ಬಳ್ಳಾರಿ: ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ಈಗಾಗಲೇ ಕರ್ನಾಟಕದ ತುಮಕೂರು, ಚಿತ್ರದುರ್ಗ, ರಾಯಚೂರು ದಾಟಿ ಸಂಚರಿಸುತ್ತಿರು ಐಕ್ಯತಾ ಯಾತ್ರೆ ನಾಳೆ ಬಳ್ಳಾರಿಯಲ್ಲಿ ಬೃಹತ್ ಸಮಾವೇಶ ನಡೆಸಲಿದೆ. ಈ ಸಮಾವೇಶದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಾತನಾಡಿದ್ದಾರೆ.
ಬಳ್ಳಾರಿಯಲ್ಲಿ ಸಮಾವೇಶದ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಡಿ ಕೆ ಶಿವಕುಮಾರ್, ನಾಳೆ ಮಧ್ಯಾಹ್ನ 1 ಗಂಟೆಗೆ ಸಮಾವೇಶದ ಉದ್ಘಾಟನೆಯಾಗಲಿದೆ. ಸಮಾವೇಶದಲ್ಲಿ ಕಾಂಗ್ರೆಸ್ ಸಂಸದ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್, ಛತ್ತೀಸ್ ಘಡ ಸಿಎಂ ಭೂಪೇಶ್ ಬಘೇಲ್ ಸೇರಿದಂತೆ ಹಲವು ರಾಜ್ಯದ ಪ್ರಮುಖರು ಈ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆಂದು ಮಾಹಿತಿ ನೀಡಿದ್ದಾರೆ.
ಕೇಂದ್ರದ ವಿರುದ್ಧ ಈ ಭಾರತ್ ಜೋಡೋ ಯಾತ್ರೆ ನಡೆಯುತ್ತಿದೆ. ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಈ ಯಾತ್ರೆ ನಡೆಸಲಾಗುತ್ತಿದೆ ಎಂದು ಬಳ್ಳಾರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಾಹಿತಿ ಹಂಚಿಕೊಂಡಿದ್ದಾರೆ.