Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಭಟ್ಕಳ ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

---Advertisement---

ಸುದ್ದಿಒನ್,ಬೆಂಗಳೂರು,ಮೇ.24: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಸಮೀಪದ ತಟ್ಟೆಹಕ್ಕಲು ಕಡಲ ತೀರದಲ್ಲಿ ಕಪ್ಪೆಚಿಪ್ಪು ತರಲು ಹೋಗಿ ಒಂದೇ ಕುಟುಂಬದ ಎಂಟು ಮಂದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಸಮೀಪದ ತಟ್ಟೆಹಕ್ಕಲು ಕಡಲ ತೀರದಲ್ಲಿ ಕಪ್ಪೆಚಿಪ್ಪು ತರಲು ಹೋದವರ ಪೈಕಿ ಒಂದೇ ಕುಟುಂಬದ ಎಂಟು ಮಂದಿ ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ ಸುದ್ದಿ ತಿಳಿದು ಸಂಕಟವಾಯಿತು. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ಇದೊಂದು ಅತ್ಯಂತ ದುರದೃಷ್ಟಕರ ಮತ್ತು ನೋವಿನ ಘಟನೆ. ದುರಂತದಲ್ಲಿ ಮಡಿದವರ ಕುಟುಂಬಕ್ಕೆ ಮಾನವೀಯ ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು.ಇನ್ನೂ ಕೆಲವರು ಈ ದುರ್ಘಟನೆಯಲ್ಲಿ ಕಾಣೆಯಾಗಿರುವ ಮಾಹಿತಿಯಿದ್ದು, ಅವರಿಗಾಗಿ ತೀವ್ರ ಹುಡುಕಾಟ ನಡೆಸಲಾಗುತ್ತಿದೆ. ಕಾಣೆಯಾದವರು ಬದುಕಿಬಂದು ತಮ್ಮವರನ್ನು ಕೂಡಿಕೊಳ್ಳಲಿ‌ ಎಂದು ನಾವೆಲ್ಲರೂ ದೇವರಲ್ಲಿ ಪ್ರಾರ್ಥಿಸೋಣ ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now