Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಮೃತ ರೇಣುಕಾಸ್ವಾಮಿ ಮನೆಗೆ ಭಾವನಾ ಬೆಳಗೆರೆ ಭೇಟಿ : ಆರೋಪಿಗಳ ಶಿಕ್ಷೆಗೆ ಒತ್ತಾಯ

---Advertisement---

 

ಸುದ್ದಿಒನ್,  ಚಿತ್ರದುರ್ಗ, ಜೂ.11  : ಪವಿತ್ರ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದ್ದ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಅವರ ಕೊಲೆಯಾಗಿದೆ. ಈ ಕೊಲೆ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಸೇರಿದಂತೆ ಈಗಾಗಲೇ 13 ಜನರ ಬಂಧನವಾಗಿದೆ. ಆರೋಪಿಗಳನ್ನು ಕೋರ್ಟ್ ಗೂ ಹಾಜರುಪಡಿಸಲಾಗಿದೆ. ಮೃತ ರೇಣುಕಾ ಸ್ವಾಮಿಗೆ ಮದುವೆಯಾಗಿ ವರ್ಷವಷ್ಟೇ. ಹೆಂಡತಿ ಬೇರೆ ಗರ್ಭಿಣಿ. ಇದ್ದ ಒಬ್ಬ ಮಗನನ್ನು ಕಳೆದುಕೊಂಡ ಕುಟುಂಬ ಕಣ್ಣೀರಲ್ಲಿ ಮುಳುಗಿದೆ.

ಚಿತ್ರದುರ್ಗದಲ್ಲಿರುವ ಮೃತ ರೇಣುಕಾಸ್ವಾಮಿ ಮನೆಗೆ ಭಾವನಾ ಬೆಳಗೆರೆ ಭೇಟಿ ನೀಡಿದ್ದಾರೆ. ದುಃಖದಲ್ಲಿದ್ದ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಮನೆಯಲ್ಲಿ ಇದ್ದ ಮೃತನ ಪತ್ನಿಗೆ ಧೈರ್ಯ ತುಂಬಿ ಸಾಂತ್ವನ ನೀಡಿದ್ದಾರೆ. ಇದೆ ವೇಳೆ ಆರೋಪಿಗಳ ಶಿಕ್ಷೆಗೆ ಆಗ್ರಹಿಸಿದ್ದಾರೆ.

ಮೃತರ ಮನೆಯ ಬಳಿಯೇ ಸುದ್ದಿಗಾರರೊಂದಿಗೆ ಮಾತನಾಡಿದ ಭಾವನಾ ಬೆಳಗೆರೆ ಅವರು, ಕೊಲೆ ಆರೋಪಿಗೆ ಕಠಿಣ ಶಿಕ್ಷೆ ಆಗಬೇಕು ಎಂದಿದ್ದಾರೆ. ಪ್ರಕರಣದಲ್ಲಿ ನಟ ದರ್ಶನ್ ಅವರು ಮೃತ ರೇಣುಕಾ ಸ್ವಾಮಿಗೆ ಹೊಡೆದಿದ್ದಾರೆ, ಹೊಡೆಸಿದ್ದಾರೆ, ಹೊಡೆಯಿರಿ ಎಂದು ಹೇಳಿದ್ದಾರೆ ಎಂದರೇ ಅವರು ಶಿಕ್ಷೆಗೆ ಅರ್ಹರು ಆಗುತ್ತಾರೆ ಎಂದು ಭಾವನಾ ತಿಳಿಸಿದರು. ಇದು ಆಗಬಾರದು. ದರ್ಶನ್ ಆಗಲಿ ಅಥವಾ ಬೇರೆ ಯಾರೇ ಆಗಲಿ ಅವರಿಗೆ ಪ್ರಾಣ ತೆಗೆಯಲು ಯಾವ ಹಕ್ಕು ಇದೆ ಎಂದು ಪ್ರಶ್ನೆ ಮಾಡಿದ್ದಾರೆ.

ಸದ್ಯ ಆರೋಪಿಗಳಿಗೆ ಶಿಕ್ಷೆಯಾಗಬೇಕೆಂದೆ ಎಲ್ಲರ ಒತ್ತಾಯವಾಗಿದೆ. ರೇಣುಕಾ ಸ್ವಾಮಿಯನ್ನು ದರ್ಶನ್ ಸ್ನೇಹಿತರು ಮನಸ್ಸೋ ಇಚ್ಚೇ ತಳಿಸಿದ್ದಾರೆ. ದೇಹದ ಮೇಲೆ ಸಿಕ್ಕ ಸಿಕ್ಕ ಕಡೆ ಗಾಯ ಮಾಡಿದ್ದಾರೆ. ಮುಖಕ್ಕು ಜೋರಾಗಿ ಗುದ್ದಿದ್ದಾರೆ. ವಿಕೃತವಾಗಿ ಕೊಂದಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment