರೀ’ ಪ್ರಶಸ್ತಿ ಗೌರವ

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 29 : ಭರತ ನಾಟ್ಯ ಕ್ಷೇತ್ರದಲ್ಲಿ ಕಳೆದ 42 ವರ್ಷಗಳಿಂದಲೂ ಅಮೋಘ ಸಾಧನೆಗೈಯುತ್ತಿರುವ ಚಿತ್ರದುರ್ಗದ ಅಂಜನಾ ನೃತ್ಯ ಕಲಾ ಕೇಂದ್ರದ ವಿದ್ವಾನ್ ಸಿ.ಆರ್.ಶಿವಪ್ರಕಾಶ್‍ರವರಿಗೆ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಏ.30 ರಂದು ಸಂಜೆ ಆರು ಗಂಟೆಗೆ ಕರ್ನಾಟಕ ನೃತ್ಯ ಮತ್ತು ಸಂಗೀತ ಅಕಾಡೆಮಿಯಿಂದ ಕರ್ನಾಟಕ ಕಲಾಶ್ರಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು.

 

ಚಿತ್ರದುರ್ಗದಲ್ಲಿ ಅಂಜನಾ ನೃತ್ಯ ಕಲಾ ಕೇಂದ್ರ ಸ್ಥಾಪಿಸಿ ಸಾವಿರಾರು ವಿದ್ಯಾರ್ಥಿಗಳಿಗೆ ತರಬೇತಿ ನೀಡಿ ನೃತ್ಯ ಕಲೆಯನ್ನು ಜಾಗತಿಕ ಮಟ್ಟಕ್ಕೆ ತೆಗೆದುಕೊಂಡು ಹೋಗಿರುವ ಸಿ.ಆರ್.ಶಿವಪ್ರಕಾಶ್‍ರವರ ಕಲಾ ಸಾಧನೆಯನ್ನು ಗುರುತಿಸಿ ಕರ್ನಾಟಕ ಕಲಾಶ್ರಿ ಪ್ರಶಸ್ತಿ ನೀಡಿ ಸನ್ಮಾನಿಸಲಾಗುವುದು.

 

ಬಹುಮುಖ ಪ್ರತಿಭೆಯುಳ್ಳ ಇವರು ಶಾಸ್ತ್ರೀಯ ನೃತ್ಯ, ಭರತನಾಟ್ಯ, ಜೂನಿಯರ್ ಸೀನಿಯರ್ ಮತ್ತು ವಿದ್ವತ್ ಮಟ್ಟದ ಪರಿಣತಿ. ಸಂಗೀತ ; ಕರ್ನಾಟಕ ಶಾಸ್ತ್ರೀಯ ಸಂಗೀತ, ಭಾವಗೀತೆ, ಜಾನಪದ ಮತ್ತು ಭಕ್ತಿಗೀತೆ ಗಾಯನ. ನೃತ್ಯ ಸಂಯೋಜನೆ : ಬೃಹತ್ ನೃತ್ಯ ರೂಪಕಗಳ ನಿರ್ದೇಶನ ಮತ್ತು ಪ್ರದರ್ಶನ. ಶೈಕ್ಷಣಿಕ ನಾಯಕತ್ವ : ನೃತ್ಯ ಶಾಲೆಯ ಆಡಳಿತ ಮತ್ತು ಪರೀಕ್ಷಾ ಮಂಡಳಿಗಳ ನಿರ್ವಹಣೆ. ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ, ಬಸವಶ್ರಿ ಪ್ರಶಸ್ತಿ ಮತ್ತು ಶಿವಾಜಿ ಮಹಾರಾಜ ಪ್ರಶಸ್ತಿ, ನಾಟ್ಯ ಚೂಡಾಮಣಿ, ನಾಟ್ಯ ಪ್ರವೀಣ ಸೇರಿದಂತೆ ಹತ್ತು ಹಲವಾರು ಪ್ರಶಸ್ತಿಗಳನ್ನು ಪಡೆದಿರುವ ಸಿ.ಆರ್.ಶಿವಪ್ರಕಾಶ್‍ರವರು ಕರ್ನಾಟಕ ಕಲಾಶ್ರಿ ಪ್ರಶಸ್ತಿ ಸ್ವೀಕರಿಸುತ್ತಿರುವ ಕ್ಷಣವನ್ನು ಕಣ್ತುಂಬಿಕೊಳ್ಳಲು ಕುಟುಂಬದವರು, ಬಂಧುಗಳು, ಅಭಿಮಾನಿಗಳು ಹಾಗೂ ಅಪಾರ ಶಿಷ್ಯ ವೃಂದದವರು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಳ್ಳುವರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now